Advertisement
ಪರಿಶಿಷ್ಟ ಜಾತಿ, ಪಂಗಡ ಹಾಗೂ ಹಿಂದುಳಿದ ವರ್ಗದವರಿಗೆ ಕೇಂದ್ರ ಸರ್ಕಾರ ವಿವಿಧ ಯೋಜನೆಗಳಲ್ಲಿ ನೀಡುವ ಸಾಲ ಸೌಲಭ್ಯ ಹಾಗೂ ಸಹಾಯಧನ ಅನುಷ್ಠಾನ ಸಂಬಂಧ ಎಲ್ಲ ಇಲಾಖೆ ಅಧಿಕಾರಿಗಳ ಜತೆಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಒಂದೇ ಗ್ರಾಮದ ಒಂದೇ ಸರ್ವೆ ನಂಬರ್‌ನಲ್ಲಿ ಸಾಮಾನ್ಯ ಹಾಗೂ ಹಿಂದುಳಿದ ವರ್ಗದವರು ಸಲ್ಲಿಸಿದ ಅರ್ಜಿ ಆಧರಿಸಿ ಭೂಮಂಜೂರು ಮಾಡಲಾಗಿದೆ. ಆದರೆ ದಲಿತರಿಗೆ ತಾರತಮ್ಯ ಮಾಡಲಾಗಿದೆ. ಮಂಜೂರು ದಾಖಲೆ, ಹಕ್ಕುಪತ್ರ ಪಡೆದ ದಲಿತರಿಗೆ ಜಮೀನಿನ ಹತ್ತಿರ ಹೋಗುವುದಕ್ಕೂ ಅವಕಾಶ ನೀಡಿಲ್ಲ. ಈ ತಾರತಮ್ಯದ ಬಗ್ಗೆ ಪ್ರಶ್ನೆ ಮಾಡಬೇಕಾಗಿದೆ ಎಂದು ಅಭಿಪ್ರಾಯಪಟ್ಟರು.
Related Articles
Advertisement
ಸಭೆ ನಡೆಸದಂತೆ ನೋಟಿಸ್ : ಗರಂ ಆದ ಸಚಿವಕೇಂದ್ರ ಪ್ರಾಯೋಜಿತ ಯೋಜನೆಗಳ ಅನುಷ್ಠಾನಕ್ಕಾಗಿ ವಿವಿಧ ಇಲಾಖೆಗಳ ಜತೆಗೆ ಪ್ರಗತಿ ಪರಿಶೀಲನೆ ಸಭೆ ನಡೆಸುವುದಕ್ಕೆ ಅವಕಾಶ ಇಲ್ಲವೆಂದು ನೋಟಿಸ್ ನೀಡುವ ಮೂಲಕ ರಾಜ್ಯ ಸರ್ಕಾರ ಸಭೆ ನಡೆಸುವುದಕ್ಕೆ ಅಡ್ಡಿಪಡಿಸಿದೆ ಎಂದು ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ನನಗೆ ನೋಟಿಸ್ ನೀಡಿ ಆಕ್ಷೇಪ ವ್ಯಕ್ತಪಡಿಸಿದ್ದರು. ಜಿಲ್ಲಾ ಮಟ್ಟದ ಸಭೆ ನಡೆಸಿ ಆದರೆ ರಾಜ್ಯಮಟ್ಟದ ಸಭೆ ನಡೆಸುವುದು ಬೇಡ ಎಂದರೆ ಏನರ್ಥ ? ಈ ಬಗ್ಗೆ ನಾನು ಆಕ್ಷೇಪ ವ್ಯಕ್ತಪಡಿಸಿದ್ದೇನೆ. ಇದು ಹಕ್ಕುಚ್ಯುತಿಯಾಗುತ್ತದೆ ಎಂದು ಹೇಳಿದ್ದೇನೆ ಎಂದರು. ಮೂಲಗಳ ಪ್ರಕಾರ ಈ ಘಟನೆಯಾದ ಬಳಿಕ ಖುದ್ದು ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಕುಮಾರಕೃಪಾ ಅತಿಥಿಗೃಹಕ್ಕೆ ಖುದ್ದು ಭೇಟಿ ನೀಡಿ ಸಭೆ ನಡೆಸಲು ಎಲ್ಲ ಅವಕಾಶ ನೀಡುತ್ತೇವೆಂದು ಭರವಸೆ ನೀಡಿದರು ಎಂದು ತಿಳಿದು ಬಂದಿದೆ. ಪಂಚರಾಜ್ಯ ಚುನಾವಣೆ ಬಳಿಕ ವಿಪಕ್ಷ ನೇಮಕ
ಪಂಚರಾಜ್ಯ ಚುನಾವಣೆ ಬಳಿಕ ವಿಪಕ್ಷ ನಾಯಕರನ್ನು ನೇಮಿಸಲಾಗುವುದು ಎಂದು ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಹೇಳಿದ್ದಾರೆ. ವಿಪಕ್ಷ ನಾಯಕರ ಆಯ್ಕೆ ವಿಚಾರದಲ್ಲಿ ನಾವು ಎಡವಿದ್ದೇವೆ. ಇದರಿಂದ ಹಿನ್ನಡೆಯಾಗುತ್ತಿರುವುದು ನಿಜ. ಪಂಚರಾಜ್ಯ ಚುನಾವಣೆ ಬಳಿಕ ನೇಮಕವಾಗುತ್ತದೆ. ರಾಜ್ಯದ ಹಿತದೃಷಿಯಿಂದ ಜೆಡಿಎಸ್ ಜತೆಗೆ ಮೈತ್ರಿ ಅಗತ್ಯ ಇದೆ ಎಂದು ರಾಷ್ಟ್ರೀಯ ನಾಯಕರು ಅಭಿಪ್ರಾಯಪಟ್ಟಿದ್ದಾರೆ. ಮೋದಿ, ಅಮಿತ್ ಶಾ ನಿರ್ಧಾರದಂತೆ ಕೆಲಸ ಮಾಡುವುದು ನಮ್ಮ ಸಂಸ್ಕಾರ ಹಾಗೂ ಧರ್ಮ ಎಂದು ಅಭಿಪ್ರಾಯಪಟ್ಟರು. ದಲಿತ ಸಿಎಂ ಕೂಗಿಗೆ ಪ್ರತಿಕ್ರಿಯಿಸಿ, ಜಾತಿ ಆಧಾರದ ಮೇಲೆ ರಾಜಕಾರಣ ಮಾಡುವುದು ನಿಲ್ಲಬೇಕು. ಇದು ಪ್ರಜಾಪ್ರಭುತ್ವಕ್ಕೆ ಮಾರಕ. ದಲಿತರ ಜನಸಂಖ್ಯೆ ಶೇ.18ರಿಂದ ಶೇ.25ಕ್ಕೆ ಏರಿಕೆಯಾದರೂ ಸಿಎಂ ಪಟ್ಟ ಸಿಕ್ಕಿಲ್ಲ. ದಲಿತರು ಹಾಗೂ ಹಿಂದುಳಿದ ವರ್ಗದವರು ಬಿ ಫಾರ್ಮ್ಗಾಗಿ ಇನ್ನೂ ಮನೆ ಬಾಗಿಲು ಕಾಯಬೇಕಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು.