Advertisement
ಸಂತ ಫಿಲೋಮಿನಾ ಪದವಿಪೂರ್ವ ಕಾಲೇಜಿನ 2018-19ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆ ನೆರವೇರಿಸಿದ ಅವರು, ಹೊಸ ಪ್ರಯೋಗಾಲಯದ ಶಿಲಾನ್ಯಾಸದ ಆಶೀರ್ವಚನ ನೀಡಿದರು. ಶೈಕ್ಷಣಿಕ ಸಾಧನೆಯಂತೆ ಜೀವನ ಮೌಲ್ಯಗಳನ್ನು ಅರಿತುಕೊಂಡು ಬೆಳೆಸಿಕೊಂಡು ಹೋಗುವುದು ಅಗತ್ಯ. ವಿದ್ಯಾರ್ಥಿ ಜೀವನದಲ್ಲಿ ಪರಿಶ್ರಮ, ಸಿದ್ಧತೆಗಳೊಂದಿಗೆ ಅವಕಾಶಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ವಿದ್ಯಾರ್ಥಿ ಸಂಘದಂತಹ ನಾಯಕತ್ವ ಗುಣ ಬೆಳೆಸಿಕೊಳ್ಳುವ ಅವಕಾಶಗಳನ್ನು ಬಳಸಿಕೊಂಡು ಸಮಾಜದಲ್ಲಿ ಬೆಳಕಾಗಿ ಗುರುತಿಸಿಕೊಳ್ಳಬೇಕು ಎಂದರು.
Related Articles
Advertisement
ಸಂತ ಫಿಲೋಮಿನ ಪದವಿ ಕಾಲೇಜಿನ ಪ್ರಾಂಶುಪಾಲ ಲಿಯೋ ನೊರೊನ್ಹಾ ಶುಭಹಾರೈಸಿದರು. ರಕ್ಷಕ – ಶಿಕ್ಷಕ ಸಂಘದ ಕುಂಬ್ರ ದುರ್ಗಾಪ್ರಸಾದ್ ರೈ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜೈರಾಜ್ ಭಂಡಾರಿ, ಮಾಯಿದೆ ದೇವುಸ್ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಜೆ.ಪಿ. ರೋಡ್ರಿಗಸ್, ವಿದ್ಯಾರ್ಥಿ ಸಂಘದ ಅಧ್ಯಕ್ಷ ಆಕಾಶ್ ಸಿ. ಭಟ್, ಕಾರ್ಯದರ್ಶಿ ಶ್ರೀದೇವಿ ಕೆ., ಜತೆ ಕಾರ್ಯದರ್ಶಿ ಡೆಲ್ಮಾ ಲೋರಾ ಡಿ’ಕುನ್ಹಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ.ಪೂ. ಕಾಲೇಜಿನ ಪ್ರಾಂಶುಪಾಲ ವಂ| ವಿಜಯ್ ಲೋಬೊ ಸ್ವಾಗತಿಸಿ, ವಿದ್ಯಾರ್ಥಿ ಸಂಘದ ಅಧ್ಯಕ್ಷ ಆಕಾಶ್ ಸಿ. ಭಟ್ ವಂದಿಸಿದರು. ಉಪನ್ಯಾಸಕ ರಾಹುಲ್ ಕಾರ್ಯಕ್ರಮ ನಿರ್ವಹಿಸಿದರು.
ಶಿಲಾನ್ಯಾಸಅರುವತ್ತರ ವರ್ಷಾಚರಣೆ ಸಂಭ್ರಮದಲ್ಲಿರುವ ಕಾಲೇಜಿನಲ್ಲಿ ಹೊಸ ಪ್ರಯೋಗಾಲಯ ನಿರ್ಮಾಣಕ್ಕೆ ಬಿಷಪ್ ವಂ| ಡಾ| ಅಲೋಶಿಯಸ್ ಪೌಲ್ ಡಿ’ಸೋಜಾ ಅವರು ಪೂಜಾ ವಿಧಿ ನೆರವೇರಿಸಿ ಶಿಲಾನ್ಯಾಸ ನೆರವೇರಿಸಿದರು.ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ 2018-19ನೇ ಸಾಲಿನ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಹಾಗೂ ವಿವಿಧ ವಿಭಾಗಗಳ ಸಂಘಗಳ ಪದಾಧಿಕಾರಿಗಳಿಗೆ ಪ್ರತಿಜ್ಞಾ ವಿಧಿಯನ್ನು ಪ್ರಾಂಶುಪಾಲ ವಂ| ವಿಜಯ್ ಲೋಬೋ ಬೋಧಿಸಿದರು. ಸಮ್ಮಾನ
ಹೊಸದಿಲ್ಲಿಯಲ್ಲಿ ನಡೆದ 2017 -18ನೇ ಸಾಲಿನ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಭಾಗವಹಿಸಿದ ಹಾಗೂ ಎನ್‌ಸಿಸಿ ಸಾಧಕ ವಿದ್ಯಾರ್ಥಿ ಜೋವಿನ್ ಜೋಸೆಫ್ ಅವರನ್ನು ಬಿಷಪ್ ಸಮ್ಮಾನಿಸಿದರು. ಶೈಕ್ಷಣಿಕ ವಿಚಾರಗಳಲ್ಲಿ ನಿರಂತರ ಪ್ರೋತ್ಸಾಹ ನೀಡುವ ಬಿಷಪ್ ವಂ| ಡಾ| ಅಲೋಶಿಯಸ್ ಪೌಲ್ ಡಿ’ಸೋಜಾ ಅವರನ್ನು ವಿದ್ಯಾಸಂಸ್ಥೆಯ ವತಿಯಿಂದ ಗೌರವಿಸಲಾಯಿತು.