Advertisement

America ಡಿಸ್ನಿಲ್ಯಾಂಡ್‌ ಮಾದರಿ ಕೆಆರ್‌ಎಸ್‌ ಅಭಿವೃದ್ಧಿ

11:38 PM Jul 26, 2024 | Team Udayavani |

ಬೆಂಗಳೂರು: ಕೃಷ್ಣರಾಜಸಾಗರ ಜಲಾಶಯ (ಕೆಆರ್‌ಎಸ್‌) ಕೆಳಭಾಗದಲ್ಲಿರುವ ಉದ್ಯಾನವನ್ನು ಅಮೆರಿಕದ ಡಿಸ್ನಿಲ್ಯಾಂಡ್‌ ಮಾದರಿಯಲ್ಲಿ ಅಭಿವೃದ್ಧಿಪಡಿಸುವ ಯೋಜನೆ ಈಗ ಮರುಜೀವ ಪಡೆದಿದ್ದು ಸುಮಾರು 2,663 ಕೋಟಿ ರೂ. ವೆಚ್ಚದಲ್ಲಿ ವಿಶ್ವದರ್ಜೆಯ ಪ್ರವಾಸಿ ತಾಣವನ್ನಾಗಿ ನಿರ್ಮಿಸಲು ಉದ್ದೇಶಿಸಿರುವ ಈ ಯೋಜನೆಗೆ ಶುಕ್ರವಾರ ಸಚಿವ ಸಂಪುಟ ಅನುಮೋದನೆ ನೀಡಿದೆ.

Advertisement

ತಮಿಳುನಾಡು, ಕೇರಳ ಸೇರಿದಂತೆ ದಕ್ಷಿಣ ಭಾರತದ ಜೀವನಾಡಿ ಆಗಿರುವ ಕಾವೇರಿ ಒಡಲು ಮಂಡ್ಯ ಜಿಲ್ಲೆಯ ಕೆಆರ್‌ಎಸ್‌ ಜಲಾಶಯದ ಕೆಳಭಾಗದಲ್ಲಿ 198 ಎಕರೆ ವಿಸ್ತೀರ್ಣದಲ್ಲಿ ಉದ್ಯಾನವನ್ನು ಮೇಲ್ದರ್ಜೆಗೇರಿಸಿ ಸೌಂದರ್ಯೀಕರಣ ಮತ್ತು ಪ್ರವಾಸೋದ್ಯಮ ಕಾಮಗಾರಿಗಳನ್ನು ಕೈಗೊಳ್ಳಲು ಸರಕಾರ ಉದ್ದೇಶಿಸಿದೆ.

ಡಿಸ್ನಿಲ್ಯಾಂಡ್‌ ಮಾದರಿಯಲ್ಲಿ ಇದು ತಲೆಯೆತ್ತಲಿದೆ. ಸಾರ್ವಜನಿಕ-ಖಾಸಗಿ ಸಹಭಾಗಿತ್ವ (ಪಿಪಿಪಿ)ದಲ್ಲಿ ಯೋಜನೆ ಕೈಗೊಳ್ಳಲು ನಿರ್ಧರಿಸಿದ್ದು ಈ ಸಂಬಂಧದ ಟೆಂಡರ್‌ ಕರೆಯಲು ಪ್ರಸ್ತಾವನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಂಪುಟದಲ್ಲಿ ಅನುಮೋದಿಸಲಾಯಿತು.

ಸಚಿವ ಸಂಪುಟ ಸಭೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಸಚಿವ ಎಚ್‌.ಕೆ. ಪಾಟೀಲ್‌, ಮಂಡ್ಯ ಜಿಲ್ಲೆಯ ಕೃಷ್ಣರಾಜಸಾಗರ ಜಲಾಶಯದ ಕೆಳಭಾಗದಲ್ಲಿನ 198 ಎಕರೆ ಜಾಗದಲ್ಲಿ ಉದ್ಯಾನವನ ಸೌಂದರ್ಯೀಕರಣ ಹಾಗೂ ಪ್ರವಾಸೋದ್ಯಮ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಉದ್ದೇಶಿಸಲಾಗಿದ್ದು ಸಾರ್ವಜನಿಕ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಕೈಗೊಳ್ಳಲು ಈಗಾಗಲೇ ನೀಡಿರುವ ಅನುಮೋದನೆಯಂತೆ ಟೆಂಡರ್‌ ಕರೆಯುವ ಪ್ರಸ್ತಾವನೆಗೆ ಸಚಿವ ಸಂಪುಟ ಅನುಮೋದಿಸಿದೆ’ ಎಂದು ಮಾಹಿತಿ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next