Advertisement
ಈ ಪ್ರದೇಶ ತ್ಯಾಜ್ಯ ಕೊಂಪೆಯಾಗುತ್ತಿರುವ ಬಗ್ಗೆ ಉದಯವಾಣಿ ಈಗಾಗಲೇ ವಿಸ್ತೃತ ಸರಣಿ ವರದಿ ಪ್ರಕಟಿಸಿತ್ತು. ಮಳೆಗಾಲ ಮುಗಿಯುತ್ತಿದ್ದು ಮಣಿಪಾಲ ಪರಿಸರದ ಕಟ್ಟಡ, ಮನೆಗಳ ಕೊಳಚೆ ನೀರು ಮಣ್ಣಪಳ್ಳ ಒಡಲು ಸೇರುತ್ತಿರುವುದು ಆತಂಕಕಾರಿಯಾಗಿದೆ. ಪ್ರಾಕೃತಿಕವಾಗಿ ನಿರ್ಮಾಣಗೊಂಡ ದೊಡ್ಡ ಕೆರೆಯನ್ನು ಈ ಹಿಂದೆ ನಗರಾಭಿವೃದ್ಧಿ ಪ್ರಾಧಿಕಾರ ಅಭಿವೃದ್ಧಿ ಪಡಿಸಿತ್ತು. ಕೆರೆಯಲ್ಲಿ ವರ್ಷಪೂರ್ತಿ ಇರುವ ನೀರು ಕಣ್ಮನ ಸೆಳೆಯುತ್ತದೆ. ಮಣಿಪಾಲ, ಉಡುಪಿ ಸುತ್ತಮುತ್ತಲಿನ ಜನಕ್ಕೆ ಇಲ್ಲಿನ ವಾಯು ವಿಹಾರ ಅಚ್ಚುಮೆಚ್ಚು.
Related Articles
Advertisement
ಮಣ್ಣಪಳ್ಳ ಅಭಿವೃದ್ಧಿಗೆ ಯೋಜನೆ
ಜಿಲ್ಲಾಡಳಿತ, ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಅಭಿವೃದ್ಧಿ ಸಮಿತಿ ರಚನೆಯಾಗಿದ್ದು, ಹಲವು ವರ್ಷಗಳಿಂದ ಪಾಳು ಬಿದ್ದಂತಿರುವ ಮಣ್ಣಪಳ್ಳ ಕೆರೆಗೆ ಪುನಶ್ಚೇತನ ನೀಡಲು ಕ್ರಮವಹಿಸಲಾಗುತ್ತಿದೆ. ಶಾಸಕರು, ಜಿಲ್ಲಾಧಿಕಾರಿಗಳು ಈ ಬಗ್ಗೆ ಯೋಜನೆ ರೂಪಿಸಿದ್ದು, ಮಣ್ಣಪಳ್ಳ ಪರಿಸರಕ್ಕೆ ದಕ್ಕೆ ಬಾರದಂತೆ ಸ್ವತ್ಛತೆ, ನಿರ್ವಹಣೆ ಮತ್ತು ವಿವಿಧ ಚಟುವಟಿಕೆಗಳ ಮೂಲಕ ಪ್ರವಾಸೋದ್ಯಮವಾಗಿ ಮಣ್ಣಪಳ್ಳ ಅಭಿವೃದ್ಧಿಪಡಿಸುವ ಬಗ್ಗೆ ಯೋಜನೆ ರೂಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪರ್ಯಾಯ ಕ್ರಮ: ಮಣಿಪಾಲದಲ್ಲಿ ಯುಜಿಡಿ ವ್ಯವಸ್ಥೆ ಸರಿಯಾಗಿ ರೂಪುಗೊಳ್ಳದ ಕಾರಣ ಈ ಸಮಸ್ಯೆ ಎದುರಾಗುತ್ತಿದೆ. ಮಣ್ಣಪಳ್ಳ ಕೆರೆಗೆ ಮಳೆ ನೀರು ಹರಿಯುವ ತೋಡಿನಲ್ಲಿ ತ್ಯಾಜ್ಯನೀರು ಮತ್ತು ತ್ಯಾಜ್ಯ ಸೇರುತ್ತಿರುವುದನ್ನು ತಪ್ಪಿಸಲು ಪರ್ಯಾಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಈ ಬಗ್ಗೆ ಮಣ್ಣಪಳ್ಳ ಅಭಿವೃದ್ಧಿ ಸಂಬಂಧಿಸಿ ನಡೆದಸಭೆಯಲ್ಲಿ ಶಾಸಕರು ಮತ್ತು ಜಿಲ್ಲಾಧಿಕಾರಿಯವರ ಗಮನಕ್ಕೆ ಈ ವಿಷಯವನ್ನು ಪ್ರಸ್ತಾಪಿಸಿದ್ದೇನೆ. ಮಣ್ಣಪಳ್ಳ ಅಭಿವೃದ್ಧಿ ಯೋಜನೆ ಅನುಷ್ಠಾನದಲ್ಲಿ ಮೊದಲ ಆದ್ಯತೆಯಾಗಿ ಈ ಸಮಸ್ಯೆಪರಿಗಣಿಸಲಾಗುವುದು. –ಕಲ್ಪನಾ ಸುಧಾಮ, ನಗರಸಭೆ ಸದಸ್ಯರು