Advertisement

ಸಂಪುಟದಲ್ಲಿ ಬಡ್ತಿ ಮೀಸಲಾತಿ ಚರ್ಚೆ?

09:09 AM Jan 18, 2018 | |

ಬೆಂಗಳೂರು: ಬಡ್ತಿ ಮೀಸಲಾತಿ ವಿಚಾರದಲ್ಲಿ ಮೂರು ತಿಂಗಳು ಕಾಲಾವಕಾಶ ನೀಡುವಂತೆ ರಾಜ್ಯ ಸರ್ಕಾರದ ಕೋರಿಕೆಗೆ ಸುಪ್ರೀಂಕೊರ್ಟ್‌ ಒಪ್ಪದಿದ್ದರೆ ಮುಂದೇನು ಮಾಡಬೇಕು ಎಂಬ ಬಗ್ಗೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಯಿತು. ಮಸೂದೆ ರಾಷ್ಟ್ರಪತಿಯವರ ಒಪ್ಪಿಗೆಗೆ ಕಳುಹಿಸಿರುವುದರ ಬಗ್ಗೆ ಪ್ರಮಾಣಪತ್ರದಲ್ಲಿ ಪ್ರಸ್ತಾಪಿಸಿರುವುದರಿಂದ ಬಹುತೇಕ ಕಾಲಾವಕಾಶ ಸಿಗಬಹುದು ಎಂಬ ಅಭಿಪ್ರಾಯ ವ್ಯಕ್ತವಾಯಿತು. ಆದರೂ, ಯಾವುದಕ್ಕೂ ಎಲ್ಲ ಇಲಾಖೆಗಳ ಪರಿಷ್ಕೃತ ಜೇಷ್ಠತಾ ಪಟ್ಟಿ ಸಿದ್ಧಪಡಿಸಿಕೊಳ್ಳಿ ಎಂಬ ಸೂಚನೆಯನ್ನೂ ನೀಡಲಾಯಿತು ಎಂದು ತಿಳಿದು ಬಂದಿದೆ.

Advertisement

ಸಿದ್ದರಾಮಯ್ಯ ಅವರು ನಡೆಸಿದ ಸಾಧನಾ ಸಂಭ್ರಮ ಯಾತ್ರೆ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್‌ ನಡೆಸಿದ ಯಾತ್ರೆಗೆ ಜನರ ಸ್ಪಂದನೆ, ಬಿಜೆಪಿ ಹಾಗೂ ಜೆಡಿಎಸ್‌ ಯಾತ್ರೆ ಹಾಗೂ ಬಿಜೆಪಿ ನಾಯಕರ ಟೀಕೆಗಳ ಬಗ್ಗೆಯೂ ಕೆಲವು ಸಚಿವರು ಪ್ರಸ್ತಾಪಿಸಿ ದರು. ಟೀಕೆಗಳಿಗೆ ತಿರುಗೇಟು ನೀಡುವಾಗ ಉದ್ರೇಕಕಾರಿ ಅಥವಾ ಪ್ರಚೋದನೆ ಹೇಳಿಕೆ ಕೊಡುವುದು ಸೂಕ್ರವಲ್ಲ ಎಂದು ಹಿರಿಯ ಸಚಿವರು ಅಭಿಪ್ರಾಯಪಟ್ಟರು. 

ಹುದ್ದೆ ಸೃಷ್ಟಿಸಲು ಆದೇಶ
ಬೆಂಗಳೂರು: ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಹೊಸ ತಾಲೂಕುಗಳಿಗೆ ಅನ್ವಯ ಆಗುವಂತೆ ಕಂದಾಯ ಇಲಾಖೆಯಲ್ಲಿ ಹೊಸ ಹುದ್ದೆಗಳನ್ನು ಸೃಷ್ಟಿಸಿ ಸರ್ಕಾರ ಆದೇಶ ಹೊರಡಿಸಿದೆ. ತಹಸೀಲ್ದಾರ್‌ ಗ್ರೇಡ್‌ 1 ಹಾಗೂ ಗ್ರೇಡ್‌ 2 ಎರಡು ಹುದ್ದೆಗಳು, ಶಿರಸ್ತೆದಾರ 2 ಹುದ್ದೆ, ಪ್ರಥಮ ದರ್ಜೆ ಸಹಾಯಕ 3 ಹುದ್ದೆಗಳು, ಆಹಾರ ನಿರೀಕ್ಷಕ 1, ದ್ವಿತೀಯ ದರ್ಜೆ ಸಹಾಯಕ 4 ಹುದ್ದೆಗಳನ್ನು ವೃಂದ ಮತ್ತು ನೇಮಕಾತಿ ನಿಯಮಗಳ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳುವುದು. ಬೆರಳಚ್ಚು ಹಾಗೂ ಡಾಟಾ ಎಂಟ್ರಿ ಆಪರೇಟರ್‌ 1, ಗ್ರೂಪ್‌ ಡಿ ದರ್ಜೆಯ ನೌಕರ 3, ವಾಹನ ಚಾಲಕ 1 ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಸರ್ಕಾರ ಆದೇಶದಲ್ಲಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next