Advertisement

ಅಡಿಕೆ ಎಲೆಚುಕ್ಕೆ ರೋಗ ಭಾದೆ; ರೈತರಿಗೆ ಉಚಿತ ಔಷಧಿ ಪೂರೈಕೆ,ಸಹಾಯಧನ

05:36 PM Sep 16, 2022 | Team Udayavani |

ಬೆಂಗಳೂರು: ಮಲೆನಾಡಿನ ಕೆಲವು ಭಾಗ ಗಳಲ್ಲಿ, ರೈತರ ಬೆನ್ನೆಲುಬಾಗಿರುವ, ಅಡಿಕೆ ಬೆಳೆಗೆ, ಎಲೆ ಚುಕ್ಕೆ ರೋಗ ಭಾಧೆ ಕಾಣಿಸಿಕೊಂಡಿದ್ದು, ರೈತ ಸಮುದಾಯದಲ್ಲಿ ಆತಂಕದ ಛಾಯೆ ಮೂಡಿದೆ. ಈ ಹಿನ್ನೆಲೆಯಲ್ಲಿ, ರಾಜ್ಯ ಅಡಕೆ ಟಾಸ್ಕ್ ಫೋರ್ಸ್ ಅಧ್ಯಕ್ಷರೂ ಆದ, ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ತೋಟಗಾರಿಕಾ ಸಚಿವ ಶ್ರೀ ಮುನಿರತ್ನ ರವರು, ಇಂದು ತೋಟಗಾರಿಕಾ ಹಿರಿಯ ಅಧಿಕಾರಿಗಳೊಂದಿಗೆ, ಸಭೆ ನಡೆಸಿದರು, ರೋಗ ನಿಯಂತ್ರಣದ ಬಗ್ಗೆ ವಿಸ್ತಾರವಾಗಿ ಚರ್ಚಿಸಿದರು.ರೋಗ ಬಾಧೆಯಿಂದ ಹಾನಿ ಅನುಭವಿಸಿದ ರೈತರಿಗೆ, ಆರ್ಥಿಕ ಪರಿಹಾರ ಒದಗಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

Advertisement

ಎಲೆ ಚುಕ್ಕೆ ರೋಗವನ್ನು ಹತೋಟಿಗೆ ತರುವ ಬಗ್ಗೆ, ರೈತರಿಗೆ, ಉಚಿತವಾಗಿ ಔಷದಿ ಹಾಗೂ ಸುಧಾರಿತ ಧೋಟಿಯನ್ನು ಒದಗಿಸುವ ಬಗ್ಗೆ, ಅಧಿಕಾರಿಗಳಿಗೆ, ನಿರ್ದೇಶನ ನೀಡುವುದಾಗಿ, ಸಚಿವ ಶ್ರಿ ಮುನಿರತ್ನ ತಿಳಿಸಿದರು.

ಎಷ್ಟು ಪ್ರಮಾಣದಲ್ಲಿ ಅಡಕೆ ಬೆಳೆ, ಎಲೇಚುಕ್ಕೆ ರೋಗ ದಿಂದಾಗಿ ಹಾನಿಯಾಗಿದೆ ಎಂಬುದರ ಬಗ್ಗೆ ಸಮೀಕ್ಷಾ ಕಾರ್ಯ ನಡೆಸುವ ಬಗ್ಗೆಯೂ ನಿರ್ಧರಿಸಲಾಯಿತು.

ಎಲೆಚುಕ್ಕೆ ರೋಗ ಬಾಧೆಯ ತೀವ್ರತೆಯ ಬಗ್ಗೆ ಪ್ರಸ್ತಾಪಿಸಿದ, ಗೃಹ ಸಚಿವರು, ತಕ್ಷಣವೇ ರೋಗವನ್ನು ಹತೋಟಿಗೆ ತರಲು ಅನುಕೂಲವಾಗುವಂತೆ, ರೈತರಿಗೆ, ಉಚಿತವಾಗಿ ಔಷದಿ ಹಾಗೂ ಇತರ ಸಹಾಯವನ್ನು ಸರಕಾರದಿಂದ ನೀಡಲಾಗುವುದು, ಎಂದು ಸಚಿವರು ತಿಳಿಸಿದರು.

ಬಂದರು ಹಾಗೂ ಮೀನುಗಾರಿಕಾ ಸಚಿವ ಎಸ್ ಅಂಗಾರ , ತೋಟಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯ ಹಾಗೂ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next