Advertisement

ಔತಣಕೂಟದಲ್ಲಿ ಅತೃಪ್ತರ ಉಳಿಸಿಕೊಳ್ಳುವ ಲೆಕ್ಕಾಚಾರ

12:30 AM Feb 07, 2019 | Team Udayavani |

ಬೆಂಗಳೂರು: ಉಪಮುಖ್ಯಮಂತ್ರಿ ಪರಮೇಶ್ವರ್‌ ಕರೆದಿದ್ದ ಔತಣಕೂಟದಲ್ಲಿಯೂ ಸರ್ಕಾರ ಉಳಿಸಿಕೊಳ್ಳುವ ಕುರಿತಂತೆ ಎರಡೂ ಪಕ್ಷಗಳ ನಾಯಕರು ಚರ್ಚೆ ನಡೆಸಿದ್ದಾರೆ.

Advertisement

ಭೋಜನಕೂಟದಲ್ಲಿ ಎರಡೂ ಪಕ್ಷಗಳ ಬಹುತೇಕ ಶಾಸಕರು ಹಾಗೂ ಸಚಿವರು ಪಾಲ್ಗೊಂಡಿದ್ದರು. ಮುಖ್ಯಮಂತ್ರಿ ಕುಮಾರಸ್ವಾಮಿ, ಕೆ.ಸಿ.ವೇಣುಗೋಪಾಲ್‌, ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌, ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌, ಕಾರ್ಯಾಧ್ಯಕ್ಷ ಈಶ್ವರ್‌ ಖಂಡ್ರೆ, ಸಚಿವರಾದ ಎಂ.ಬಿ.ಪಾಟೀಲ್‌, ಡಿ.ಕೆ.ಶಿವಕುಮಾರ್‌, ಕೆ.ಜೆ. ಜಾರ್ಜ್‌, ಪ್ರಿಯಾಂಕ್‌ ಖರ್ಗೆ, ಆರ್‌.ವಿ.ದೇಶಪಾಂಡೆ, ಕೃಷ್ಣಬೈರೇಗೌಡ, ಪುಟ್ಟರಂಗಶೆಟ್ಟಿ, ತುಕಾರಾಂ, ಜಮೀರ್‌ ಅಹಮದ್‌,
ಡಿ.ಸಿ.ತಮ್ಮಣ್ಣ ಸೇರಿದಂತೆ ಬಹುತೇಕ ಸಚಿವರು ಹಾಜರಿದ್ದರು.

ಭೋಜನ ಕೂಟದ ಸಂದರ್ಭದಲ್ಲಿ ಸದನದಲ್ಲಿ ಬಿಜೆಪಿಯ ನಡವಳಿಕೆ ಹಾಗೂ ಅತೃಪ್ತರನ್ನು ಪಕ್ಷದಲ್ಲಿ ಉಳಿಸಿಕೊಳ್ಳುವ ಕುರಿತಂತೆ ಚರ್ಚಿಸಿದ್ದಾರೆ ಎನ್ನಲಾಗಿದೆ. ರಮೇಶ್‌ ಜಾರಕಿಹೊಳಿ ಮಾತ್ರ ರಾಜೀನಾಮೆ ಕೊಡುವ ಸಾಧ್ಯತೆ ಇದ್ದು, ಮಹೇಶ್‌ ಕುಮಠಳ್ಳಿ ಹಾಗೂ ಬಿ.ನಾಗೇಂದ್ರ, ಉಮೇಶ್‌ ಜಾಧವ್‌ ರಾಜೀನಾಮೆ ಕೊಡುವ ಸಾಧ್ಯತೆ ಕಡಿಮೆ ಎಂಬ ಭರವಸೆಯನ್ನು ಸಿದ್ದರಾಮಯ್ಯ ನೀಡಿದ್ದಾರೆ ಎನ್ನಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next