Advertisement
ಇಂದು ಬಿಎಸ್ ವೈ ಸಂಪುಟಕ್ಕೆ ಉಮೇಶ್ ಕತ್ತಿ, ಮುರುಗೇಶ್ ನಿರಾಣಿ, ಸಿ.ಪಿ. ಯೋಗೇಶ್ವರ್, ಎಂ.ಟಿ.ಬಿ ನಾಗರಾಜ್, ಆರ್ ಶಂಕರ್, ಎಸ್. ಅಂಗಾರ, ಅರವಿಂದ ಲಿಂಬಾವಳಿ ಸಂಪುಟ ಸೇರಲಿದ್ದಾರೆ.
Related Articles
Advertisement
ಯೋಗೇಶ್ವರ್ ಮೇಲೆ 420ರ ಅಡಿ ಪ್ರಕರಣ ದಾಖಲಾಗಿದೆ. ಹಲವರಿಗೆ ವಂಚನೆ ಮಾಡಿದ್ದಾನೆ. ಅವನಿಗೇಕೆ ಸಚಿವ ಸ್ಥಾನ ಎಂದು ವಿಶ್ವನಾಥ್ ಏಕವಚನದಲ್ಲಿ ಪ್ರಹಾರ ನಡೆಸಿದ್ದಾರೆ.
ಸತೀಶ್ ರೆಡ್ಡಿ ಆಕ್ರೋಶ
ಬೊಮ್ಮನಹಳ್ಳಿ ಕ್ಷೇತ್ರದ ಶಾಸಕ ಸತೀಶ್ ರೆಡ್ಡಿ ಅವರು ಟ್ವೀಟ್ ಮೂಲಕ ತನ್ನ ಅಸಮಾಧಾನ ತೋಡಿಕೊಂಡಿದ್ದಾರೆ.
“ರೀ ಯಡಿಯೂರಪ್ಪನವರೇ ಮಂತ್ರಿಮಂಡಲ ವಿಸ್ತರಣೆಯಲ್ಲಿ ಸಚಿವರ ಆಯ್ಕೆ ಪ್ರಕ್ರಿಯೆಯ ಮಾನದಂಡಗಳೇನು? ನಿಮಗೆ, ನಮ್ಮ ರಾಜ್ಯ ಮತ್ತು ರಾಷ್ಟ್ರದ ನಾಯಕರುಗಳಿಗೆ ನಿಷ್ಟಾವಂತ ಯುವ ಕಾರ್ಯಕರ್ತರು ಕಾಣುತ್ತಿಲ್ಲವೆ? ನಮ್ಮ ಕಷ್ಟ ನಷ್ಟಗಳನ್ನು ಆಲಿಸುತ್ತಿದ್ದ ಶ್ರೀ ಅನಂತಕುಮಾರ್ ಜಿ ರವರ ಇಲ್ಲದಿರುವಿಕೆ ಎದ್ದು ಕಾಣುತ್ತಿದೆ” ಎಂದು ಸತೀಶ್ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಣ್ಣೀರಿಟ್ಟ ರೇಣುಕಾಚಾರ್ಯ
ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ಶಾಸಕ ಎಂ.ಪಿ. ರೇಣುಕಾಚಾರ್ಯ ನಿರಾಸೆಯಿಂದ ಕಣ್ಣೀರಿಟ್ಟರು. ನನಗೆ ಬೇರೆಯವರ ರೀತಿ ಮಂತ್ರಿ ಸ್ಥಾನಕ್ಕಾಗಿ ಲಾಬಿ ಮಾಡುವುದು ಬರುವುದಿಲ್ಲ. ನೇರ, ನಿಷ್ಠೂರವಾಗಿ ಮಾತನಾಡಿದ್ದೇ ನನಗೆ ಮುಳುವಾಯ್ತು. ನಾನು ಕೂಡ ಚುನಾವಣೆಯಲ್ಲಿ ಸೋತಿದ್ದರೆ ಮಂತ್ರಿಯಾಗುತ್ತಿದ್ದೇವೇನೊ? ಸೋತವರನ್ನೇ ಸಂಪುಟಕ್ಕೆ ತೆಗೆದುಕೊಂಡರೆ ಹಿರಿಯರ ಗತಿಯೇನು ಎಂದು ಬೇಸರ ತೋಡಿಕೊಂಡಿದ್ದಾರೆ.