Advertisement

ರೈತರ ನಷ್ಟ ಪರಿಹಾರಕ್ಕೆಸಿಎಂ ಜತೆ ಚರ್ಚೆ

03:26 PM Apr 15, 2020 | Suhan S |

ಕೋಲಾರ: ಲಾಕ್‌ಡೌನ್‌ ಸಂದರ್ಭದಲ್ಲಿ ಕೃಷಿ ಹಾಗೂ ತೋಟಗಾರಿಕೆ ಚಟುವಟಿಕೆ, ಕೃಷಿ ಉತ್ಪನ್ನಗಳ ಸಾಗಾಣಿಕೆಗೆ ಯಾವುದೇ ರೀತಿಯ ನಿರ್ಬಂಧಗಳಿಲ್ಲ ಹಾಗೂ ಬೆಳೆದ ಬೆಳೆಗೆ ಬೆಲೆ ಸಿಗದೇ ಸಂಕಷ್ಟಕ್ಕೊಳಗಾಗಿರುವ ರೈತರಿಗೆ ಪರಿಹಾರ ಕಲ್ಪಿಸಲು ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್‌ ತಿಳಿಸಿದರು.

Advertisement

ಜಿಲ್ಲಾಡಳಿತ ಭವನದಲ್ಲಿ ಸೋಮವಾರ ಸಂಜೆ ವಿವಿಧ ಇಲಾಖಾಧಿಕಾರಿಗಳ ಸಭೆ ನಡೆಸಿದ ಅವರು, ಲಾಕ್‌ಡೌನ್‌ನಿಂದಾಗಿ ರೈತರು ಸಂಕಷ್ಟಕ್ಕೀಡಾಗಿದ್ದು, ಆಗಿರುವ ನಷ್ಟ ತುಂಬಿಸಲು ಸರ್ಕಾರ ಸಿದ್ಧವಿದೆ ಎಂದು ವಿವರಿಸಿದರು.

ಸಚಿವರಿಗೆ ಮನವಿ: ಸಂಸದ ಎಸ್‌.ಮುನಿ  ಸ್ವಾಮಿ, ಜಿಲ್ಲೆಯಲ್ಲಿ ಟೊಮೆಟೋ, ಕ್ಯಾಪ್ಸಿಕಾಂ ಸೇರಿದಂತೆ ವಿವಿಧ ತರಕಾರಿ ಬೆಳೆಗಳು ಕಟಾವಿದೆ ಬಂದಿವೆ, ಲಾಕ್‌ಡೌನ್‌ ಪರಿಸ್ಥಿತಿಯಿಂದ ಕೈಗೆ ಬಂದು ತುತ್ತು ಬಾಯಿಗೆ ಬಾರದಂತಾಗಿದೆ. ರೈತರಿಗೆ ಅನುಕೂಲ ಮಾಡಿಕೊಡಲು ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಸಚಿವರಿಗೆ ಮನವಿ ಮಾಡಿದರು.

