ದಾವಣಗೆರೆ: ಜಿಲ್ಲೆಯಲ್ಲಿ ಅಪೌಷ್ಟಿಕತೆಯಿಂದ ಬಳಲುವ ಮಕ್ಕಳನ್ನು ಎನ್‌ಆರ್‌ಸಿ (ನ್ಯೂಟ್ರಿಶನ್ ರಿಹ್ಯಾಬಿಲಿಟೇಷನ್ ಸೆಂಟರ್) ಕೇಂದ್ರಗಳಿಗೆ ದಾಖಲು ಮಾಡಬೇಕು. ತಪ್ಪಿದಲ್ಲಿ ಸಂಬಂಧಿಸಿದ ಶಿಶು ಕಲ್ಯಾಣಾಧಿಕಾರಿ, ಅಧೀಕ್ಷಕರು ಮತ್ತು ವಿಷಯ ನಿರ್ವಾಹಕರ ಮೇಲೆ ಶಿಸ್ತಿನ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಎಚ್ಚರಿಕೆ ನೀಡಿದರು.
ಸೋಮವಾರ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಇಲಾಖೆಯ ವಿವಿಧ ಯೋಜನೆಗಳಾದ ಪೋಷಣ್ ಅಭಿಯಾನ ಯೋಜನೆ, ಕಿರುಸಾಲ ಯೋಜನೆ, ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣೆಕಾಯ್ದೆಯಡಿ ಜಿಲ್ಲಾ ಮಟ್ಟದ ಸಮನ್ವಯ ಸಭೆ, ಬಾಲ್ಯ ವಿವಾಹ ನಿಷೇಧ ಯೋಜನೆ, ಸ್ವಾಧಾರ ಯೋಜನೆಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿನ ತೀವ್ರ ಮತ್ತು ಸಾಧಾರಣ ಸೇರಿದಂತೆ ಒಟ್ಟು 225 ಅಪೌಷ್ಟಿಕ ಮಕ್ಕಳನ್ನು ಗುರುತಿಸಲಾಗಿದೆ.ಯಾವುದೇ ಮಗು ಅಪೌಷ್ಟಿಕತೆಯಿಂದಬಳಲಬಾರದೆಂದು ಸರ್ಕಾರ ಜಿಲ್ಲಾಸ್ಪತ್ರೆಯಲ್ಲಿ ಎನ್ ಆರ್‌ಸಿ ತೆರೆದಿದೆ. ಅಪೌಷ್ಟಿಕತೆಯಿಂದ ಬಳಲುವ ಮಕ್ಕಳಿಗೆ ಇದೊಂದು ವರದಾನವಾಗಿದ್ದು, ಮಕ್ಕಳನ್ನು ಎನ್‌ಆರ್‌ಸಿಗೆ ದಾಖಲಿಸಬೇಕು. ತಾಲೂಕುಗಳಲ್ಲಿ ಸಿಡಿಪಿಒಗಳು, ಅಧೀಕ್ಷಕರು, ವಿಷಯ ನಿರ್ವಾಹಕರು ಈ ಬಗ್ಗೆ ಗಮನ ಹರಿಸಿ, ಪೋಷಕರ ಮನವೊಲಿಸಿ ಈ ಮಕ್ಕಳನ್ನು ಕೇಂದ್ರಕ್ಕೆ ಸೇರಿಸಬೇಕು ಎಂದರು.
ಈ ಕುರಿತು, ತಾಲೂಕು ಶಿಶು ಕಲ್ಯಾಣಾಧಿಕಾರಿಗಳು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಉಪನಿರ್ದೇಶಕರು ಪ್ರತಿಕ್ರಿಯಿಸಿ ಪೋಷಕರು,ತಮ್ಮ ಮಕ್ಕಳನ್ನು ಕೇಂದ್ರಕ್ಕೆ ಸೇರಿಸಲು ಒಪ್ಪುತ್ತಿಲ್ಲ. ಏನಾದರೊಂದು ಕಾರಣ ಹೇಳುತ್ತಾರೆಂದರು.ಆಗ ಜಿಲ್ಲಾಧಿಕಾರಿಗಳು, ಸರ್ಕಾರ ಎಷ್ಟೆಲ್ಲ ಹಣ ಖರ್ಚು ಮಾಡಿ ಕೇಂದ್ರ ತೆರೆದಿದೆ. ಇದೊಂದುಮುಖ್ಯವಾದ ಯೋಜನೆಯಾಗಿದ್ದು, ಹೇಗಾದರೂ ಪೋಷಕರ ಮನವೊಲಿಸಿ ಮಕ್ಕಳನ್ನು ಎನ್‌ಆರ್‌ಸಿ ಕೇಂದ್ರಕ್ಕೆ ದಾಖಲಿಸಿ ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಉಪನಿರ್ದೇಶಕ ವಿಜಯಕುಮಾರ್ ಸಿಇಒ ಪದ್ಮಾಬಸವಂತಪ್ಪ ಮಾತನಾಡಿದರು. ಇದೇ ವೇಳೆ ಬಾಲ್ಯ ವಿವಾಹ ತಡೆಗೆ ಸಂಬಂಧಿಸಿದ ಕೈಪಿಡಿಯನ್ನು ಬಿಡುಗಡೆಗೊಳಿಸಲಾಯಿತು.
ಬಾಲ್ಯವಿವಾಹ ತಡೆಯಿರಿ…
2020-21 ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಒಟ್ಟು 62 ಬಾಲ್ಯ ವಿವಾಹ ಪ್ರಕರಣ ದಾಖಲಾಗಿದ್ದು ಇದರಲ್ಲಿ 61 ಬಾಲ್ಯವಿವಾಹಗಳನ್ನು ತಡೆಯಲಾಗಿದೆ. ಒಂದುಬಾಲ್ಯ ವಿವಾಹ ನಡೆದಿದ್ದು ಎಫ್‌ಐಆರ್‌ದಾಖಲಿಸಲಾಗಿದೆ. ಕಳೆದ ಸಾಲಿಗೆಹೋಲಿಸಿದರೆ ಈ ಬಾರಿ ಬಾಲ್ಯ ವಿವಾಹ ಸಂಖ್ಯೆ ಹೆಚ್ಚಿದೆ. ಕೋವಿಡ್ ಹಿನ್ನೆಲೆಯಲ್ಲಿಶಾಲಾ-ಕಾಲೇಜು ಆರಂಭವಾಗಿಲ್ಲ ಎಂದುಎಷ್ಟೋ ಪೋಷಕರು ತಮ್ಮ ಮಕ್ಕಳನ್ನುಮದುವೆ ಮಾಡುತ್ತಿದ್ದಾರೆ. ಆದ್ದರಿಂದಬಾಲ್ಯ ವಿವಾಹ ತಡೆ ತಂಡ ಆದಷ್ಟುಸಕ್ರಿಯವಾಗಿ ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಸೂಚಿಸಿದರು.