Advertisement
ವಿದ್ಯುತ್ ಕೊರತೆ ಇಲ್ಲಮೆಸ್ಕಾಂ ತನ್ನ ಗ್ರಾಹಕರಿಗೆ ಸಾಕಾಗುವಷ್ಟು ಪ್ರಮಾಣದಲ್ಲಿ ವಿದ್ಯುತ್ ಹೊಂದಿದ್ದು ಯಾವುದೇ ರೀತಿಯ ಕೊರತೆ ಈ ಬಾರಿ ಇಲ್ಲ ಎಂದು ಸ್ಪಷ್ಟಪಡಿಸಿದ ಅವರು ಮುಂದಿನ ದಿನಗಳಲ್ಲಿ ಮೂಲ್ಕಿ ವಿಭಾಗದ ಗ್ರಾಹಕರಿಗೆ ಯಾವುದೇ ಅಡೆ ತಡೆ ಇಲ್ಲದೆ ವಿದ್ಯುತ್ ಒದಗಿಸಲು ಎಲ್ಲ ರೀತಿಯ ಕ್ರಮ ತೆಗೆದುಕೊಳ್ಳಲಾಗಿದೆ ಎಂದರು.
8 ವರ್ಷಗಳ ಹಿಂದೆ ನಿರ್ಮಿಸಲು ಉದ್ದೇಶಿಸಲಾಗಿದ್ದ 110 ಕೆ.ವಿ. ಮೂಲ್ಕಿ ವಿದ್ಯುತ್ ವಿತರಣೆ ಕೇಂದ್ರದ ಕಾಮಗಾರಿ ಮುಂದಿನ ಒಂದು ವರ್ಷದೊಳಗೆ ಪೂರ್ಣಗೊಳ್ಳಲಿದೆ. ಈಗಾಗಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು ಕಾಮಗಾರಿ ಆರಂಭಿಸುವ ಹಂತದಲ್ಲಿದೆ ಎಂದರು. ಮಂಗಳೂರಿನ ವಲಯದ ಎಕ್ಸಿಕ್ಯೂಟಿವ್ ಎಂಜಿನಿಯರ್ ಸತೀಶ್ಚಂದ್ರ ಅವರು ಇಲಾಖೆಯ ಕುಂದು ಕೊರತೆಗಳ ಬಗ್ಗೆ ಮಾಹಿತಿ ನೀಡಿದರು. ಗೆಲ್ಲು ತೆರವಿಗೆ ಸೂಚನೆ
ವಿದ್ಯುತ್ ತಂತಿಗಳಿಗೆ ತಾಗುತ್ತಿರುವ ಮರ ಗಿಡಗಳ ಗೆಲ್ಲುಗಳನ್ನು ತತ್‌ಕ್ಷಣದಿಂದ ಕಡಿದು ತೆರವುಗೊಳಿಸುವ ಮೂಲಕ ಯಾವುದೇ ತೊಂದರೆ ರಹಿತ ಸಂಪರ್ಕ ಒದಗಿಸುವಲ್ಲಿ ಎಸ್.ಇ. ಮಂಜಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದರು. ಮೂಲ್ಕಿ ಕಾರ್ನಾಡು ಕೈಗಾರಿಕಾ ಪ್ರದೇಶ ಉದ್ಯಮಿಗಳ ಸಂಘದ ಅಧ್ಯಕ್ಷ ಜಯ ಎನ್.ಶೆಟ್ಟಿ ಮತ್ತು ಕಾರ್ಯದರ್ಶಿ ಪ್ರಶಾಂತ್ ಕಾಂಚನ್ ಕೆಲವೊಂದು ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದರು.
Related Articles
Advertisement
ಸಿಬಂದಿ ನೇಮಿಸಿಬಿಲ್ ಪಾವತಿ ಕೌಂಟರ್‌ನಲ್ಲಿ ಹೆಚ್ಚಿನ ಸಿಬಂದಿಯನ್ನು ನಿಯೋಜಿಸಿ ಗಂಟೆ ಗಟ್ಟಲೆ ಸರತಿ ಸಾಲಿನಲ್ಲಿ ಕಾಯುವುದನ್ನು ತಪ್ಪಿಸಿ ಎಂದು ಗ್ರಾಹಕರು ಒತ್ತಾಯಿಸಿದರು. ಈ ಬಗ್ಗೆ ಇಲಾಖೆಯ ಅಧಿಕಾರಿಗಳ ಜತೆಗೆ ಮೂಲ್ಕಿ ಉಪ ವಿಭಾಗಕ್ಕೆ ಬಂದು ಗ್ರಾಹಕರ ಸಮಸ್ಯೆಗಳಿಗೆ ಪರಿಹಾರ ಸೂಚಿಸುವ ಕಾರ್ಯಕ್ರಮವನ್ನು ನಡೆಸುವುದಾಗಿ ಅಧಿಕಾರಿಗಳು ತಿಳಿಸಿದರು.