ಬೆಂಗಳೂರು : ಖ್ಯಾತ ಚಿತ್ರ ನಿರ್ದೇಶಕ, ನಿರ್ಮಾಪಕ, ನಟ ಎಸ್. ನಾರಾಯಣ್ ಅವರು ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಬಯಸಿ ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಅರ್ಜಿ ಸಲ್ಲಿಸಿದ್ದಾರೆ.
ರಾಜಾಜಿನಗರ ಸದ್ಯ ಬಿಜೆಪಿಯ ಭದ್ರ ಕೋಟೆ ಎನ್ನುವ ಸ್ಥಿತಿಯಿದ್ದು, ಮಾಜಿ ಸಚಿವ ಎಸ್. ಸುರೇಶ್ ಕುಮಾರ್ ಅವರು ಪ್ರತಿನಿಧಿಸುತ್ತಿದ್ದಾರೆ. 2008 ರಿಂದ ನಿರಂತರವಾಗಿ ಮೂರು ಬಾರಿ ಸುರೇಶ್ ಕುಮಾರ್ ಅವರು ಕ್ಷೇತ್ರದಲ್ಲಿ ಜಯ ಸಾಧಿಸಿದ್ದಾರೆ. 2018 ರಲ್ಲಿ ಜಿ. ಪದ್ಮಾವತಿ ಅವರು ಸುರೇಶ್ ಕುಮಾರ್ ವಿರುದ್ದ ಸೋಲು ಅನುಭವಿಸಿದ್ದರು.
ಮಾರ್ಚ್ ತಿಂಗಳಿನಲ್ಲಿ ಎಸ್.ನಾರಾಯಣ್ ಅವರು ತಮ್ಮ ಪುತ್ರ ನಟ ಪಂಕಜ್ ನಾರಾಯಣ್ ಜತೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದರು.