ಚಿಕ್ಕಬಳ್ಳಾಪುರ: ಪೊಲೀಸ್ ಸಿಬ್ಬಂದಿ ಕರ್ತವ್ಯದ ಜತೆಗೆ ಆರೋಗ್ಯವನ್ನೂ ಕಾಪಾಡಿ ಕುಟುಂಬ ಸದಸ್ಯರ ಬಗ್ಗೆ ಹೆಚ್ಚಿನ ಗಮನಹರಿಸಿ ಮಕ್ಕಳನ್ನು ಸತ್ಪ್ರಜೆಗಳನ್ನಾಗಿ ಮಾಡಬೇಕೆಂದು ನಿವೃತ್ತ ಪಿಎಸ್‌ಐ ನಾರಾಯಣಸ್ವಾಮಿ ತಿಳಿಸಿದರು.
ತಾಲೂಕಿನ ಅಣಕನೂರಿನ ಜಿಲ್ಲಾ ಪೊಲೀಸ್ ಕಚೇರಿ ಕವಾಯತು ಮೈದಾನ ದಲ್ಲಿ ಪೊಲೀಸ್ ಧ್ವಜ ದಿನಾಚರಣೆ ಅಂಗ ವಾಗಿ ಮುಖ್ಯ ಅತಿಥಿಯಾಗಿ ಭಾಗ ವಹಿಸಿ ಗೌರವ ರಕ್ಷೆ ಸ್ವೀಕರಿಸಿ ಮಾತನಾಡಿದರು.
ಪೊಲೀಸ್ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುವ ಪ್ರತಿಯೊಬ್ಬರೂ ಸಮಯ ಪ್ರಜ್ಞೆ ಬೆಳೆಸಿಕೊಂಡು ಶಿಸ್ತು ಮೈಗೂಡಿಸಿ ಕೊಂಡು ಹಿರಿಯ ಅಧಿಕಾರಿಗಳಿಗೆ ಗೌರ ವಿಸಿ ಕರ್ತವ್ಯ ನಿರ್ವಹಿಸಬೇಕೆಂದರು. ಕಾನೂನು ಸುವ್ಯವಸ್ಥೆ ಕಾಪಾಡಿ ಇಲಾಖೆ ಯನ್ನು ಜನಸ್ನೇಹಿ ಮಾಡಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಉತ್ತಮ ವಾಗಿ ಕಾರ್ಯನಿರ್ವಹಿಸುತ್ತಿದ್ದಾರೆಂದರು.
2019-20ನೇ ಸಾಲಿನಲ್ಲಿ ನಿವೃತ್ತಿಯಾದ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಯನ್ನು ಸನ್ಮಾನಿಸಲಾಯಿತು. ಎಸ್ಸೆಸ್ಸೆಲ್ಸಿ, ಪಿಯುಸಿ ಹಾಗೂ ಉನ್ನತ ವ್ಯಾಸಂಗ ಮಾಡಿ ಅಧಿಕ ಅಂಕಗಳಿಸುವ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಲಾ ಯಿತು. ಇಲಾಖೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದವರಿಗೆ ಎಸ್ಪಿ ಪ್ರಶಂಸನಾ ಪತ್ರ ವಿತರಿಸಿದರು.
ಎಸ್ಪಿಮಿಥುನ್‌ಕುಮಾರ್, ಡಿವೈಎಸ್ಪಿ ಕೆ.ರವಿಶಂಕರ್, ಚಿಂತಾಮಣಿ ಡಿವೈಎಸ್ಪಿ ಲಕ್ಷ್ಮಯ್ಯ, ಡಿಎಆರ್ ಡಿವೈಎಸ್ಪಿ ಮಂಜು ನಾಥ್, ವಿಶೇಷ ಆಹ್ವಾನಿತರಾಗಿ ನಿವೃತ್ತ ಸಹಾಯಕ ಆಡಳಿತಾಧಿಕಾರಿ ಡಿ.ಪಾಂಡು ರಂಗ, ನಿವೃತ್ತ ಪೊಲೀಸ್ ಸಂಘದ ಅಧ್ಯಕ್ಷ ಪಿಎಸ್‌ಐ ಯಲ್ಲಪ್ಪ, ಚಿಕ್ಕಬಳ್ಳಾಪುರ ಸಿಪಿಐ ಪ್ರಶಾಂತ್, ಜಿಲ್ಲೆಯ ಎಲ್ಲಾ ಆರಕ್ಷಕ ವೃತ್ತ ನಿರೀಕ್ಷಕರು, ಆರಕ್ಷಕ ಉಪ ನಿರೀಕ್ಷಕರು, ಅಧಿಕಾರಿಗಳು ಇದ್ದರು.