ಎರಡು ತಿಂಗಳ ಕಡತ ವಿಲೇವಾರಿ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಅವರು, ಕಂದಾಯ ಇಲಾಖೆಯಲ್ಲಿ ಕಡತಗಳ ಸಂಖ್ಯೆ ದಿನೇ ದಿನೇ ಏರುತ್ತಲೇ ಇರುತ್ತದೆ. ಇದರಿಂದ ಇಲಾಖೆ ಸಿಬಂದಿಯ ಮೇಲಿನ ಕೆಲಸದ ಒತ್ತಡವೂ ಹೆಚ್ಚು. ಕಂದಾಯ ಇಲಾಖೆಯಲ್ಲಿ ಕಡತಗಳು ಮುಂದೆ ಹೋಗುವುದೇ ಇಲ್ಲ ಎಂಬ ಸಾರ್ವಜನಿಕ ದೂರೂ ಇದೆ. ಹಿಂದಿನ ಈ ಪರಿಪಾಠಗಳಿಗೆ ಪೂರ್ಣ ವಿರಾಮ ಇಡುವ ಸಂಕಲ್ಪದೊಂದಿಗೆ ಪ್ರಸ್ತುತ ಕಂದಾಯ ಇಲಾಖೆ ಕೆಲಸ ನಿರ್ವಹಿಸುತ್ತಿದೆ ಎಂದಿದ್ದಾರೆ.
Advertisement
ಕಂದಾಯ ಇಲಾಖೆಯಲ್ಲಿ ಸಕಾರಾತ್ಮಕ ಬದಲಾವಣೆ ತರಬೇಕೆಂಬ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷ ಹಾಗೂ ಸಿಎಂ ಸಿದ್ದರಾಮಯ್ಯನವರು ನನ್ನ ಮೇಲೆ ಭರವಸೆ ಇಟ್ಟು ಕಂದಾಯ ಇಲಾಖೆ ಜವಾಬ್ದಾರಿ ನೀಡಿದರು. ಅಧಿಕಾರ ವಹಿಸಿದ ಕಳೆದ ಎರಡು ತಿಂಗಳಿನಿಂದ ಇಡೀ ಇಲಾಖೆಗೆ ಚುರುಕು ಮುಟ್ಟಿಸಿ ಎಲ್ಲ ಕಡತಗಳನ್ನೂ ತ್ವರಿತವಾಗಿ ವಿಲೇವಾರಿ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಅಲ್ಲದೆ, ಹಲವು ವರ್ಷಗಳಿಂದ ಬಾಕಿ ಇರುವ ಕಡತಗಳನ್ನು ತ್ವರಿತವಾಗಿ ತೆರವುಗೊಳಿಸುತ್ತೇವೆ. ಕಾಗದರಹಿತ ಡಿಜಿಟಲ್ ಸೇವೆ ಸೇರಿದಂತೆ ಏನೆಲ್ಲ ಸಾಧ್ಯತೆಗಳಿವೆಯೋ ಆ ಎಲ್ಲವನ್ನೂ ಬಳಸಿಕೊಂಡು ಅತ್ಯಂತ ವೇಗವಾಗಿ ಇಲಾಖೆಯ ಕಡತಗಳನ್ನು ವಿಲೇವಾರಿ ಮಾಡುವಲ್ಲಿ ನಾವು ಬದ್ಧರಾಗಿದ್ದೇವೆ. ಉತ್ತಮ ಆಡಳಿತವನ್ನು ತಲುಪಿಸುವುದೊಂದೆ ನಮ್ಮ ಗುರಿ ಎಂದಿದ್ದಾರೆ.