Advertisement

BJP-JDS ಮೈತ್ರಿ; ಪ್ರಧಾನಿ ಮೋದಿ, ಶಾ ಮನಸ್ಸಿನಲ್ಲಿ ಏನಿದೆ ಎಂದು ಗೊತ್ತಿಲ್ಲ: ಯಡಿಯೂರಪ್ಪ

06:29 PM Sep 13, 2023 | Team Udayavani |

ಹೊಸದಿಲ್ಲಿ: ಲೋಕಸಭೆ ಚುನಾವಣೆಗೆ ಜೆಡಿಎಸ್ ಜತೆ ಕೈಜೋಡಿಸುವ ಕುರಿತು ಚರ್ಚೆ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಪಕ್ಷದ ಕೇಂದ್ರ ನಾಯಕರು ಅಂತಿಮ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಬುಧವಾರ ಹೇಳಿದ್ದಾರೆ.

Advertisement

ಬಿಜೆಪಿ ಸಂಸದೀಯ ಮಂಡಳಿಯ ಸದಸ್ಯರಾಗಿರುವ ಯಡಿಯೂರಪ್ಪ, ಮುಂಬರುವ ವಿಧಾನಸಭಾ ಚುನಾವಣೆಗಳು ಮತ್ತು 2024 ರ ಲೋಕಸಭೆ ಚುನಾವಣೆಯ ಚುನಾವಣಾ ಸಿದ್ಧತೆಯನ್ನು ಪರಿಶೀಲಿಸಲು ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಭಾಗವಹಿಸಲು ರಾಷ್ಟ್ರ ರಾಜಧಾನಿಯಲ್ಲಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ “ಮೈತ್ರಿ ಕುರಿತು ಮೋದಿಜಿ ಮತ್ತು ಅಮಿತ್ ಶಾಜಿ ಅವರ ಮನಸ್ಸಿನಲ್ಲಿ ಏನಿದೆ ಎಂದು ನಮಗೆ ತಿಳಿದಿಲ್ಲ. ಚರ್ಚೆಗಳು ಇನ್ನೂ ನಡೆಯುತ್ತಿವೆ. ಸೀಟು ಹಂಚಿಕೆ ನಿರ್ಧಾರ ಕೇಂದ್ರ ನಾಯಕರಿಗೆ ಬಿಟ್ಟಿದ್ದು, ಈ ವಿಚಾರದಲ್ಲಿ ನನ್ನ ಯಾವುದೇ ಅಭಿಪ್ರಾಯವಿಲ್ಲ ಅಥವಾ ಸಲಹೆ ನೀಡುವುದಿಲ್ಲ” ಎಂದರು.

”ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ 25-26 ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಲಾಗಿದ್ದು, ಇದಕ್ಕಾಗಿ ರಾಜ್ಯಾದ್ಯಂತ ಜಿಲ್ಲಾ ಕಾರ್ಯಕರ್ತರ ಸಭೆ ನಡೆಸಲಾಗುವುದು. ಇಂಡಿಯಾ ಮೈತ್ರಿ ಕೂಟ ಮೋದಿ ಅವರ ಮುಂದೆ ಶೂನ್ಯ. ನಾವು ಸಂಪೂರ್ಣ ಬಹುಮತ ಪಡೆಯುತ್ತೇವೆ. ಕಳೆದ ಬಾರಿ ಪಡೆದಿದ್ದೇವೆ ಮತ್ತು 2024 ರಲ್ಲಿ ಅದೇ ಸಂಖ್ಯೆಯ ಸ್ಥಾನಗಳನ್ನು ಪಡೆಯುತ್ತೇವೆ. ಮೋದಿ ಮತ್ತೊಮ್ಮೆ ಪ್ರಧಾನಿಯಾಗುತ್ತಾರೆ” ಎಂದರು.

Advertisement

Udayavani is now on Telegram. Click here to join our channel and stay updated with the latest news.

Next