Advertisement

ಅಕ್ರಮ ನೀರು ಬಳಕೆದಾರರ ವಿರುದ್ಧ ಶಿಸ್ತು ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

10:29 AM Jul 25, 2020 | Suhan S |

ಸಿಂಧನೂರು: ತುಂಗಭದ್ರಾ ಎಡದಂಡೆ ವ್ಯಾಪ್ತಿಯಲ್ಲಿ ಅಕ್ರಮವಾಗಿ ನೀರು ಬಳಕೆ ಮಾಡಿಕೊಳ್ಳುವವರ ವಿರುದ್ಧ ಯಾವುದೇ ಶಿಸ್ತು ಕ್ರಮ ತೆಗೆದುಕೊಳ್ಳಬೇಕು. ಶಿಸ್ತು ಕ್ರಮ ತೆಗೆದುಕೊಳ್ಳದ ಅಧಿಕಾರಿಗಳಿಗೆ ನೋಟೀಸ್‌ ಜಾರಿ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಆರ್‌. ವೆಂಕಟೇಶಕುಮಾರ ಎಚ್ಚರಿಸಿದರು.

Advertisement

ನಗರದ ಕಮ್ಮವಾರಿ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ನಡೆದ ರೈತರ ಹಾಗೂ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಅಕ್ರಮ ನೀರು ಬಳಕೆ ಮಾಡಿಕೊಳ್ಳುವವರಿಗೆ ಈಗಾಗಲೇ ನೋಟಿಸ್‌ ಜಾರಿ ಮಾಡಲಾಗಿದೆ. ಪುನಃ ಅದೇ ಕೆಲಸ ಯಾರಾದರೂ ಮಾಡಿದರೆ ಅಂಥವರ ಮೇಲೆ ಅಧಿಕಾರಿಗಳೇ ಶಿಸ್ತು ಕ್ರಮ ತೆಗೆದುಕೊಳ್ಳಬೇಕು. ಅಧಿಕಾರಿಗಳು ಯಾವುದೇ ಮುಲಾಜಿಗೆ ಬೀಳಬಾರದು. ಇಲ್ಲವಾದರೆ ನೀರು ಉಳಿಸಿಕೊಳ್ಳಲು ಕಷ್ಟವಾಗುತ್ತದೆ. ಅನಧಿಕೃತ ವಿದ್ಯುತ್‌ ಬಳಕೆದಾರರ ವಿರುದ್ಧವೂ ಕೇಸ್‌ ದಾಖಲಿಸಿ ಯಾರಿಗೂ ಅನ್ಯಾಯ ಆಗದಂತೆ ಸಾರ್ವಜನಿಕರು ಸಹಕರಿಸಬೇಕು. ಆಗ ಮಾತ್ರ ಎಲ್ಲರೂ ಒಗ್ಗಟಿನಿಂದ ಕೆಲಸ ಮಾಡಲು ಸಾಧ್ಯವಾಗುತ್ತದೆ ಎಂದರು

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಭೂ ಸುಧಾರಣೆ ಕಾಯ್ದೆ ರೈತರಿಗೆ ವರದಾನವಾಗಿದೆ. ಭೂ ಸುಧಾರಣೆ ಕಾಯ್ದೆ ಬಗ್ಗೆ ರೈತರಿಗೆ ಭಯ ಬೇಡ. ಅದರಿಂದ ರೈತರಿಗೆ ಅನುಕೂಲವಾಗಲಿದೆ. ಕಾರಟಗಿ ಬಾಗದ ರೈತರಿಗೆ ಹೆಚ್ಚು ಪರಿಹಾರ ನೀಡಿರಬಹುದು. ಆದರೆ ಅವರ ಕುಟುಂಬಸ್ಥರಿಗೆ ಸರ್ಕಾರಿ ನೌಕರಿ ಇಲ್ಲ. ಕಡಿಮೆ ಪರಿಹಾರ ಪಡೆದುಕೊಂಡ ನಿಮ್ಮ ಕುಟುಂಬದ ಸದಸ್ಯರೊಬ್ಬರಿಗೆ ಸರ್ಕಾರಿ ನೌಕರಿ ಸಿಗಲಿದೆ ಎಂದರು

ಸಹಾಯಕ ಆಯುಕ್ತ ರಾಜಶೇಖರ ಡಂಬಳ, ತಹಶೀಲ್ದಾರ್‌ ಮಂಜುನಾಥ ಭೋಗಾವತಿ, ರೈಲ್ವೆ ಇಲಾಖೆ ಅಧಿಕಾರಿ ಗುರುರಾಮ ಮೋಹನರಾವ್‌ ಸೇರಿದಂತೆ ನೀರಾವರಿ ಮತ್ತು ರೈಲ್ವೆ ಇಲಾಖೆ ಅಧಿಕಾರಿಗಳು ಹಾಗೂ ರೈತರು ಸಭೆಯಲ್ಲಿ ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next