Advertisement
ಭಾನುವಾರವೇ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದ ಬೊಮ್ಮಾಯಿ ಅವರನ್ನು ಸೋಮವಾರ ಭೇಟಿ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಜಿ.ವಿ. ರಾಜೇಶ್, ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್, ಅಶ್ವತ್ಥನಾರಾಯಣ, ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್ ಸೇರಿದಂತೆ ಇನ್ನಿತರರು ಆರೋಗ್ಯ ವಿಚಾರಿಸಿದರಲ್ಲದೆ, ಶೀಘ್ರ ಗುಣಮುಖರಾಗಿ ಪಕ್ಷದ ಚಟುವಟಿಕೆಯಲ್ಲಿ ತೊಡಗುವಂತೆ ಹಾರೈಸಿದರು.
ಕನಿಷ್ಠ 1 ತಿಂಗಳಾದರೂ ವಿಶ್ರಾಂತಿಯ ಅಗತ್ಯವಿದೆ ಎಂಬುದನ್ನು ವೈದ್ಯರು ಸಲಹೆ ಮಾಡಿದ್ದು, ಅಧಿವೇಶನದವರೆಗೆ ವಿಶ್ರಾಂತಿಯಲ್ಲಿರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.