Advertisement

ಅಕ್ರಮ ಆಸ್ತಿ ಸಂಪಾದನೆ : ಎಫ್‌ಡಿಎಗೆ 4 ವರ್ಷ ಜೈಲು 1 ಕೋಟಿ ರೂ. ದಂಡ

09:18 PM Aug 01, 2022 | Team Udayavani |

ಮಂಗಳೂರು :ಅಕ್ರಮ ಆಸ್ತಿ ಸಂಪಾದನೆ ಆರೋಪದಡಿ ಸರ್ಕಾರಿ ಪ್ರಥಮ ದರ್ಜೆ ಸಹಾಯಕನಿಗೆ ಮಂಗಳೂರಿನ ನ್ಯಾಯಾಲಯವು ಸೋಮವಾರ ತಪ್ಪಿತಸ್ಥ ಎಂದು ಪರಿಗಣಿಸಿ 4 ವರ್ಷಗಳ ಜೈಲು ಶಿಕ್ಷೆ ಮತ್ತು 1 ಕೋಟಿ ರೂ.ಗಳ ದಂಡವನ್ನು ವಿಧಿಸಿ ಶಿಕ್ಷೆಯನ್ನು ಪ್ರಕಟಿಸಿತು.

Advertisement

ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಬಿ. ಬಿ. ಜಕಾತಿ ಅವರು ಆರೋಪಿ ಯು. ಓಂ ಪ್ರಕಾಶ್ ಹೆಗ್ಡೆ ಯನ್ನು ಭ್ರಷ್ಟಾಚಾರ ತಡೆ ಕಾಯ್ದೆ, 1988 ರ ನಿಬಂಧನೆಗಳ ಅಡಿಯಲ್ಲಿ ತಪ್ಪಿತಸ್ಥರೆಂದು ತೀರ್ಪು ನೀಡಿದರು. ನ್ಯಾಯಾಲಯವು ಅವರಿಗೆ 4 ವರ್ಷಗಳ ಜೈಲು ಶಿಕ್ಷೆ ಮತ್ತು 1 ಕೋಟಿ ರೂ.ಗಳ ದಂಡವನ್ನು ವಿಧಿಸಿದೆ.

ಜನವರಿ 2014 ರಲ್ಲಿ ಕರ್ನಾಟಕ ಲೋಕಾಯುಕ್ತ ಪೊಲೀಸರು ಬಂಟ್ವಾಳ ತಾಲೂಕು ಕಚೇರಿಯಲ್ಲಿ ಎಫ್‌ಡಿಎ ಆಗಿ ಸೇವೆ ಸಲ್ಲಿಸುತ್ತಿದ್ದ ಓಂಪ್ರಕಾಶ್ ಹೆಗ್ಡೆ ವಿರುದ್ಧ ಆದಾಯ ಮೀರಿ ಆಸ್ತಿ ಹೊಂದಿರುವ ಆರೋಪಪಟ್ಟಿ ದಾಖಲಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next