Advertisement

ತೀರ್ಪಿನ ಬಗ್ಗೆ ಅಸಮಾಧಾನವಿದೆ, ನಾವು ಸುಪ್ರೀಂ ಕೋರ್ಟ್ ಗೆ ಹೋಗುತ್ತೇವೆ: ಸಿ.ಎಂ.ಇಬ್ರಾಹಿಂ

12:09 PM Mar 15, 2022 | Team Udayavani |

ಬೆಂಗಳೂರು: ಹಿಜಾಬ್ ವಿವಾದ ಕುರಿತಾಗಿ ಹೈಕೋರ್ಟ್ ತೀರ್ಪು ಬಂದಿದೆ. ಆದರೆ  ತೀರ್ಪಿನ ಬಗ್ಗೆ ನಮಗೆ ಅಸಮಾಧಾನವಿದೆ. ಅದಕ್ಕೆ ನಾವು ಸುಪ್ರೀಂ ಕೋರ್ಟ್ ಮೊರೆ ಹೋಗುತ್ತೇವೆ ಎಂದು ವಿಧಾನಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ತೀರ್ಪನ್ನು ಧರ್ಮದ ದೃಷ್ಟಿಯಿಂದ ನೋಡಬಾರದು. ಸಂವಿಧಾನದ ದೃಷ್ಠಿಯಿಂದ ನೋಡಬೇಕು. ತೀರ್ಪಿನಿಂದ ಬೀದಿಗಿಳಿಯಬೇಕಾದ ಅವಶ್ಯಕತೆಯಿಲ್ಲ. ನ್ಯಾಯಾಂಗದ ಮೇಲೆ ನಮಗೆ ವಿಶ್ವಾಸವಿದೆ. ಸುಪ್ರೀಂಗೆ ಹೋಗುವುದಕ್ಕೆ ಅವಕಾಶವಿದೆ ಎಂದರು.

ನಾಳೆ ನೀವು ವಿಭೂತಿ ಹಾಕಬಾರದು ಎನ್ನುತ್ತೀರ. ನನಗೆ ಹಾಕಬೇಕೆಂದು ಇಷ್ಟವಿದೆ ನನ್ನನ್ನ ತಡೆಯಲು ನಿಮಗೆ ಹೇಗೆ ಸಾಧ್ಯ? ಇದರ ಬಗ್ಗೆ ಸುಪ್ರೀಂ ಕೋರ್ಟ್ ನಲ್ಲಿ ಚಾಲೆಂಜ್ ಆಗಬೇಕಿದೆ. ಲಾಯರ್ ಮಜೀದ್ ಮೆಮನ್ ಜೊತೆಯೂ ನಾನು ಚರ್ಚೆ ಮಾಡಿದ್ದೇನೆ. ಒಗ್ಗಟ್ಟಾಗಿ ಸುಪ್ರೀಂಗೆ ಹೋಗಲು ಪ್ರಯತ್ನ ಮಾಡುತ್ತಿದ್ದೇವೆ. ರಾಜ್ಯದಲ್ಲಿ ಶಾಂತಿ ಕಾಪಾಡುವುದಕ್ಕೆ ನೋಡುತ್ತಿದ್ದೇವೆ ಎಂದು ಇಬ್ರಾಹಿಂ ಹೇಳಿದರು.

ಇದನ್ನೂ ಓದಿ:ಹಿಜಾಬ್ ಕುರಿತಾಗಿ ‘ಹೈ’ ತೀರ್ಪು: ಮಹತ್ತರ ತೀರ್ಪಿನಲ್ಲಿ ಹೈಕೋರ್ಟ್ ಉಲ್ಲೇಖಿಸಿದ ಅಂಶಗಳೇನು?

ಇದು ಇಲ್ಲಿಗೆ ನಿಲ್ಲುವುದಿಲ್ಲ. ನಾಳೆ ಜೀನ್ಸ್ ಸೇರಿದಂತೆ ಬೇರೆ ಉಡುಪಿನ ಬಗ್ಗೆ ಚರ್ಚೆಯಾಗಬಹುದು. ಹಿಂದೂಗಳು ಸೆರಗನ್ನು ಮೈಮೇಲೆ ಹಾಕುತ್ತಾರೆ. ಮುಸ್ಲಿಂ ಹೆಣ್ಣುಮಕ್ಕಳು ತಲೆಮೇಲೆ ಹಾಕುತ್ತಾರೆ. ಹಾಗಾದರೆ ತಾಯಂದಿರು ಸೆರಗು ಹಾಕುವುದು ತಪ್ಪೇ ಎಂದು ಪ್ರಶ್ನಿಸಿದರು.

Advertisement

ಸಮುದಾಯದ ಟಾರ್ಗೆಟ್: ತನ್ವೀರ್ ಸೇಠ್

ಹಿಜಾಬ್ ಬಗ್ಗೆ ನ್ಯಾಯಾಲಯ ತೀರ್ಪು ಕೊಟ್ಟಿದೆ. ಇದನ್ನು ಪ್ರಶ್ನಿಸಿ ನಾವು ಸುಪ್ರೀಂಗೆ ಹೋಗುತ್ತೇವೆ. ದೇಶವನ್ನ ಪ್ರಗತಿಪರವಾಗಿ ಕಟ್ಟಬೇಕು. ದೇಶದ ಐಕ್ಯತೆಗೆ ಇವತ್ತು ಧಕ್ಕೆ ಬಂದಿದೆ. ಇದರಲ್ಲಿ ಯಾವುದೇ ರಾಜಕೀಯವಿಲ್ಲ. ನಾವು ಸುಪ್ರೀಂಕೋರ್ಟ್ ಗೆ ಹೋಗುತ್ತೇವೆ. ಮತಾಂತರ ನಿಷೇಧ ಕಾಯ್ದೆ ಸೇರಿದಂತೆ ಒಂದು ಸಮುದಾಯವನ್ನು ಟಾರ್ಗೆಟ್ ಮಾಡುವ ಕೆಲಸವಾಗುತ್ತಿದೆ ಎಂದು ಮಾಜಿ ಸಚಿವ ತನ್ವೀರ್ ಸೇಠ್ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next