Advertisement
ನಗರದ ಜಿಪಂ ಕಚೇರಿಯ ಆವರಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದ ಎನ್‌ಎಸ್ ಎಲ್ ಕಾರ್ಖಾನೆ ವ್ಯಾಪ್ತಿಯ ಕಬ್ಬು ಬೆಳೆಗಾರರನ್ನು ಭೇಟಿಯಾದ ಸಚಿವ ಡಿ.ಕೆ. ಶಿವಕುಮಾರ್, ಅಂದಾಜು 7500 ಎಕರೆ ಪ್ರದೇಶದಲ್ಲಿ ಕಬ್ಬು ಬೆಳೆಯನ್ನು ಬೆಳೆಯಲಾಗಿದೆ. ಕಟಾವು ಹಂತಕ್ಕೆ ಬಂದಿರುವ ಕಬ್ಬನ್ನು ಖರೀದಿಸಲು ಸಕ್ಕರೆ ಕಾರ್ಖಾನೆ ಮಾಲೀಕರು ಹಿಂದೇಟು ಹಾಕುತ್ತಿದ್ದಾರೆ. ಅಲ್ಲದೇ, ತುಂಗಭದ್ರಾ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯ ಜಿಲ್ಲೆಯ ಸಿರುಗುಪ್ಪ ಮತ್ತು ಪಕ್ಕದ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ರೈತರು ಸಾವಿರಾರು ಹೆಕೇrರ್ ಪ್ರದೇಶದಲ್ಲಿ ಕಬ್ಬು ಬೆಳೆಯನ್ನು ಬೆಳೆದಿದ್ದಾರೆ. ಅದು ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿಯ ಸೂಚನೆ ಮೇರೆಗೆ ಕಬ್ಬನ್ನು ಬೆಳೆದಿದ್ದು, ಆರ್ಥಿಕ ಮುಗ್ಗಟ್ಟು ಎದುರಾಗಿದೆ ಎಂಬ ಕಾರಣವೊಡ್ಡಲಾಗಿದೆ.
ರೈತರು ಕೈಗೊಂಡಿದ್ದ ಪ್ರತಿಭಟನೆ ಮಧ್ಯ ಭಾಗದಲ್ಲೇ ಸಚಿವರು ಕುಳಿತುಕೊಂಡೇ ಸಮಸ್ಯೆ ಆಲಿಸಿದರು. ಈ ವಿಚಾರವಾಗಿ ನಾನು ಮತ್ತೆ ಮಾತನಾಡುವೆ. ಜಿಲ್ಲಾಧಿಕಾರಿ ಡಾ| ರಾಮಪ್ರಸಾತ್ ಮನೋಹರ್ ಬಳಿ ನಾನು ಮಾಹಿತಿ ಪಡೆದು ಸಕ್ಕರೆ ಕಾರ್ಖಾನೆಗಳ ಮಾಲೀಕರ ಜತೆ ಮಾತನಾಡಿ ಸಮಸ್ಯೆ ಬಗೆಹರಿಸಲಾಗುತ್ತದೆ ಎಂದು ಭರವಸೆ ನೀಡಿದರು.
Related Articles
Advertisement
ಕಚೇರಿಯ ಸಭಾಂಗಣದಲ್ಲಿದ್ದ ಸಚಿವ ಡಿ.ಕೆ.ಶಿವಕುಮಾರ್ ಕೆಳಗಿಳಿದು ಬಂದರು. ರೈತರ ಮನವಿಪತ್ರ ಸ್ವೀಕರಿಸಿ, ಪರಿಶೀಲಿಸಿ ಬಗೆ ಹರಿಸುವುದಾಗಿ ಭರವಸೆ ನೀಡಿದರು. ಬಳ್ಳಾರಿ ಲೋಕಸಭಾ ಸದಸ್ಯ ವಿ.ಎಸ್. ಉಗ್ರಪ್ಪ, ಶಾಸಕರಾದ ಆನಂದ ಸಿಂಗ್, ಈ.ತುಕಾರಾಂ, ಜೆ.ಎನ್.ಗಣೇಶ, ಪಿ.ಟಿ.ಪರಮೇಶ್ವರ್‌ನಾಯ್ಕ ಸಾಥ್ ನೀಡಿದರು. ತುಂಗಭದ್ರಾ ರೈತ ಸಂಘದ ಅಧ್ಯಕ್ಷ ಜಿ.ಪುರುಷೋತ್ತಮಗೌಡ ಸೇರಿದಂತೆ ನೂರಾರು ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.