Advertisement
ಜಿಲ್ಲಾಧಿಕಾರಿಗಳು, ಉಪವಿಭಾ ಗಾಧಿಕಾರಿಗಳು ಮತ್ತು ತಹಶೀಲ್ದಾರರಿಗೆ ಇದ್ದ ಅರೆ ನ್ಯಾಯಿಕ ಪ್ರಕರಣಗಳ ವಿಚಾರಣೆ ಮತ್ತು ವಿಲೇವಾರಿ ಅಧಿಕಾರವನ್ನು ಹೆಚ್ಚುವರಿಯಾಗಿ ಅಪರ ಜಿಲ್ಲಾಧಿಕಾರಿ ಹಾಗೂ ಉಪ ತಹಶೀಲ್ದಾರರಿಗೆ ನೀಡಲು ಸರಕಾರ ನಿರ್ಧರಿಸಿದೆ.
ಕಂದಾಯ ಅರೆ ನ್ಯಾಯಿಕ ಪ್ರಕರಣಗಳ ವಿಲೇವಾರಿ ನಿರೀಕ್ಷಿತ ಮಟ್ಟದಲ್ಲಿ ಇತ್ಯರ್ಥವಾಗದೇ ತೀವ್ರ ವಿಳಂಬವಾಗಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವುದನ್ನು ಸರ ಕಾರ ಗಂಭೀರವಾಗಿ ಪರಿಗಣಿಸಿ, ತಹಶೀಲ್ದಾರ್ ನ್ಯಾಯಾಲಯಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಪ್ರಕರಣಗಳು ದಾಖಲಾಗುತ್ತಿರುವುದರಿಂದ ತಹಶೀ ಲ್ದಾರರು ಅವರ ಸಾಮರ್ಥ್ಯಕ್ಕಿಂತ ಹೆಚ್ಚಿನ ಪ್ರಕರಣಗಳನ್ನು ಇತ್ಯರ್ಥಪಡಿಸಿದರೂ ಕೂಡ ಪ್ರಕರಣಗಳು ಹೆಚ್ಚಿನ ಸಂಖ್ಯೆ ಯಲ್ಲಿ ಬಾಕಿ ಉಳಿಯುತ್ತಿವೆ. ಆದ್ದ ರಿಂದ ಬಾಕಿ ಪ್ರಕರಣಗಳ ತ್ವರಿತ ವಿಲೇ ವಾರಿ ಮಾಡಲು ಹೋಬಳಿ ಮಟ್ಟದಲ್ಲಿ ಉಪತಹಶೀಲ್ದಾರ್ ಅವರಿಗೆ ಅರೆ ನ್ಯಾಯಿಕ ಪ್ರಕರಣಗಳನ್ನು ಇತ್ಯರ್ಥ ಪಡಿಸಲು ಅಧಿಕಾರ ನೀಡಲಾಗಿದೆ. ಉಪ ತಹಶೀಲ್ದಾರ್ ಪ್ರತೀ ಬುಧವಾರ ಅರೆ ನ್ಯಾಯಿಕ ಪ್ರಕರಣಗಳನ್ನು ಇತ್ಯರ್ಥಪಡಿಸಬೇಕು ಎಂದು ಕಂದಾಯ ಇಲಾಖೆ ಸುತ್ತೋಲೆ ಹೊರಡಿಸಿದೆ.
Related Articles
Advertisement
ಉಪ ವಿಭಾಗಾಧಿಕಾರಿ ಮಟ್ಟದಲ್ಲಿ ಹೆಚ್ಚು ಬಾಕಿರಾಜ್ಯದ ಕಂದಾಯ ನ್ಯಾಯಾಲಯಗಳಲ್ಲಿ 1 ಲಕ್ಷಕ್ಕೂ ಅಧಿಕ ಅರೆ ನ್ಯಾಯಿಕ ಪ್ರಕರಣಗಳು ಬಾಕಿ ಇವೆ. ಈ ಪೈಕಿ ಜಿಲ್ಲಾಧಿಕಾರಿಗಳ ಮಟ್ಟದಲ್ಲಿ 15,883 ಪ್ರಕರಣಗಳು, ಉಪವಿಭಾಗಾಧಿಕಾರಿಗಳ ಮಟ್ಟದಲ್ಲಿ 63,712 ಪ್ರಕರಣಗಳು ಹಾಗೂ ತಹಶೀಲ್ದಾರರ ಮಟ್ಟದಲ್ಲಿ 25 ಸಾವಿರಕ್ಕೂ ಅಧಿಕ ಪ್ರಕರಣಗಳು ಇವೆ. ಪ್ರಕರಣಗಳ ತ್ವರಿತ ವಿಲೇವಾರಿಗೆ ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ ಮತ್ತು ತಹಶೀಲ್ದಾರರು ವಾರದ ಪ್ರತೀ ಮಂಗಳವಾರ ಮತ್ತು ಗುರುವಾರ ಪೂರ್ಣದಿನ ಕಡ್ಡಾಯವಾಗಿ ನಡೆಸಲು ನಿರ್ದೇಶನ ನೀಡಿದೆ. ಪ್ರತೀ ಜಿಲ್ಲಾಧಿಕಾರಿ ಪ್ರತೀ ತಿಂಗಳು 75 ಪ್ರಕರಣಗಳನ್ನು ಹಾಗೂ ಉಪ ವಿಭಾಗಾಧಿಕಾರಿಗಳು ಪ್ರತೀ ತಿಂಗಳು 100 ಪ್ರಕರಣಗಳನ್ನು ಇತ್ಯರ್ಥಪಡಿಸುವಂತೆ ಗುರಿ ನಿಗದಿಪಡಿಸಲಾಗಿದೆ.