Advertisement

ಉಪ ಚುನಾವಣಾ ಕಾರ್ಯತಂತ್ರದ ಕುರಿತು ಸಿಎಂ ಜೊತೆ ಚರ್ಚೆ: ನಳಿನ್‍ ಕುಮಾರ್ ಕಟೀಲ್

06:56 PM Oct 12, 2021 | Team Udayavani |

ಬೆಂಗಳೂರು: ಸಿಂದಗಿ ಮತ್ತು ಹಾನಗಲ್ ವಿಧಾನಸಭಾ ಉಪ ಚುನಾವಣೆಗಳು ಘೋಷಣೆಯಾಗಿವೆ. ನಾಮಪತ್ರ ಸಲ್ಲಿಕೆಯೂ ಮುಗಿದಿದೆ. ಚುನಾವಣಾ ಕಾರ್ಯತಂತ್ರ, ಮುಂದಿನ ಪ್ರವಾಸದ ಕುರಿತು ನಾನು ಮತ್ತು ಮುಖ್ಯಮಂತ್ರಿಗಳು ಚರ್ಚಿಸಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ತಿಳಿಸಿದರು.

Advertisement

ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಎರಡೂ ಕ್ಷೇತ್ರಗಳನ್ನು ನಾವು ಗೆಲ್ಲಲಿದ್ದೇವೆ. ಅದಕ್ಕೆ ಪೂರಕವಾದ ಕಾರ್ಯಗಳನ್ನು ಮಾಡುತ್ತಿದ್ದೇವೆ. ಜಿಲ್ಲಾ ಪಂಚಾಯತ್ ಕ್ಷೇತ್ರಕ್ಕೆ ಸಚಿವರು, ಶಕ್ತಿ ಕೇಂದ್ರಕ್ಕೆ ಶಾಸಕರು ಮತ್ತು ಮತಗಟ್ಟೆಯಲ್ಲಿ ಪದಾಧಿಕಾರಿಗಳನ್ನು ನೇಮಿಸಲಾಗಿದೆ ಎಂದರು.

ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಒಬ್ಬ ಪ್ರಮುಖ ಸಚಿವರು ಹಾಗೂ ಪಾರ್ಟಿಯಿಂದ ಒಬ್ಬ ಪ್ರಧಾನ ಕಾರ್ಯದರ್ಶಿಯನ್ನು ನೇಮಿಸಲಾಗಿದೆ. ರಾಜ್ಯದ ಕೆಲವು ಪ್ರಮುಖರನ್ನು ಈಗ ಪ್ರವಾಸಕ್ಕೆ ನೇಮಿಸಲಾಗಿದೆ ಎಂದರು.

ಇದೇ 16ರ ಬಳಿಕ ಎಲ್ಲ ಸಚಿವರು 2 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಚಾರ ಕಾರ್ಯ ಕೈಗೊಳ್ಳಲಿದ್ದಾರೆ. ಸಂಬಂಧಿತ ಸಂಸದರು ಮತ್ತು ಶಾಸಕರನ್ನೂ ಜೋಡಿಸಿದ್ದು, ಅವರೂ ಅಲ್ಲಿ ಇರುತ್ತಾರೆ. ಯಡಿಯೂರಪ್ಪ ಅವರೂ 2 ಕಡೆ ಪ್ರವಾಸ ಮಾಡಲಿದ್ದಾರೆ ಎಂದು ಪ್ರಶ್ನೆಗೆ ಉತ್ತರಿಸಿದರು.

ಯಡಿಯೂರಪ್ಪ ಅವರು ಉಪ ಚುನಾವಣೆ ನಂತರ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಇನ್ನೊಂದು ಪ್ರಶ್ನೆಗೆ ಉತ್ತರಿಸಿದ ಅವರು, ನಿಗಮ ಮಂಡಳಿಗೆ ನೇಮಕ, ಸಚಿವ ಸಂಪುಟ ವಿಸ್ತರಣೆಯಂಥ ಎಲ್ಲ ಕಾರ್ಯಗಳು ಉಪ ಚುನಾವಣೆ ನಂತರವೇ ನಡೆಯಲಿವೆ ಎಂದು ಪ್ರಶ್ನೆಗೆ ಉತ್ತರಿಸಿದರು.

Advertisement

ಐಟಿ ಅದರದ್ದೇ ಆದ ರೀತಿಯಲ್ಲಿ ಕೆಲಸ ಮಾಡುತ್ತದೆ. ಅದರಲ್ಲಿ ರಾಜಕಾರಣ ಇಲ್ಲ ಎಂದು ಅವರು ಈ ಸಂಬಂಧ ಪ್ರಶ್ನೆಗೆ ಉತ್ತರ ನೀಡಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next