Advertisement

Dispute: ಚಿಕ್ಕಮಗಳೂರಲ್ಲಿ ತಾರಕಕ್ಕೇರಿದ ದರ್ಗಾ ವಿವಾದ: ಬಿಗು ಪರಿಸ್ಥಿತಿ

02:18 AM Jan 07, 2025 | Team Udayavani |

ಚಿಕ್ಕಮಗಳೂರು: ನಗರದ ಕೋಟೆ ಬಡಾವಣೆಯಲ್ಲಿನ ದರ್ಗಾ ವಿವಾದ ತಾರಕಕ್ಕೇರಿದ್ದು, ದರ್ಗಾದಲ್ಲಿ ನೂತನ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ ಹಾಗೂ ಅಕ್ರಮವಾಗಿ ವಿದ್ಯುತ್‌ ಸಂಪರ್ಕ ಪಡೆದುಕೊಳ್ಳಲಾಗಿದೆ ಎಂದು ಆರೋಪಿಸಿ ಸ್ಥಳೀಯರು ನಡೆಸುತ್ತಿರುವ ಪ್ರತಿಭಟನೆ ಸೋಮವಾರವೂ ಮುಂದುವರಿದಿದೆ.

Advertisement

ದರ್ಗಾ ಜಾಗದ ವಿವಾದ ನ್ಯಾಯಾಲಯದಲ್ಲಿದೆ. ದರ್ಗಾಕ್ಕೆ ಅನಧಿಕೃತವಾಗಿ ವಿದ್ಯುತ್‌ ಸಂಪರ್ಕ ಪಡೆದು ಟೈಲ್ಸ್‌ ಹಾಕುವ ಕಾಮಗಾರಿ ನಡೆಸಲಾಗುತ್ತಿದೆ. ಕಾಮಗಾರಿ ನಡೆಸಲು ಬಿಡುವುದಿಲ್ಲವೆಂದು ಹಿಂದೂ ಪರ ಸಂಘಟನೆಗಳು ಪಟ್ಟು ಹಿಡಿದಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಸ್ಥಳದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ.

ಸ್ಥಳಕ್ಕೆ ಆಗಮಿಸಿದ ನಗರಸಭೆ ಅಧ್ಯಕ್ಷೆ ಸುಜಾತ ಶಿವಕುಮಾರ್‌ ಹಾಗೂ ಸದಸ್ಯರನ್ನು ಪೊಲೀಸರು ತಡೆದರು. ದರ್ಗಾದ 200 ಮೀಟರ್‌ ದೂರದಲ್ಲಿ ಅಯ್ಯಪ್ಪಸ್ವಾಮಿ ಮಾಲಾಧಾರಿಗಳು “ಸ್ವಾಮಿಯೇ ಶರಣಂ ಅಯ್ಯಪ್ಪ’ ಘೋಷಣೆ ಕೂಗಿದರು. ನಮಗೆ ಅರಳಿ ಮರ ಸುತ್ತಲು ಬಿಡಿ, ದರ್ಗಾಕ್ಕೆ ಬ್ಯಾರಿಕೇಡ್‌ ಹಾಕಿ, ಅರಳಿ ಮರಕ್ಕೆ ಯಾಕೆ ಹಾಕುತ್ತೀರಾ ಎಂದು ಪ್ರಶ್ನಿಸಿದರು. ಈ ವೇಳೆ ಜನರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆಯಿತು.

Advertisement

Udayavani is now on Telegram. Click here to join our channel and stay updated with the latest news.

Next