Advertisement

Bantwal: ಫೇಸ್ಬುಕ್ ನಲ್ಲಿ ಕೋಮುಭಾವನೆ ಕೆರಳಿಸುವ ಅವಹೇಳನಕಾರಿ ಬರಹ; ವ್ಯಕ್ತಿ ಬಂಧನ

08:33 AM Dec 09, 2024 | Team Udayavani |

ಬಂಟ್ವಾಳ: ಕೋಮುಭಾವನೆ ಕೆರಳಿಸುವ ಅವಹೇಳನಕಾರಿ ಬರಹ ಬರೆದು ಫೇಸ್ ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿ ಸಾಮಾಜಿಕ ಜಾಲತಾಣದ ಮೂಲಕ ವೈರಲ್ ಮಾಡಿದ ಆರೋಪದಲ್ಲಿ ವ್ಯಕ್ತಿಯೊಬ್ಬನನ್ನು ಬಂಧಿಸಿರುವ ಘಟನೆ ಬಂಟ್ವಾಳದಲ್ಲಿ ನಡೆದಿದೆ.

Advertisement

ತಾಲೂಕಿನ ಅರಳ ಗ್ರಾಮದ  ನವಗ್ರಾಮ ಸೈಟ್ ನಿವಾಸಿ ಜಯಪೂಜಾರಿ ಎಂಬಾತ ಆರೋಪಿಯಾಗಿದ್ದು ಪೊಲೀಸರ ಬಂಧನಕ್ಕೆ ಒಳಗಾಗಿದ್ದಾನೆ.

‌ಈತನ ಫೇಸ್ ಬುಕ್ ಖಾತೆಯಲ್ಲಿ ಮಹಿಳೆಯರ ಬಗ್ಗೆ ಮಾನಕ್ಕೆ ಕುಂದುಂಟಾಗುವ ,ಮಹಿಳೆಯ ತೇಜೋವಧೆಯುಂಟಾಗುವ ರೀತಿಯಲ್ಲಿ ಮತ್ತು ಧರ್ಮ ಧರ್ಮಗಳ ಮಧ್ಯೆ ಕೋಮುಭಾವನೆ ಕೆರಳುವ ರೀತಿಯಲ್ಲಿ ಅವಹೇಳನಕಾರಿಯಾಗಿ ಬರಹ ಬರೆದು ಪೋಸ್ಟ್ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುವಂತೆ ಮಾಡಿರುವುದರ ವಿರುದ್ದ ಬಂಟ್ವಾಳ ಗ್ರಾಮಾಂತರ ಪೋಲೀಸರು ಸುಮೋಟೋ ಕೇಸ್ ದಾಖಲಿಸಿ ಈತನನ್ನು ಬಂಧಿಸಿ , ನ್ಯಾಯಾಲಯಕ್ಕೆ ಹಾಜರುಪಡಿಸಿದ್ಧರು. ನ್ಯಾಯಾಲಯ ಈತನಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next