Advertisement

ಸರ್ಕಾರಿ ಯೋಜನೆಗಳ ಚರ್ಚೆ ದೆಹಲಿ ಪ್ರಯಾಣ : ಸಿಎಂ

06:30 AM Oct 05, 2018 | Team Udayavani |

ಬೆಂಗಳೂರು :ರಾಜ್ಯದ ವಿವಿಧ  ಯೋಜನೆಗಳ ಪ್ರಸ್ತಾವನೆ  ಕುರಿತು ಕೇಂದ್ರ ಸಚಿವರೊಂದಿಗೆ ಚರ್ಚೆ ನಡೆಸಲು ದೆಹಲಿಗೆ ಹೋಗುತ್ತಿದ್ದೇನೆ. ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿಯವರನ್ನು ಭೇಟಿ ಮಾಡುವ ಕಾರ್ಯಕ್ರಮವಿಲ್ಲ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

Advertisement

ಗುರುವಾರ ಬೆಂಗಳೂರು ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಸ್ಮಾರ್ಟ್‌ ಏಷ್ಯಾ ಇಂಡಿಯಾ ಎಕ್ಸ್‌ಪೋ ಮತ್ತು ಸಮ್ಮಿಟ್‌-2018 ಉದ್ಘಾಟಿಸಿ, ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಕೆಲವು ಯೋಜನೆ ಸಂಬಂಧ ಕೇಂದ್ರ ಸಚಿವರ ಜತೆ ಅಗತ್ಯ ಚರ್ಚೆ ಮಾಡಬೇಕಿದ್ದು, ದೆಹಲಿಗೆ ಹೋಗುತ್ತಿದ್ದೇನೆ. ಇದು ಸಂಪೂರ್ಣ ಸರ್ಕಾರಿ ಕಾರ್ಯಕ್ರಮ  ಎಂದು ತಿಳಿಸಿದರು.

ಸಮ್ಮಿಶ್ರ ಸರ್ಕಾರ ಈಗ ಚೆನ್ನಾಗಿ ನಡೆಯುತ್ತಿದೆ. ಆಡಳಿಯಂತ್ರ ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸುತ್ತಿದೆ. ರಾಜ್ಯದ ಅಭಿವೃದ್ಧಿ ವಿಷಯದ ಬಗ್ಗೆ ಕೇಂದ್ರ ಸಚಿವರ ಬಳಿ ಚರ್ಚಿಸಲು ದೆಹಲಿಗೆ ಹೋಗುತ್ತಿದ್ದೇನೆ. ಹಾಗೆಯೇ ಅ.6ರಂದು ಖಾಸಗಿ ಸಂಸ್ಥೆ ಏರ್ಪಡಿಸಿರುವ ಕಾರ್ಯಕ್ರಮ ಒಂದರಲ್ಲಿ ಭಾಗವಹಿಸಲಿದ್ದೇನೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next