Advertisement

ರಾಜ್ಯೋತ್ಸವದಲ್ಲಿ ಸ್ತಬ್ಧ ಚಿತ್ರ ಪ್ರದರ್ಶಿಸಿ

04:57 PM Oct 23, 2021 | Team Udayavani |

ತುಮಕೂರು: ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನ.1ರಂದು ನಡೆಯುವ ಕನ್ನಡ ತಾಯಿ ಭುವನೇಶ್ವರಿ ದೇವಿ ಮೆರವಣಿಗೆ ಯಲ್ಲಿ ಕೃಷಿ, ತೋಟಗಾರಿಕೆ, ಜಿಪಂ, ಪ್ರಾದೇಶಿಕ ಸಾರಿಗೆ ಕಚೇರಿ, ಕೆ.ಎಸ್‌.ಆರ್‌.ಟಿ.ಸಿ, ಮಹಾನಗರ ಪಾಲಿಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಸ್ತಬ್ಧಚಿತ್ರಗಳನ್ನು ಸಿದ್ಧಪಡಿಸಿ ಪ್ರದರ್ಶಿಸಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.

Advertisement

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಕಳೆದ ವರ್ಷದಂತೆ ಕೋವಿಡ್‌ ನಿಯಮಗಳನ್ನು ಅನುಸರಿಸುವ ಮೂಲಕ ನಾಡ ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲು ಕ್ರಮ ಕೈಗೊಳ್ಳ ಬೇಕು ಎಂದು ಸೂಚಿಸಿದರು.

ಪ್ರತಿ ವರ್ಷದಂತೆ ಕನ್ನಡ ತಾಯಿ ಶ್ರೀ ಭುವನೇಶ್ವರಿ ದೇವಿಯ ಪ್ರತಿಮೆಯನ್ನು ಅಲಂಕೃತ ಬೆಳ್ಳಿರಥ ವಾಹನದ ಲ್ಲಿರಿಸಿ ಸಾಂಸ್ಕೃತಿಕ ಕಲಾ ತಂಡಗಳು ಹಾಗೂ ಸ್ತಬ್ಧಚಿತ್ರ ಗಳೊಂ ದಿಗೆ ಡೀಸಿ ಕಾರ್ಯಾಲಯದ ಮುಂಭಾಗದಿಂದ ಬೆಳಗ್ಗೆ 8 ಗಂಟೆಗೆ ಮೆರವಣಿಗೆ ಪ್ರಾರಂಭಿಸಿ, ನಗರದ ಅಶೋಕ ರಸ್ತೆ, ಟೌನ್‌ ಹಾಲ್‌ ವೃತ್ತ, ಬಿ.ಹೆಚ್‌. ರಸ್ತೆ, ಭದ್ರಮ್ಮ ವೃತ್ತದ ಮೂಲಕ ಅಂತಿಮವಾಗಿ ಸರ್ಕಾರಿ ಜೂನಿಯರ್‌ ಕಾಲೇಜ್‌ ಮೈದಾನದಲ್ಲಿ ಸೇರಬೇಕೆಂದು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ಸೂಕ್ತ ವ್ಯವಸ್ಥೆ ಮಾಡಿ: ರಾಜ್ಯೋತ್ಸವ ದಿನದಂದು ಬೆಳಗ್ಗೆ 9 ಗಂಟೆಗೆ ಸರ್ಕಾರಿ ಜೂನಿಯರ್‌ ಕಾಲೇಜು ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ ಮತ್ತು ಗೌರವ ರಕ್ಷೆ ಸ್ವೀಕಾರ, ಕನ್ನಡ ರಾಜ್ಯೋತ್ಸವದ ಸಂದೇಶ ನೀಡುವ ಕಾರ್ಯಕ್ರಮ ನಡೆಯಲಿದ್ದು, ಸೂಕ್ತ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದರು.

ಇದನ್ನೂ ಓದಿ:- ಐದು ಜನ ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಬಂಧನ

Advertisement

 ವಿದ್ಯುತ್‌ ದೀಪಾಲಂಕಾರಕ್ಕೆ ಕ್ರಮ: ರಾಜ್ಯೋತ್ಸದ ಹಿನ್ನೆಲೆ ಯಲ್ಲಿ ಅ.31 ಮತ್ತು ನ.1ರಂದು ಎರಡು ದಿನಗಳ ಕಾಲ ಮಹಾನಗರ ಪಾಲಿಕೆ ಕಚೇರಿ ಮುಂಭಾಗದಲ್ಲಿ ಹೂವಿನಿಂದ ಅಲಂಕರಿಸಿದ ಕಮಾನು ಮತ್ತು ಟೌನ್‌ಹಾಲ್‌ ವೃತ್ತ, ಶ್ರೀಶಿವ ಕುಮಾರ ಸ್ವಾಮಿ ವೃತ್ತ, ಭದ್ರಮ್ಮ ವೃತ್ತ, ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದ ವೃತ್ತ ಮತ್ತು ಹೊರಪೇಟೆ ವೃತ್ತ ಸೇರಿದಂತೆ ನಗರದ ಪ್ರಮುಖ ವೃತ್ತ ಹಾಗೂ ಎಲ್ಲಾ ಸರ್ಕಾರಿ ಕಚೇರಿಗಳ ಕಟ್ಟಡಕ್ಕೆ ವಿದ್ಯುತ್‌ ದೀಪಾಲಂಕಾರಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ರಾಜ್ಯೋತ್ಸವದಂದು ಕಾಲೇಜು ಮೈದಾನದಲ್ಲಿ ಆ್ಯಂಬುಲೆನ್ಸ್‌ ವಾಹನ, ಸ್ಯಾನಿಟೈಸರ್‌, ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವ ಜೊತೆಗೆ ಕೋವಿಡ್‌-19 ನಿಯಮ ಉಲ್ಲಂಘನೆ ಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ, ಉಪ ವಿಭಾಗಾಧಿಕಾರಿ ಅಜಯ್‌, ಪ್ರಾದೇಶಿಕ ಸಾರಿಗೆ ಅಧಿಕಾರಿ ರಾಜು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇ ಶಕ ಶ್ರೀನಿವಾಸ್‌ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಕನ್ನಡಪರ ಸಂಘ- ಸಂಸ್ಥೆಗಳ ಪದಾಧಿಕಾರಿಗಳು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next