Discomfort: ಬಿಜೆಪಿ ತೊರೆಯುವರೇ ಹಾಸನ ಕ್ಷೇತ್ರದ ಮಾಜಿ ಶಾಸಕ ಪ್ರೀತಂ ಗೌಡ?
ದೇವೇಗೌಡರ ಕುಟುಂಬದ ಕಡು ವಿರೋಧಿಯಾಗಿರುವ ಬಿಜೆಪಿ ಯುವ ಮುಖಂಡ, ಮುಂದಿನ ನಡೆ ಏನು?
Team Udayavani, Jan 15, 2025, 9:48 PM IST
ಹಾಸನ: ಹಲವು ವರ್ಷಗಳಿಂದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬದ ವಿರುದ್ಧ ಹೋರಾಡಿ ಚುನಾವಣ ರಾಜಕೀಯ ಮಾಡುತ್ತ ಕಡು ವಿರೋಧಿಯಾಗಿರುವ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ, ಮಾಜಿ ಶಾಸಕ ಪ್ರೀತಂ ಗೌಡ ಕಾಂಗ್ರೆಸ್ ಸೇರ್ಪಡೆ ಆಗುತ್ತಾರೆಂಬ ವದಂತಿ ಹರಡಿದೆ.
2018ರಲ್ಲಿ ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಪ್ರೀತಂಗೌಡ ಗೆಲುವು ಸಾಧಿಸಿದ್ದರು. ಆದರೆ, 2023ರ ಚುನಾವಣೆಯಲ್ಲಿ ಜೆಡಿಎಸ್‌ನ ಸ್ವರೂಪ್ ಪ್ರಕಾಶ್ ಎದುರು ಪರಾಭವಗೊಂಡಿದ್ದರು. ಆ ಬಳಿಕ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿಯಾದರೂ ಹಾಸನ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿದ್ದ ಪ್ರಜ್ವಲ್ ರೇವಣ್ಣ ಪರ ಪ್ರಚಾರ ಕೈಗೊಳ್ಳದೇ ಪ್ರೀತಂಗೌಡ ಅಭ್ಯರ್ಥಿಗೆ ಸಹಕರಿಸಲಿಲ್ಲ ಎಂಬುದು ಜನಜನಿತ.
ಕಾಂಗ್ರೆಸ್ ಜೊತೆ ಉತ್ತಮ ಒಡನಾಟ:
ಈ ಮಧ್ಯೆ ಡಿಸಿಎಂ ಡಿ.ಕೆ.ಶಿವಕುಮಾರ್, ಹಾಸನ ಸಂಸದ ಶ್ರೇಯಸ್ ಪಟೇಲ್ ಜೊತೆ ಉತ್ತಮ ಒಡನಾಟವಿಟ್ಟುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸೇರುವ ಸಾಧ್ಯತೆಯ ಸುದ್ದಿಗಳು ಆಗಿಂದಾಗ್ಗೆ ಹರಿದಾಡುತ್ತಿವೆ. ಇದಕ್ಕೆ ಕಾರಣ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರಿದರೆ 2028ರ ವಿಧಾನಸಭಾ ಚುನಾವಣೆಯಲ್ಲಿ ಹಾಸನ ಕ್ಷೇತ್ರ ಕೈತಪ್ಪುವ ಭೀತಿ ಉಂಟಾಗಿದ್ದರಿಂದ ಒಂದೆರೆಡು ವರ್ಷ ಬಿಜೆಪಿಯಲ್ಲೇ ಮುಂದುವರಿದು ಚುನಾವಣೆ ವರ್ಷವಿರುವಾಗ ನಿರ್ಧಾರ ತೆಗೆದುಕೊಳ್ಳಬಹುದು ಎನ್ನಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಅನುದಾನ ವಾಪಸ್ ಹೋದರೆ ಅಧಿಕಾರಿಗಳಿಂದ ವಸೂಲಿ: ಲಾಡ್ ಖಡಕ್ ಸೂಚನೆ
Mandya: ಮನೆ ಜಪ್ತಿ ಮಾಡಿದ ಮೈಕ್ರೋ ಫೈನಾನ್ಸ್ ಕಂಪನಿ; ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ
ಶರಣಾಗತಿಯತ್ತ ನಕ್ಸಲ್ ರವೀಂದ್ರನ ಚಿತ್ತ…! ನಕ್ಸಲರಿಂದ ಮುಕ್ತವಾಗುತ್ತಾ ಕರುನಾಡು?
Belagavi: ಬಾಣಂತಿ ಸಾವು ಪ್ರಕರಣ… ಶವಾಗಾರದ ಎದುರು ಕುಟುಂಬಸ್ಥರ ಪ್ರತಿಭಟನೆ
ಚಿನ್ನ ಕಸಿಯಲು ಬಂದ ದುಷ್ಕರ್ಮಿಯಿಂದ ಮಹಿಳೆಗೆ ರಾಡ್ ನಿಂದ ಹಲ್ಲೆ: ಆಸ್ಪತ್ರೆಗೆ ದಾಖಲು