Advertisement

ಧ್ರುವ ಸರ್ಜಾ ಮುಂದಿನ ಚಿತ್ರಕ್ಕೆ ಜೋಗಿ ಪ್ರೇಮ್ ಆ್ಯಕ್ಷನ್ ಕಟ್ ?

05:14 PM Aug 02, 2021 | Team Udayavani |

ಬೆಂಗಳೂರು: ನಿರ್ದೇಶಕ ಜೋಗಿ ಪ್ರೇಮ್ ಸದ್ಯ ‘ಏಕ್ ಲವ್ ಯಾ’ ಸಿನಿಮಾದಲ್ಲಿ ಬ್ಯುಝಿ ಆಗಿದ್ದಾರೆ. ಈ ಚಿತ್ರದ ಕೆಲಸ ಬಹುತೇಕ ಮುಕ್ತಾಯದ ಹಂತಕ್ಕೆ ತಲುಪಿದೆ. ಏಕ್ ಲವ್ ಯಾ ತೆರೆಗೆ ಬರುವ ಮುನ್ನವೆ ಮತ್ತೊಂದು ಬಿಗ್ ಸಿನಿಮಾ ಕೈಗೆತ್ತಿಕೊಳ್ಳಲಿದ್ದಾರಂತೆ ಪ್ರೇಮ್.

Advertisement

ಹೌದು, ಮಾಸ್ ಕಮರ್ಷಿಯಲ್ ಎಂಟರ್ಟೈನ್ ಮೆಂಟ್ ಸಿನಿಮಾಗಾಗಿ ಪ್ರೇಮ್ ಮತ್ತು ಧ್ರುವ ಪ್ಲಾನ್ ಮಾಡುತ್ತಿದ್ದಾರಂತೆ. ಎಲ್ಲವೂ ಅಂದುಕೊಂಡಂತೆ ಆದರೆ ಜನಪ್ರಿಯವಾಗಿರುವ ಪ್ರೊಡಕ್ಷನ್ ಹೌಸ್ ಒಂದು ಈ ಇಬ್ಬರ ಸಿನಿಮಾ ನಿರ್ಮಾಣ ಮಾಡಲಿದೆ.

ಇತ್ತ ಧ್ರುವ ಸರ್ಜಾ ಅವರೂ ಎಪಿ ಅರ್ಜುನ್ ನಿರ್ದೇಶನದ ಸಿನಿಮಾದಲ್ಲಿ ಅಭಿನಯಿಸಲಿದ್ದು, ಈ ಚಿತ್ರದ ಶೂಟಿಂಗ್ ಆರಂಭಕ್ಕೆ ಸಿದ್ಧತೆ ನಡೆಯುತ್ತಿದೆ.  ಈ ಸಿನಿಮಾದ ಮೂಹೂರ್ತ ಆಗಸ್ಟ್ 15 ರಂದು ನೆರವೇರಲಿದೆ. ಜಗ್ಗುದಾದಾ ನಿರ್ದೇಶಕ ರಾಘವೇಂದ್ರ ಹೆಗ್ಡೆ ನಿರ್ದೇಶನದ ಮತ್ತೊಂದು ಸಿನಿಮಾಗೂ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಎ ಹರ್ಷ ಜೊತೆಗೂ ಸಿನಿಮಾ ತಯಾರಿ ನಡೆಯುತ್ತಿದೆ.

ಇನ್ನು ಜೋಗಿ ಪ್ರೇಮ್ ಅವರು ಏಕ್ ಲವ್ ಯಾ ಸಿನಿಮಾ ಮೂಲಕ ತಮ್ಮ ಬಾಮೈದುನ ರಾಣಾ ಅವರನ್ನು ಕನ್ನಡ ಚಿತ್ರರಂಗಕ್ಕೆ ಪರಿಚಯಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ರಚಿತಾ ರಾಮ್ ಮತ್ತು ರೇಷ್ಮಾ ನಾಣಯ್ಯ ನಾಯಕಿಯರಾಗಿ ಅಭಿನಯಿಸಿದ್ದಾರೆ. ರಕ್ಷಿತಾ ಪ್ರೇಮ್ ಅವರೇ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next