Advertisement

ಕುಡಿವ ನೀರಿನ ಸಮಸ್ಯೆ ನೀಗಿಸಿ

04:11 PM Apr 24, 2017 | Team Udayavani |

ಕಲಬುರಗಿ: ಇಲ್ಲಿನ ಸೂಪರ್‌ ಮಾರ್ಕೆಟ್‌ ನಲ್ಲಿರುವ ಬಿಜೆಪಿ ಕಾರ್ಯಾಲಯದಲ್ಲಿ ಬಿಜೆಪಿ ಯುವ ಮೋರ್ಚಾ ಕಲಬುರಗಿ ಗ್ರಾಮಾಂತರ ಜಿಲ್ಲೆಯ ಕಾರ್ಯಕಾರಿಣಿ ಸಭೆ ರವಿವಾರ ನಡೆಯಿತು. ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಸವರಾಜ ಯಂಕಂಚಿ ಕಾರ್ಯಕ್ರಮ ಉದ್ಘಾಟಿಸಿ, ಇವತ್ತು ರಾಜ್ಯದಲ್ಲಿ ಬೇಸಿಗೆಯಿಂದ ಜನರು ಕುಡಿಯುವ ನೀರಿಗಾಗಿ ತತ್ತರಿಸಿದ್ದಾರೆ.

Advertisement

ಆ ಸಮಸ್ಯೆಯನ್ನು ಸರಕಾರಕ್ಕೆ ನಿರ್ವಹಣೆ ಮಾಡಲು ಸಾಧ್ಯವಾಗುತ್ತಿಲ್ಲ. ಈ ನಿಟ್ಟಿನಲ್ಲಿ ಬಿಜೆಪಿ ಕಾರ್ಯಕರ್ತರು ಸರಕಾರ ವಿಫಲತೆಯನ್ನು ಜನತೆಗೆ ಮುಟ್ಟಿಸಿ ಹೋರಾಟ ಮಾಡುವ ಮೂಲಕ ಸ್ಥಳೀಯ ಜಿಲ್ಲಾಡಳಿತವನ್ನು ಎಚ್ಚರ ಮಾಡುವ ಕೆಲಸ ಮಾಡಬೇಕು ಎಂದು ಒತ್ತಾಯಿಸಿದರು. 

ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ  ಅಧ್ಯಕ್ಷ ಪ್ರವೀಣ ತೆಗನೂರ, ಮುಂಬರುವ 2018ರ ಚುನಾವಣೆಯಲ್ಲಿ ಬೂತ್‌ ಮಟ್ಟದ ಸಂಘಟನೆ ಬಲಪಡಿಸಲು ಹಾಗೂ ರಾಜ್ಯ ಸರ್ಕಾರದ ವೈಫಲ್ಯದ ವಿರುದ್ಧ ಹೋರಾಟ ಮಾಡಿ ಎಂದು ಕರೆ ನೀಡಿದರು. ಈ ವೇಳೆಯಲ್ಲಿ ಹಲವು ನಿರ್ಣಯ ಕೈಗೊಳ್ಳಲಾಯಿತು.

ಜಿಲ್ಲೆಯ ಬೇಸಿಗೆ ಬಿಸಿಲಿನಿಂದ ತತ್ತರಿಸಿ ಹೋಗಿದೆ.  ತಾಪಮಾನವು ಗರಿಷ್ಠ ಉಷ್ಣಾಂಶವು ದಾಖಲಾಗುತ್ತಿದೆ, ಕುಡಿಯುವ ನೀರಿನ ಸಮಸ್ಯೆ ಬಗೆ ಹರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತವನ್ನು ಆಗ್ರಹಿಸುವುದು, ತೊಗರಿ ಬೆಂಬಲ ಬೆಲೆಯಲ್ಲಿ ಖರೀದಿಗೆ ಇನ್ನಷ್ಟು ದಿನ ವಿಸ್ತರಣೆ ಮಾಡುವುದು.

ಅಲ್ಲದೆ ನಮ್ಮ ರೈತರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿ ಎತ್ತುವುದು. ಇನ್ನೊಂದೆಡೆ ರಾಜ್ಯ ಸರಕಾರ ಕಬ್ಬಿಗೆ ಸರಿಯಾದ ದರವನ್ನು ನೀಡುತ್ತಿಲ್ಲ. ಬದಲಿಗೆ ಕಬ್ಬಿನ ಬಾಕಿ ಹಣವನ್ನು ನೀಡುವಲ್ಲಿ ಸರಿಯಾದ ನಿರ್ವಹಣೆ ಮಾಡುತ್ತಿಲ್ಲ. ಈ ನಿಟ್ಟಿನಲ್ಲಿ ಗಮನ ಹರಿಸಿ ನ್ಯಾಯ ಒದಗಿಸಬೇಕು ಎನ್ನುವ ನಿರ್ಣಯ ಕೈಗೊಳ್ಳಲಾಯಿತು. 

Advertisement

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಪ್ಪಾಶಾ ಬುರಲಿ,ಮಲ್ಲು ಉದನೂರ, ರಾಘವೇಂದ್ರ ಚಿಂಚನಸೂರ, ಸಂತೋಷ ಹಾದಿಮನಿ, ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಶರಣು ಸಜ್ಜನಶೆಟ್ಟಿ, ವಿನೋದ ರಾಠೊಡ, ನಾಗಣ್ಣ ರಾಂಪುರೆ, ಬಸವರಾಜ ಲಾಡವಂತಿ, ಅಶೋಕ ಬಬಲಾದ, ಶಂಕರ ಹಡಪದ, ರಾಜಕುಮಾರ ಸಿಂಗಾ, ವೀರಣ್ಣ ರಾಯಕೋಡ, ಶಿವರಾಜ ಪಾಟೀಲ, ಶೇಖರ ಪಾಟೀಲ,ಮಲ್ಲಿನಾಥ ಕೋಲಕುಂದಿ ಹಾಗೂ ಗ್ರಾಮಾಂತರ ಜಿಲ್ಲೆಯ ಎಲ್ಲ ಮಂಡಲದ ಅಧ್ಯಕ್ಷರು ಪದಾಧಿಧಿಕಾರಿಗಳು ಹಾಜರಿದ್ದರು.  

Advertisement

Udayavani is now on Telegram. Click here to join our channel and stay updated with the latest news.

Next