Advertisement

ಶಿಸ್ತು, ನಾಯಕತ್ವ ಗುಣ ಬೆಳೆಸಿಕೊಳ್ಳಿ: ಎ.ಎನ್‌. ಪೂಜಾರ್‌

07:50 AM Aug 24, 2017 | Team Udayavani |

ಉಡುಪಿ: ಎನ್ನೆಸ್ಸೆಸ್‌ ವಿದ್ಯಾರ್ಥಿಗಳು ಶಿಸ್ತು ಮತ್ತು ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ಎನ್ನೆಸ್ಸೆಸ್‌ ಬೆಂಗಳೂರು ಪ್ರಾದೇಶಿಕ ಕೇಂದ್ರದ ನಿರ್ದೇಶಕ ಎ.ಎನ್‌. ಪೂಜಾರ್‌ ಅವರು ಹೇಳಿದರು.

Advertisement

ಜಿಲ್ಲಾಡಳಿತ, ಜಿ.ಪಂ., ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ರಾಷ್ಟ್ರೀಯ ಸೇವಾ ಯೋಜನಾ ಕೋಶ, ಡಾ| ಜಿ. ಶಂಕರ್‌ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಲಯನ್ಸ್‌ ಕ್ಲಬ್‌ ಪರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ಆ. 22ರಂದು ಅಜ್ಜರಕಾಡು ಪುರಭವನದಲ್ಲಿ ನಡೆದ ರಾಜ್ಯಮಟ್ಟದ ರಾಷ್ಟ್ರೀಯ ಸೇವಾ ಯೋಜನೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಎನ್ನೆಸ್ಸೆಸ್‌ನಲ್ಲಿ ಶಿಸ್ತಿಗೆ ಪ್ರಾಮುಖ್ಯ ನೀಡಲಾಗುತ್ತಿದೆ. ವಿದ್ಯಾರ್ಥಿಗಳು ಸೇವಾ ಮನೋಭಾವ ಮತ್ತು ಶಿಸ್ತಿನಿಂದ ಸಮಾಜ ಸೇವಾ ಕಾರ್ಯಗಳಲ್ಲಿ  ತೊಡಗಿಕೊಳ್ಳ ಬೇಕು. ದೇಶದ ಸಂಸ್ಕೃತಿಯನ್ನು ಬೆಳೆಸಿ ಸಾಂಸ್ಕೃತಿಕ ರಾಯಭಾರಿಗಳಾಗಬೇಕು. ನಿರ್ದಿಷ್ಟ ಗುರಿ ಹೊಂದಿ ರಾಷ್ಟ್ರದ ಅಭಿವೃದ್ದಿಗೆ ಶ್ರಮಿಸಬೇಕು ಎಂದು ಪೂಜಾರ್‌ ತಿಳಿಸಿದರು.
ಜಿ.ಪಂ. ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ರಾಜ್ಯ ಎನ್ನೆಸ್ಸೆಸ್‌ ಅಧಿಕಾರಿ ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಕೋಶದ ಪದನಿಮಿತ್ತ ಸರಕಾರದ ಜಂಟಿ ಕಾರ್ಯದರ್ಶಿ ಡಾ| ಗಣನಾಥ ಶೆಟ್ಟಿ ಎಕ್ಕಾರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ| ರೋಶನ್‌ ಕುಮಾರ್‌ ಶೆಟ್ಟಿ, ಡಾ| ಜಿ. ಶಂಕರ್‌ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಾಂಶುಪಾಲ ಜಗದೀಶ್‌ ರಾವ್‌,  ಪ್ರಾಧ್ಯಾಪಕ ಪ್ರೊ| ಪ್ರಕಾಶ್‌ ಕ್ರಮಧಾರಿ,  ಜಯಲಕ್ಷ್ಮೀ, ಲಯನ್ಸ್‌ ಕ್ಲಬ್‌ ಪರ್ಕಳದ ಅಧ್ಯಕ್ಷ ಹರೀಶ್‌ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next