Advertisement

ಸಿಎಂ ಕುಟುಂಬಕ್ಕೆ ಅವಹೇಳನ: ಯುವಕರ ಸೆರೆ

01:15 AM Jun 09, 2019 | Lakshmi GovindaRaj |

ಬೆಂಗಳೂರು: ಲೋಕಸಭೆ ಚುನಾವಣೆ ಫ‌ಲಿತಾಂಶದ ನಂತರ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ, ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಅವರ ಪುತ್ರ ನಿಖಿಲ್‌ ಕುಮಾರಸ್ವಾಮಿ ವಿರುದ್ಧ ಅವಹೇಳನಾಕಾರಿಯಾಗಿ ಮಾತನಾಡಿದ ವಿಡಿಯೋವನ್ನು ಸಾಮಾಜಿಕ ಜಾಲತಾಣ “ಫೇಸ್‌ಬುಕ್‌’ನಲ್ಲಿ ಹರಿಬಿಟ್ಟಿದ್ದ ಇಬ್ಬರು ಯುವಕರನ್ನು ಹೈಗ್ರೌಂಡ್ಸ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ.

Advertisement

ರಾಮನಗರ ಜಿಲ್ಲೆಯ ಸಿದ್ಧರಾಜು (26) ಹಾಗೂ ಚನ್ನಪಟ್ಟಣದ ಸಿಂಗರಾಜಪುರದ ಚಾಮರಾಜು (28) ಬಂಧಿತರು. ಚಾಮರಾಜು ಕಾರು ಚಾಲಕನಾಗಿದ್ದು, ಸಿದ್ಧರಾಜು ಪೆಟ್ರೋಲ್‌ ಬಂಕ್‌ನಲ್ಲಿ ಕೆಲಸ ಮಾಡುತ್ತಿದ್ದ. ಮೇ 23ರ ಲೋಕಸಭಾ ಚುನಾವಣೆಯ ಫ‌ಲಿತಾಂಶ ಹೊರ ಬಿಳುತ್ತಿದ್ದಂತೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಪುತ್ರ ನಿಖಿಲ್‌ ಕುಮಾರಸ್ವಾಮಿ ಹಾಗೂ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ವಿಡಿಯೋ ಮಾಡಿಕೊಂಡಿದ್ದರು.

ಆ ವಿಡಿಯೋವನ್ನು ಫೇಸ್‌ಬುಕ್‌ನಲ್ಲಿ ಅಪ್‌ಲೋಡ್‌ ಮಾಡಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್‌ ಆಗಿದ್ದು, ಭಾರೀ ಚರ್ಚೆಗೂ ಗ್ರಾಸವಾಗಿತ್ತು. ಈ ವಿಡಿಯೋದಿಂದ ಸಿಎಂ ಕುಮಾರಸ್ವಾಮಿ, ಅವರ ಪುತ್ರ ನಿಖಿಲ್‌ ಕುಮಾರಸ್ವಾಮಿ ಹಾಗೂ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರ ಘನತೆಗೆ ಧಕ್ಕೆ ಉಂಟಾಗಿದ್ದು,

ಕೃತ್ಯ ಎಸಗಿದ ಆರೋಪಿಗಳ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ಲೋಕೇಶ್‌ ಎಂಬವರು ಹೈಗ್ರೌಂಡ್ಸ್‌ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇದೀಗ ಆರೋಪಿಗಳನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next