Advertisement
ಕರ್ನಾಟಕಕ್ಕೆ ಪ್ರತ್ಯೇಕವಾದ ಧ್ವಜ ಹೊಂದುವ ಚರ್ಚೆ ಮರಳಿ ಜೀವ ಪಡೆದುಕೊಂಡಿದೆ. ಸರಕಾರ ಧ್ವಜ ವಿನ್ಯಾಸಗೊಳಿಸಲು ಮತ್ತು ಪ್ರತ್ಯೇಕ ಧ್ವಜ ಹೊಂದುವ ವಿಚಾರದ ಸಾಂವಿಧಾನಿಕ ಮತ್ತು ಕಾನೂನು ಆಯಾಮಗಳನ್ನು ಅಧ್ಯಯನ ನಡೆಸುವುದಕ್ಕಾಗಿ ಒಂಬತ್ತು ಮಂದಿಯಿರುವ ಸಮಿತಿಯೊಂದನ್ನು ರಚಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಪ್ರತ್ಯೇಕ ಧ್ವಜ ಬೇಕು ಎಂದು ವಾದಿಸುತ್ತಿರುವುದರಿಂದ ಈ ವಿಚಾರವೀಗ ರಾಜಕೀಯ ಆಯಾಮವನ್ನೂ ಪಡೆದುಕೊಂಡಿದೆ. ರಾಜ್ಯಗಳು ಪ್ರತ್ಯೇಕ ಧ್ವಜ ಹೊಂದುವುದನ್ನು ಸಂವಿಧಾನ ನಿರ್ಬಂಧಿಸಿಲ್ಲ. ಹೀಗಾಗಿ ಕರ್ನಾಟಕ ತನ್ನದೇ ಆದ ಧ್ವಜವನ್ನು ಹೊಂದುವುದು ತಪ್ಪಾಗುವುದಿಲ್ಲ ಎಂದು ಮುಖ್ಯಮಂತ್ರಿ ಪ್ರತಿಪಾದಿಸುತ್ತಿದ್ದಾರೆ. ಒಂದು ವೇಳೆ ಅವರ ವಾದವೇ ಗೆದ್ದು, ಕರ್ನಾಟಕ ಪ್ರತ್ಯೇಕವಾದ ಧ್ವಜವನ್ನು ಹೊಂದಿದರೆ ಪ್ರತ್ಯೇಕ ಧ್ವಜ ಹೊಂದಿದ ಎರಡನೇ ರಾಜ್ಯ ಎಂಬ ಕೀರ್ತಿ ಸಿಗುತ್ತದೆ. ಪ್ರಸ್ತುತ ಜಮ್ಮು-ಕಾಶ್ಮೀರ ಮಾತ್ರ ಪ್ರತ್ಯೇಕವಾದ ಧ್ವಜವನ್ನು ಹೊಂದಿದೆ. ಇದು ಆ ರಾಜ್ಯಕ್ಕೆ ಸಂವಿಧಾನದ 370ನೇ ವಿಧಿಯಡಿ ಸಿಕ್ಕಿರುವ ವಿಶೇಷ ಸ್ಥಾನಮಾನದ ಕೊಡುಗೆಯ ಅಂಗ.
ವಾಗಬಹುದು. ಅಲ್ಲದೆ ಇದು ದೇಶದ ಏಕತೆ ಮತ್ತು ಸಾರ್ವಭೌಮತ್ವಕ್ಕೆ ವಿರುದ್ಧವಾದ ನಡೆ ಎಂದು ಅಂದಿನ ಸರಕಾರ ನ್ಯಾಯಾಲಯಕ್ಕೆ ತಿಳಿಸಿದೆ. ಸುಮಾರು ನಾಲ್ಕು ದಶಕಗಳಿಂದ ಹಳದಿ ಮತ್ತು ಕೇಸರಿ ಬಣ್ಣದ ಧ್ವಜವೇ ಕನ್ನಡ ನಾಡಿನ ಧ್ವಜ ಎಂದು ಬಳಕೆಯಾಗುತ್ತಿದೆ. ಇದಕ್ಕೆ ಅಧಿಕೃತ ಮಾನ್ಯತೆ ಇಲ್ಲ. ಆದರೆ ಕನ್ನಡ ನಾಡು ಮತ್ತು ನುಡಿಯ ಹೋರಾಟಗಳಲ್ಲಿ ಈ ಧ್ವಜವೇ ಹಾರುತ್ತಿರುವುದರಿಂದ ಈ ಧ್ವಜವೇ ಕನ್ನಡ ನಾಡಿನ ಧ್ವಜವೆಂಬ ಭಾವನೆ ಕನ್ನಡಿಗರ ಮನಸ್ಸಿನಲ್ಲಿ ಬಲವಾಗಿ ಅಚ್ಚೊತ್ತಿದೆ. ಪ್ರತ್ಯೇಕ ಧ್ವಜಕ್ಕೆ ಸಂವಿಧಾನದಲ್ಲಿ ಅವಕಾಶವಿಲ್ಲ ಎಂದು ವಿಪಕ್ಷಗಳ ನಾಯಕರು ಹೇಳುತ್ತಿದ್ದಾರೆ. ಆದರೆ ರಾಜ್ಯಗಳಿಗೆ ತಮ್ಮದೇ ಆದ ಧ್ವಜವನ್ನು ಹೊಂದುವ ಅವಕಾಶವಿದೆ ಎಂದು ಸುಪ್ರೀಂ ಕೋರ್ಟ್ 1994ರಲ್ಲೇ ಹೇಳಿದೆ. ಆದಾಗ್ಯೂ ಈ ವಿಷಯದಲ್ಲಿ ರಾಜ್ಯಗಳು ಪಾಲಿಸಲೇಬೇಕಾದ ನಿರ್ದಿಷ್ಟ ಸೂಚನೆಗಳನ್ನು ಅದು ಮುಂದಿಟ್ಟಿದೆೆ. ಹೀಗಾಗಿ ಈ ವಿಷಯದಲ್ಲಿ ಮುಂದಿನ ಹೆಜ್ಜೆ ಇಡುವುದಕ್ಕೂ ಮುನ್ನ ಸರ್ಕಾರ ಕಾನೂನು ತಜ್ಞರ ಸಲಹೆ ಪಡೆಯುವುದು ಒಳಿತು. ಇನ್ನು, ಈ ವಿಷಯ ರಾಜಕೀಯ ರಂಗು ಪಡೆದುಕೊಳ್ಳದಂತೆ ಎಚ್ಚರಿಕೆ ವಹಿಸಬೇಕಾದ ಜವಾಬ್ದಾರಿಯೂ ಸರಕಾರದ ಮೇಲಿದೆ. ಕನ್ನಡದ ಹಿರಿಮೆಗೆ ರಾಷ್ಟ್ರೀಯ ಮಟ್ಟದಲ್ಲಿ ಒಂದಿಷ್ಟೂ ಚ್ಯುತಿಯಾಗದಂತೆ ಈ ವಿಚಾರವನ್ನು ಸಾಮರಸ್ಯದಿಂದ ಬಗೆಹರಿಸಿಕೊಳ್ಳಬೇಕಿರುವುದು ಸರಕಾರದ ಕರ್ತವ್ಯ.