ಬೆಂಗಳೂರು/ಹೊಸದಿಲ್ಲಿ: ಪಿಎಫ್ ಐ ಸಂಘಟನೆ ಬ್ಯಾನ್ ಮಾಡುವ ಕುರಿತಂತೆ ಕೇಂದ್ರ ಗೃಹ ಇಲಾಖೆ ಜೊತೆ ಸಿಎಂ ಬೊಮ್ಮಾಯಿ ಚರ್ಚಿಸಲಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.
ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಈ ಕುರಿತಂತೆ ಸಿಎಂ ಬಸವರಾಜ್ ಬೊಮ್ಮಾಯಿ ನನ್ನೊಂದಿಗೆ ಚರ್ಚೆ ನಡೆಸಿದ್ದಾರೆ. ಪ್ರವೀಣ್ ನೆಟ್ಟಾರ್ ಅವರ ಹತ್ಯೆ ಹಿಂದೆ ಪಿಎಫ್ಐ ಸಂಘಟನೆಗಳ ಕೈವಾಡ ಇರುವ ಬಗ್ಗೆ ಸಿಎಂ ಬೊಮ್ಮಾಯಿ ಶಂಕೆ ವ್ಯಕ್ತಪಡಿಸಿದ್ದಾರೆ ಎಂದರು.
ಪಿಎಫ್ ಐ ಚಟುವಟಿಕೆಗಳ ಮೇಲೆ ರಾಷ್ಟ್ರಮಟ್ಟದಲ್ಲಿ ನಿಗಾ ಇಡಬೇಕಾಗಿದೆ. ಇಂಥಹ ಸಂಘಟನೆಗಳನ್ನು ರಾಷ್ಟ್ರಮಟ್ಟದಲ್ಲಿಯೇ ಬ್ಯಾನ್ ಮಾಡಬೇಕು ಎಂಬ ಅಭಿಪ್ರಾಯ ಸಿಎಂ ಬೊಮ್ಮಾಯಿ ಅವರದ್ದಾಗಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಗೃಹ ಇಲಾಖೆಯ ಜೊತೆ ಚರ್ಚೆ ನಡೆಸುವುದಾಗಿ ನನ್ನ ಜೊತೆ ಮಾತನಾಡುವಾಗ ತಿಳಿಸಿದ್ದಾರೆ ಎಂದರು.
ಇದನ್ನೂ ಓದಿ:ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಕೇರಳದಲ್ಲಿ ಇಬ್ಬರ ಬಂಧನ
ಪ್ರವೀಣ್ ನೆಟ್ಟಾರ್ ಹತ್ಯೆ ಹಿಂದೆ ಈ ಸಂಘಟನೆಗಳ ಕೈವಾಡ ಇರುವ ಬಗ್ಗೆ ಹಲವು ಪ್ರಾಥಮಿಕ ಮತ್ತು ಮಾಧ್ಯಮ ವರದಿಗಳಿವೆ. ಇಂಥಹ ಕೃತ್ಯ ನಡೆಸುವವರಿಗೆ ಕೇರಳದಲ್ಲಿ ರಕ್ಷಣೆ ನೀಡಲಾಗುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಗಂಭೀರ ಆರೋಪ ಮಾಡಿದ್ದರು.