ಬೆಂಗಳೂರು/ಮೈಸೂರು: ಕಾವೇರಿ ಜಲವಿವಾದ ಸಂಬಂಧ ಸುಪ್ರೀಂಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್ ಅವರು, ರಾಜ್ಯವನ್ನು ಪ್ರತಿನಿಧಿಸುವ ವಕೀಲರ ತಂಡದ ಜತೆ ಇದೇ 25 ರಂದು ಸಭೆ ನಡೆಸಲಿದ್ದಾರೆ. ಈ ಮಧ್ಯೆ ಯಾವುದೇ ಕಾರಣಕ್ಕೂ ಕಾವೇರಿ ನಿರ್ವಹಣಾ ಮಂಡಳಿ ರಚನೆಯಾ ಗಲು ಬಿಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅಭಯ ನೀಡಿದ್ದಾರೆ.
ದೆಹಲಿಯ ಕರ್ನಾಟಕ ಭವನದಲ್ಲಿ ಅಂದು ಮಧ್ಯಾಹ್ನ 3 ಗಂಟೆಗೆ ಸಭೆ ನಿಗದಿಯಾಗಿದೆ. ವಕೀಲರ ತಂಡದ ಸದಸ್ಯರು, ತಾಂತ್ರಿಕ ತಜ್ಞರ ಜತೆ ಚರ್ಚಿಸಲಿರುವ ಪಾಟೀಲ್, ರಾಜ್ಯದ ಹಿತಾಸಕ್ತಿ ಕಾಯುವ ನಿಟ್ಟಿನಲ್ಲಿ ತೆಗೆದುಕೊಂಡಿರುವ ಹಾಗೂ ತೆಗೆದುಕೊಳ್ಳಬೇಕಾದ
ನಿಲುವುಗಳ ಬಗ್ಗೆ ಸಮಾಲೋಚನೆ ನಡೆಸಲಿದ್ದಾರೆ. ಒಂದೊಮ್ಮೆ ಕಾವೇರಿ ನಿರ್ವಹಣಾ ಮಂಡಳಿ ರಚನೆ ಯಾಗಿದ್ದೇ ಆದರೆ, ಅದರಲ್ಲಿ ರಾಜ್ಯ ಪರ ಉತ್ತಮ ತಜ್ಞರು ಇರಬೇಕು, ರಾಜ್ಯದ ಹಿತಾಸಕ್ತಿ ಕಾಪಾಡುವ ಹಾಗೂ ತಾರತಮ್ಯ ಆಗ ದಂತೆ ನೋಡಿಕೊಳ್ಳಬೇಕು. ನೀರಿನ ಲಭ್ಯತೆ ಆಧರಿಸಿ ಹಂಚಿಕೆಯಾಗುವ ಮಾನದಂಡ ಅನುಸರಿಸಬೇಕು ಎಂದು ಕಾವೇರಿ ಹಿತರಕ್ಷಣಾ ಸಮಿತಿ ಆಧ್ಯಕ್ಷ ಜಿ.ಮಾದೇ ಗೌಡರು ಸಲಹೆ ನೀಡಿದ್ದಾರೆ ಎಂದು ಪಾಟೀಲ್ ಹೇಳಿದ್ದಾರೆ.
ಸರ್ವಪಕ್ಷ ಸಭೆ: ಸುಪ್ರೀಂಕೋರ್ಟ್ ತೀರ್ಪಿನ ಹಿನ್ನೆಲೆ ಹಾಗೂ ಕಾವೇರಿ ನಿರ್ವಹಣಾ ಮಂಡಳಿ ರಚನೆ ಬಗ್ಗೆ ತೆಗೆದು ಕೊಳ್ಳಬಹುದಾದ ತೀರ್ಮಾನಗಳ ಬಗ್ಗೆ ಚರ್ಚಿಸಲು ಸರ್ವಪಕ್ಷ ಸಭೆ ಕರೆಯುವ ಸಾಧ್ಯತೆಯೂ ಇದೆ ಎಂದು ಹೇಳಲಾಗಿದೆ.
ಸುಪ್ರೀಂಕೋರ್ಟ್‌ನಲ್ಲಿ ವಾದ-ಪ್ರತಿವಾದ ಮುಗಿದಿದೆ. ನ್ಯಾಯಮೂರ್ತಿಗಳು ನಿರ್ವಹಣಾ ಮಂಡಳಿ ಬಗ್ಗೆ ಸಲಹೆ ಕೊಟ್ಟಿದ್ದಾರೆಯೇ ಹೊರತು, ರಚನೆ ಮಾಡಿ ಎಂದು ಆದೇಶ ನೀಡಿಲ್ಲ. ಹೀಗಾಗಿ ರೈತರು ಆತಂಕ ಪಡುವ ಅಗತ್ಯವಿಲ್ಲ.
ಸಿದ್ದರಾಮಯ್ಯ, ಮುಖ್ಯಮಂತ್ರಿ