ರೈತರಿಂದ ನೇರ ಖರೀದಿ: ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಬಿ.ಸಿ.ಪಾಟೀಲ್‌ ಮಾತನಾಡಿ, ಲಾಕ್‌ಡೌನ್‌ ಅದ ಮೇಲೆ ಎಲ್ಲಾ ರೀತಿಯ ನಿಬಂìಧಗಳನ್ನು ಸಡಿಲಗೊಳಿಸಲಾಗಿದೆ. ಬಹುತೇಕ ತರಕಾರಿ ಬೆಂಗಳೂರಿಗೆ ಬರುತ್ತಿದೆ. ರೈತರಿಗೆ ಅನುಕೂಲ ಮಾಡಿಕೊಡಬೇಕು. ಮಂಡಿಗಳವರು ನೇರವಾಗಿ ರೈತರಿಂದ ಖರೀದಿ ಮಾಡುವ ವ್ಯವಸ್ಥೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಸಿ.ಸತ್ಯಭಾಮ ಮಾತನಾಡಿ, ರೈತರು ಬೆಳೆ ನಾಶ ಮಾಡಿರುವ ಕುರಿತು ವರದಿ ತಯಾರಿಸಲು ಅಧಿಕಾರಿಗಳಿಗೆ ಸೂಚಿಸ ಲಾಗಿದ್ದು, ಶೀಘ್ರದಲ್ಲೇ ಸರ್ಕಾರಕ್ಕೆ ಕಳುಹಿ  ಸಲಾಗುವುದು ಎಂದು ಹೇಳಿದರು. ತೋಟಗಾರಿಕೆ ಇಲಾಖೆ ಉಪ ನಿರ್ದೇಶಕಿ ಗಾಯತ್ರಿ ಮಾತನಾಡಿ, ಹಾಪ್‌ ಕಾಮ್ಸ್‌ ನವರು ರೈತರಿಂದ ಖರೀದಿ ಮಾಡಲು ನಿಬಂìಧ ಇದೆ. ಸಂಸ್ಥೆಯಲ್ಲಿ ನೋಂದಣಿ ಯಾಗಿರುವ ರೈತರಿಂದ ಮಾತ್ರ ಖರೀದಿ ಮಾಡಲು ಅವಕಾಶ ಇದ್ದು, ಬೇಡಿಕೆ ಇರು ವಷ್ಟು ರವಾನೆಯಾಗುತ್ತಿದೆ ಎಂದು ವಿವರಿಸಿದರು.

Advertisement

ಸಚಿವ ಬಿ.ಸಿ.ಪಾಟೀಲ್‌ ಮಾತನಾಡಿ, ಜಿಲ್ಲೆಯಲ್ಲೇ ಮಾವು ಹೆಚ್ಚಾಗಿ ಬೆಳೆಯುವುದರಿಂದ ಬೇರೆ ಕಡೆಯಿಂದ ತರಿಸಿಕೊಳ್ಳುವುದನ್ನು ನಿಲ್ಲಿಸಲಾಗುವುದು, ಕೋವಿಡ್ 19ಗೂ ಮಾವಿಗೆ ಯಾವುದೇ ಸಂಬಂಧವಿಲ್ಲ, ಸೂಕ್ತ ಮಾರುಕಟ್ಟೆ ವ್ಯವಸ್ಥೆ ಮಾಡಬೇಕು ಎಂದರು. ಅಂತರ ಕಾಯ್ದುಕೊಳ್ಳಿ: ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ನಾಗೇಶ್‌ ಮಾತನಾಡಿ, ರೈತರಿಗೆ ಯಾವುದೇ ತೊಂದರೆ ನೀಡುವುದಿಲ್ಲ, ಮಾರುಕಟ್ಟೆ ಸೇರಿದಂತೆ ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ ರೈತರು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಸಲಹೆ ನೀಡಿದರು. ಶಾಸಕ ರಾದ ಕೆ.ಶ್ರೀನಿವಾಸಗೌಡ, ಕೆ. ವೈ.ನಂಜೇಗೌಡ, ಜಿಪಂ ಅಧ್ಯಕ್ಷ ಸಿ.ಎಸ್‌. ವೆಂಕಟೇಶ್‌, ಎಂಎಲ್ಸಿ ಆರ್‌.ಚೌಡರೆಡ್ಡಿ, ಸಿಇಒ ಎಚ್‌.ವಿ.ದರ್ಶನ್‌, ಎಸ್ಪಿಗಳಾದ ಕಾರ್ತಿಕ್‌ರೆಡ್ಡಿ, ಮಹಮದ್‌ ಸುಚಿತಾ, ಅಪರ ಜಿಲ್ಲಾಧಿಕಾರಿ ಶಿವಸ್ವಾಮಿ ಹಾಜರಿದ್ದರು.

 

Advertisement

Udayavani is now on Telegram. Click here to join our channel and stay updated with the latest news.

Next