Advertisement
ಕಾಂಗ್ರೆಸ್‌ನ ಮಂಜುನಾಥ ಭಂಡಾರಿ ಶೂನ್ಯ ವೇಳೆಯಲ್ಲಿ ಉದಯವಾಣಿ’ ದಿನಪತ್ರಿಕೆಯಲ್ಲಿ ವಿದ್ಯುತ್ ದರ ಏರಿಕೆಯಾಗುತ್ತಾ? ಎಂಬ ಶೀರ್ಷಿಕೆ ಅಡಿಯಲ್ಲಿ ಪ್ರಕಟವಾದ ವರದಿ ಪ್ರಸ್ತಾಪಿಸಿ, ವಿದ್ಯುತ್ ದರ ಏರಿಕೆಗೆ ಕೆಇಆರ್‌ಸಿಗೆ ಹೆಸ್ಕಾಂಗಳು ಪ್ರಸ್ತಾವನೆ ಸಲ್ಲಿಸಿವೆ. ಈ ಪ್ರಸ್ತಾವನೆಯನ್ನು ಅನುಮೋದಿಸಿದರೆ ಜನಸಾಮಾನ್ಯರಿಗೆ ಹೊರೆಯಾಗುತ್ತದೆ. ಹೀಗಾಗಿ ವಿದ್ಯುತ್ ದರ ಹೆಚ್ಚಳ ನಿರ್ಧಾರ ಮಾಡಬಾರದು ಎಂದು ಆಗ್ರಹಿಸಿದರು.
ಅದಕ್ಕೆ ಉತ್ತರಿಸಿದ ಕೋಟ ಶ್ರೀನಿವಾಸ ಪೂಜಾರಿ, ಹೆಸ್ಕಾಂಗಳು ಸಲ್ಲಿಸಿರುವ ಪ್ರಸ್ತಾವನೆ ಕುರಿತು ಇಂಧನ ಇಲಾಖೆ ಯಾವ ನಿರ್ಧಾರ ತೆಗೆದುಕೊಳ್ಳಲಿದೆ ಎಂಬ ಬಗ್ಗೆ ಇಂಧನ ಸಚಿವರೊಂದಿಗೆ ಚರ್ಚಿಸುತ್ತೇನೆ. ಜತೆಗೆ ಜನ ಸಾಮಾನ್ಯರ ಮೇಲೆ ಹೊರೆಯಾಗದಂತೆ ಕ್ರಮ ಕೈಗೊಳ್ಳುವ ಕುರಿತು ಮಾತುಕತೆ ನಡೆಸಿ ಸದನಕ್ಕೆ ಉತ್ತರಿಸುತ್ತೇನೆ ಎಂದರು.