Advertisement

ಜರ್ಮನಿ ಚಿತ್ರೋತ್ಸವದಲ್ಲಿ ‘ಇಲ್ಲಿರಲಾರೆ ಅಲ್ಲಿಗೆ ಹೋಗಲಾರೆ’ಚಿತ್ರಕ್ಕೆ ಪ್ರಶಸ್ತಿ

03:54 PM Aug 13, 2021 | Team Udayavani |

ಗಿರೀಶ ಕಾಸರವಳ್ಳಿ ನಿರ್ದೇಶನದ “ಇಲ್ಲಿರಲಾರೆ ಅಲ್ಲಿಗೆ ಹೋಗಲಾರೆ’ ಚಿತ್ರಕ್ಕೆ ಜರ್ಮನಿಯ ಸ್ಟುಟ್‌ ಗಾರ್ಟ್‌ ಚಿತ್ರೋತ್ಸವದಲ್ಲಿ ಶ್ರೇಷ್ಠ ನಿರ್ದೇಶಕ ಪ್ರಶಸ್ತಿ (ಡೈರೆಕ್ಟರ್ಸ್‌ ವಿಷನ್‌ ಅವಾರ್ಡ್‌) ದೊರೆತಿದೆ.

Advertisement

“ಇಲ್ಲಿರಲಾರೆ ಅಲ್ಲಿಗೆ ಹೋಗಲಾರೆ’ ಚಿತ್ರವೂ ಜಯಂತ್‌ ಕಾಯ್ಕಿಣಿಯವರ “ಹಾಲಿನ ಮೀಸೆ’ ಕಥೆಯನ್ನು ಆಧರಿಸಿದ್ದು. ಆ ಕಥೆಯಲ್ಲಿ ಬರುವ ಪಾತ್ರವೊಂದನ್ನು ಬೆಳೆಸಿ ಸಮಕಾಲೀನ ಸಾಮಾಜಿಕ ಜ್ವಲಂತ ದ್ವಂದ್ವವನ್ನು ಚಿತ್ರದಲ್ಲಿ ಅಳವಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ:‘ಮರೆಯದೇ ಕ್ಷಮಿಸು’…ಹಾಡಿನ ಸಾಲು ಟೈಟಲ್‌ ಆಯ್ತು!

ದಾಸಶ್ರೇಷ್ಠ ಪುರಂದರದಾಸರ ಹಾಡೊಂದರ ಶೀರ್ಷಿಕೆ “ಇಲ್ಲಿರಲಾರೆ ಅಲ್ಲಿಗೆ ಹೋಗಲಾರೆ’ ಈ ದ್ವಂದ್ವವನ್ನು ಅತ್ಯಂತ ಮಾರ್ಮಿಕವಾಗಿ ಸೂಚಿಸುತ್ತದೆ.  ಸುಖವನ್ನು ಅರಸುತ್ತಾ ಹೋಗುವ ಈ ಕಾಲದ ನಮ್ಮ ಪಯಣ ಮನಶಾಂತಿಗೆ ಎರವಾಗುತ್ತಿದೆಯೇ ಅನ್ನುವ ಈ ದಾಸರ ಪದದಲ್ಲಿ ವ್ಯಕ್ತವಾಗುವ ಆತಂಕವೂ ಚಿತ್ರದ ಸತ್ವವಾಗಿದೆ

Advertisement

Udayavani is now on Telegram. Click here to join our channel and stay updated with the latest news.

Next