Advertisement

Teachers: ಶಿಕ್ಷಕರ 13 ಬೇಡಿಕೆ ಈಡೇರಿಕೆ ಬಗ್ಗೆ ಸಿಎಂ ಜೊತೆಗೆ ಚರ್ಚೆ: ಮಧು

10:27 PM Nov 02, 2023 | Team Udayavani |

ಬೆಂಗಳೂರು: ಶಿಕ್ಷಕರ ಸಂಘದ ಹದಿಮೂರು ಬೇಡಿಕೆಗಳ ಈಡೇರಿಕೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆಗೆ ಚರ್ಚೆ ಮಡುವುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಆಶ್ವಾಸನೆ ಕೊಟ್ಟಿದ್ದಾರೆ.

Advertisement

ರಾಜ್ಯ ಸಮಗ್ರ ಶಿಕ್ಷಣ ಕಚೇರಿಯಲ್ಲಿ ಗುರುವಾರ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ, ಶಿಕ್ಷಕರ ಸಂಘದ ಬೇಡಿಕೆಗಳ ಬಗ್ಗೆ ಚರ್ಚೆ ನಡೆಸಿದರು. ಬಳಿಕ 13 ಬೇಡಿಕೆಗಳ ಈಡೇರಿಕೆ ಕುರಿತು ಮುಖ್ಯಮಂತ್ರಿಗಳ ಜೊತೆಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಪ್ರಾಥಮಿಕ ಶಾಲೆಗಳಲ್ಲಿ 15 ರಿಂದ 20 ವರ್ಷ ಸೇವೆ ಸಲ್ಲಿಸಿದ ಪದವೀಧರ ಶಿಕ್ಷಕರ ಸೇವಾ ಜೇಷ್ಠತೆ ಸಂರಕ್ಷಿಸಿ, 6 ರಿಂದ 8ಕ್ಕೆ ನಿಯುಕ್ತಿಗೊಳಿಸುವುದು ಜಿಲ್ಲಾ ಮತ್ತು ತರಬೇತಿ ಸಂಸ್ಥೆಗಳಲ್ಲಿರುವ ಹೆಚ್ಚುವರಿ ಹುದ್ದೆ ನಿಯುಕ್ತಿಗೊಳಿಸುವುದು ಸೇರಿದಂತೆ ಸಂಘದ 13 ಭರವಸೆಗಳನ್ನು ಹಂತ ಹಂತವಾಗಿ ಈಡೇರಿಸಲು ಪ್ರಯತ್ನಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಹೇಳಲಾಗಿದೆ.

ಸಹ ಶಿಕ್ಷಕರ ಹುದ್ದೆಯಿಂದ ಮುಖ್ಯ ಶಿಕ್ಷಕ, ಹಿರಿಯ ಮುಖ್ಯ ಶಿಕ್ಷಕರ ಹುದ್ದೆಗೆ ಬಡ್ತಿ ನೀಡುವ ಪ್ರಕ್ರಿಯೆ ಹಾಗೂ ಪ್ರೌಢ ಶಾಲೆಗೆ ಬಡ್ತಿ ನೀಡುವ ಕೆಲಸವನ್ನು ನವೆಂಬರ್‌ ಅಂತ್ಯದಲ್ಲಿ ಪೂರ್ಣಗೊಳಿಸಬೇಕು. ಸಮಸ್ತ ಶಿಕ್ಷಕರಿಗೆ ಬೇಕಾದ ವೈದ್ಯಕೀಯ ಅನುದಾನವನ್ನು ಆರ್ಥಿಕ ಇಲಾಖೆಯಿಂದ ಬಿಡುಗಡೆಗೊಳಿಸುವುದು, ರಾಜ್ಯಾದ್ಯಂತ ಮಧ್ಯಂತರ ರಜೆ ಹಾಗೂ ಬೇಸಿಗೆ ರಜೆಗಳಲ್ಲಾದ ವ್ಯತ್ಯಾಸವನ್ನು ಸರಿಪಡಿಸುವುದು ಸೇರಿದಂತೆ ಇನ್ನಿತರ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳುವಂತೆ ಸಂಘದ ಪದಾಧಿಕಾರಿಗಳು ಸಚಿವರಿಗೆ ಮನವಿ ಮಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next