Advertisement

ಭಿನ್ನಾಭಿಪ್ರಾಯ ಬಗ್ಗೆ ಚರ್ಚೆ-ಪಕ್ಷಸಂಘಟನೆಗೆ ಆದ್ಯತೆ

03:21 PM May 19, 2017 | Team Udayavani |

ಹುಬ್ಬಳ್ಳಿ: ಕಾಂಗ್ರೆಸ್‌ ಪಕ್ಷದಲ್ಲಿ ಮುಖಂಡರ ಹಾಗೂ ಕಾರ್ಯಕರ್ತರ ನಡುವೆ ಅಂತಹ ಹೇಳಿಕೊಳ್ಳುವಂತಹ ಭಿನ್ನಾಭಿಪ್ರಾಯಗಳಿಲ್ಲ. ಇದ್ದ ಸಣ್ಣಪುಟ್ಟ ಭಿನ್ನಾಭಿಪ್ರಾಯವನ್ನೂ ಬಗೆಹರಿಸಲಾಗಿದೆ.

Advertisement

ಮೇ 22ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರೊಂದಿಗೆ ಸಭೆ ನಡೆಸಿ ಪಕ್ಷದ ಬಲವರ್ಧನೆ ಹಾಗೂ ಪಕ್ಷದೊಳಗಿನ ಆಂತರಿಕ ಎಲ್ಲ ಸಮಸ್ಯೆಗಳ ಕುರಿತು ಚರ್ಚಿಸಿ ಪಕ್ಷದ ಸಂಘಟನೆಗೆ ಆದ್ಯತೆ ನೀಡಲಾಗುವುದು ಎಂದು ಎಐಸಿಸಿ ಕಾರ್ಯದರ್ಶಿ ಮಾಣಿಕ್ಯಂ ಟ್ಯಾಗೋರ ಹೇಳಿದರು. 

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಬರುವ ಸಾರ್ವತ್ರಿಕ ಚುನಾವಣೆ ಒಳಗಾಗಿ ಪಕ್ಷವನ್ನು ತಳಮಟ್ಟದಿಂದ ಬಲವರ್ಧನೆಗೊಳಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲಾಗುತ್ತಿದೆ. ವಿಜಯಪುರ, ಗದಗ, ಹಾವೇರಿ, ಬೆಳಗಾವಿ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು ಪಕ್ಷದ ಸಂಘಟನೆ ಮಾಡಲಾಗುತ್ತಿದೆ.

ಬೂತ್‌, ತಾಲೂಕು, ಜಿಲ್ಲಾಮಟ್ಟದಲ್ಲಿ ಪಕ್ಷದ ಸಂಘಟನೆಗೆ ಒತ್ತು ನೀಡಲಾಗಿದೆ ಎಂದರು. ರಾಜ್ಯದಲ್ಲಿ ಪಕ್ಷದೊಳಗಿನ ಆಂತರಿಕ ಸಮಸ್ಯೆಗಳ ಕುರಿತು ಈಗಾಗಲೇ ಚರ್ಚಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಪಕ್ಷದ ವರಿಷ್ಠರು ಸ್ಪಷ್ಟಿಕರಣ ನೀಡಿದ್ದಾರೆ. ಅಧ್ಯಕ್ಷರ ಬದಲಾವಣೆ ಪಕ್ಷದ ಹೈಕಮಾಂಡ್‌ಗೆ ಬಿಟ್ಟ ವಿಷಯ.

ಈ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲಿದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನ ಹಾಗೂ ಸಚಿವ ಸ್ಥಾನ ಎರಡೆರಡು ಸ್ಥಾನ ನಿಭಾಯಿಸುವುದು ದೊಡ್ಡ ವಿಚಾರವಲ್ಲ ಎಂದರು. ಪಕ್ಷದ ಬಲವರ್ಧನೆ ಹಾಗೂ ಆಂತರಿಕ ಭಿನ್ನಾಭಿಪ್ರಾಯ ಕುರಿತು ಸ್ಥಳೀಯ ಜನಪ್ರತಿನಿಧಿಗಳು, ಸ್ಪರ್ಧಾಳುಗಳು ಸೇರಿದಂತೆ ಜಿಲ್ಲಾ ಪ್ರಮುಖರನ್ನು ಬುಧವಾರ ಇಡೀ ದಿನ ಭೇಟಿ ಮಾಡಿ ಚರ್ಚಿಸಲಾಗಿದೆ.

Advertisement

ನನ್ನದು ಇಂದೊಂದು ಪರಿಚಯಾತ್ಮಕ ಭೇಟಿಯಾಗಿದೆ. ಈ ಸಂದರ್ಭದಲ್ಲಿ ಪ್ರಮುಖವಾಗಿ ಪಕ್ಷದ ಬಲವರ್ಧನೆ ಹಾಗೂ ಮುಖಂಡರು ಮತ್ತು ಕಾರ್ಯಕರ್ತರಲ್ಲಿನ ಸಣ್ಣಪುಟ್ಟ ಭಿನ್ನಾಭಿಪ್ರಾಯ ಸರಿಪಡಿಸುವ ಕುರಿತು ಎರಡು ಅಂಶಗಳು ನನ್ನ ಗಮನಕ್ಕೆ ಬಂದಿವೆ. ಆದರೆ ಅಂತಹ ಹೇಳಿಕೊಳ್ಳುವಂತಹ ಗಂಭೀರ ದೂರುಗಳು ಕೇಳಿಬಂದಿಲ್ಲ ಎಂದರು. 

ಶಾಸಕ ಪ್ರಸಾದ ಅಬ್ಬಯ್ಯ, ವಾಕರಸಾ ಸಂಸ್ಥೆ ಅಧ್ಯಕ್ಷ ಸದಾನಂದ ಡಂಗನವರ, ಮಹೇಶ ನಾಲವಾಡ, ನಾಗರಾಜ ಛಬ್ಬಿ, ಎ.ಎಂ. ಹಿಂಡಸಗೇರಿ, ವಿ.ಆರ್‌. ಪಾಟೀಲ, ಎಚ್‌.ವಿ. ಮಾಡಳ್ಳಿ, ರಾಜಾ ದೇಸಾಯಿ, ಶರಣಪ್ಪ ಕೊಟಗಿ, ಮೋಹನ ಹಿರೇಮನಿ ಇದ್ದರು. 

Advertisement

Udayavani is now on Telegram. Click here to join our channel and stay updated with the latest news.

Next