Advertisement
ಎತ್ತಿನಹೊಳೆ ಕುಡಿವ ನೀರಿನ ಯೋಜನೆಗಾಗಿ ಕೊರಟಗೆರೆ ತಾಲೂಕು ವ್ಯಾಪ್ತಿಯಲ್ಲಿ ಬರುವ ಬೈರಗೊಂಡ್ಲು ಜಲಾಶಯ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದಂತೆ ಭೂಸ್ವಾಧೀನ ಕುರಿತು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ಸಮಾಲೋಚನಾ ಸಭೆಯಲ್ಲಿ ಮಾತನಾಡಿದರು.
Related Articles
Advertisement
ಪರಿಹಾರ ನೀಡಲು ಆಗ್ರಹ: ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಮಾತ ನಾಡಿ, ಬೈರಗೊಂಡ್ಲು ಜಲಾಶಯವು ದೊಡ್ಡ ಬಳ್ಳಾಪುರ ಹಾಗೂ ಕೊರಟಗೆರೆ ತಾಲೂಕಿನ ಪ್ರದೇಶಗಳಲ್ಲಿ ನಿರ್ಮಾಣವಾಗುತ್ತಿದ್ದು, ಪಕ್ಕದ ತಾಲೂಕಿನ ರೈತರಿಗೆ ನೀಡುವ ಪರಿಹಾರ ಧನದ ಪ್ರಮಾಣದಲ್ಲಿಯೇ ನಮ್ಮ ತಾಲೂಕಿನ ರೈತರಿಗೂ ಪರಿಹಾರವನ್ನು ಸರ್ಕಾರ ನೀಡಬೇಕು ಎಂದರು.
ಕ್ಯಾಬಿನೆಟ್‌ನಲ್ಲಿ ಪ್ರಸ್ತಾಪ: ಕಳೆದ ಸರ್ಕಾರ ದಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಎತ್ತಿನ ಹೊಳೆ ಯೋಜನೆಯನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಭೂಪರಿಹಾರ ದರವನ್ನು ನಿಗದಿಪಡಿಸುವ ಬಗ್ಗೆ ಜಿಲ್ಲಾಧಿಕಾರಿ ಗಳಿಂದ ಸೂಕ್ತ ಪ್ರಸ್ತಾವನೆ ಪಡೆದು ಕ್ಯಾಬಿನೆಟ್ ನಲ್ಲಿ ಪ್ರಸ್ತಾಪ ಮಾಡಬೇಕೆಂದು ತೀರ್ಮಾನಿಸ ಲಾಗಿತ್ತು. ಅದರಂತೆ ಜಲಾಶಯ ನಿರ್ಮಾಣ ದಿಂದ ಈ ಭಾಗಕ್ಕೆ ನೀರಾವರಿ ಸೌಲಭ್ಯ ದೊರೆಯಲಿದೆ ಎಂದು ಜನಪ್ರತಿನಿಧಿಗಳೆಲ್ಲರೂ ರೈತರ ಮನವೊಲಿಸಿದ್ದಾಗಿದೆ.
ಜಲಾಶಯದ ಕಾಮಗಾರಿಗಾಗಿ ಬೈರ ಗೊಂಡ್ಲು ಗ್ರಾಮ ಸುತ್ತಮುತ್ತಲಿನ 5 ಹಳ್ಳಿಗಳು ಮುಳುಗಡೆಯಾಗಿ ಸ್ಥಳಾಂತರಗೊಳ್ಳಲಿದ್ದು, ಹೆಚ್ಚುವರಿಯಾಗಿ 350 ಕೋಟಿ ರೂ.ಗಳ ಭೂ ಪರಿಹಾರವನ್ನು ನಮ್ಮ ಭಾಗದ ರೈತರಿಗೆ ದೊರೆಯಬೇಕು. ಪ್ರತಿ ಎಕರೆಗೆ 32 ಲಕ್ಷ ರೂ. ಭೂ ಪರಿಹಾರ ಒದಗಿಸುವ ಕುರಿತು ಮುಖ್ಯಮಂತ್ರಿಗಳ ಮನವೊಲಿಸಬೇಕೆಂದು ಸಚಿವರಿಗೆ ಮನವಿ ಮಾಡಿದರು.
ಜಲಸಂಪನ್ಮೂಲ ಇಲಾಖೆಯ ಅಪರ ಕಾರ್ಯ ದರ್ಶಿ ರಾಕೇಶ್‌ಸಿಂಗ್, ಜಿಲ್ಲಾಧಿಕಾರಿ ಡಾ. ಕೆ. ರಾಕೇಶ್‌ಕುಮಾರ್, ಪೊಲೀಸ್ ಜಿಲ್ಲಾ ವರಿಷ್ಠಾಧಿಕಾರಿ ಡಾ.ವಂಸಿಕೃಷ್ಣ, ಅಪರ ಜಿಲ್ಲಾಧಿ ಕಾರಿ ಕೆ.ಚೆನ್ನಬಸಪ್ಪ, ಮಧುಗಿರಿ ಉಪವಿಭಾ ಗಾಧಿಕಾರಿ ನಂದಿನಿ, ವಿಶೇಷ ಭೂಸ್ವಾಧೀನಾಧಿ ಕಾರಿಗಳಾದ ಚಂದ್ರಶೇಖರ್ ಇದ್ದರು.
ಅಭಿವೃದ್ಧಿ ಕಾಮಗಾರಿ ಮುಂದುವರಿಸಿ..: ಬೈರಗೊಂಡ್ಲು ಸುತ್ತಮುತ್ತಲಿನ ಗ್ರಾಮಗಳ ರಸ್ತೆ, ಚರಂಡಿ, ಮತ್ತಿತರ ಮೂಲಭೂತ ಸೌಕರ್ಯದ ಕಾಮಗಾರಿಗಳಿಗಾಗಿ 150 ಕೋಟಿ ರೂ.ಗಳ ಮಂಜೂರಾತಿ ನೀಡಲಾಗಿತ್ತು. ಈ ಪೈಕಿ ಮೊದಲನೇ ಹಂತದಲ್ಲಿ 50 ಕೋಟಿ ರೂ. ಬಿಡುಗಡೆ ಮಾಡಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಇನ್ನುಳಿದ 100 ಕೋಟಿ ರೂ.ಗಳನ್ನು ತಡೆಹಿಡಿಯದೆ ಬಿಡುಗಡೆ ಮಾಡಿ ಆ ಭಾಗದಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಕಾಮಗಾರಿ ಮುಂದುವರಿಸಬೇಕು ಎಂದು ಶಾಸಕ ಡಾ.ಜಿ.ಪರಮೇಶ್ವರ್ ತಿಳಿಸಿದರು.