Advertisement
ಶಾಸಕ ಸ್ಥಾನದ ಅನರ್ಹತೆ ಪ್ರಶ್ನಿಸಿ ಬಿ.ಸಿ. ಪಾಟೀಲ ಸೇರಿದಂತೆ ಅನರ್ಹತೆಗೊಳಗಾದ ಶಾಸಕರು ನ್ಯಾಯಾಲಯದ ಮೆಟ್ಟಿಲೇರುವ ಸಾಧ್ಯತೆ ಇದ್ದು ಅನರ್ಹತೆಯನ್ನು ನ್ಯಾಯಾಲಯ ಎತ್ತಿ ಹಿಡಿದರೆ ಕ್ಷೇತ್ರ ರಾಜಕೀಯದಲ್ಲಿ ಏನಾಗಬಹುದು? ಅನರ್ಹತೆಯನ್ನು ನ್ಯಾಯಾಲಯ ಅಸಿಂಧುಗೊಳಿಸಿದರೆ ಮುಂದೆ ಏನಾಗಬಹುದು ಎಂಬ ವಿಶ್ಲೇಷಣೆ ಜೋರಾಗಿದೆ.
Related Articles
Advertisement
ಇನ್ನೊಂದು ದೃಷ್ಟಿಕೋನದಲ್ಲಿ ಸೃಷ್ಟಿ ಪಾಟೀಲ ಅವರಿಗೆ ಟಿಕೆಟ್ ನೀಡುವುದಕ್ಕಿಂತ ಬಿಜೆಪಿ ತನ್ನದೇ ಪಕ್ಷದ ಪ್ರಭಾವಿ ಮುಖಂಡ, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿ.ಸಿ. ಪಾಟೀಲ ವಿರುದ್ಧ ಕೇವಲ 555 ಮತಗಳ ಅಂತರದಲ್ಲಿ ಪರಾಭವಗೊಂಡ ಮಾಜಿ ಶಾಸಕ ಯು.ಬಿ. ಬಣಕಾರ ಅವರಿಗೇ ಟಿಕೆಟ್ ನೀಡುವ ಬಗ್ಗೆಯೂ ಆಲೋಚಿಸಬಹುದು. ಇದರಿಂದ ಮೂಲ ಬಿಜೆಪಿ ಶಾಸಕರ ಸಂಖ್ಯೆ ಹೆಚ್ಚಾಗುತ್ತದೆ. ಪಕ್ಷಕ್ಕೆ ವಲಸೆ ಬಂದವರಿಗೆ ಟಿಕೆಟ್ ನೀಡುವುದರಿಂದ ಸ್ಥಳೀಯ ಬಿಜೆಪಿಯಲ್ಲುಂಟಾಗಬಹುದಾದ ಅಸಮಾಧಾನ- ಭಿನ್ನಮತ ತಡೆಯಬಹುದು ಎಂಬ ಲೆಕ್ಕಾಚಾರವೂ ಇದೆ. ಈ ಲೆಕ್ಕಾಚಾರ ಪಕ್ಕಾ ಆದರೆ ಪಕ್ಷಕ್ಕೆ ವಲಸೆ ಬರಬಹುದಾದ ಬಿ.ಸಿ. ಪಾಟೀಲರಿಗೆ ಕಾನೂನಿನ ಸಾಧ್ಯಾಸಾಧ್ಯತೆ ನೋಡಿಕೊಂಡು ವಿಪ ಸದಸ್ಯರನ್ನಾಗಿ ಮಾಡಿ ಸಚಿವ ಸ್ಥಾನ ನೀಡಬಹುದು ಎಂಬ ವಿಶ್ಲೇಷಣೆ ರಾಜಕೀಯ ವಲಯದಲ್ಲಿ ನಡೆದಿದೆ.
ಅಸಿಂಧುವಾದರೆ?: ಒಂದು ವೇಳೆ ಅನರ್ಹತೆ ಪ್ರಕರಣ ನ್ಯಾಯಾಲಯದಲ್ಲಿ ಅಸಿಂಧುವಾಗಿ ಹಾಗೂ ಈಗಾಗಲೇ ಶಾಸಕ ಸ್ಥಾನಕ್ಕೆ ನೀಡಿರುವ ರಾಜೀನಾಮೆ ಸ್ವೀಕಾರವಾದರೆ ನಡೆಯಬಹುದಾದ ಉಪಚುನಾವಣೆಯಲ್ಲಿ ಒಮ್ಮೆ ಮಾತ್ರ ಬಿ.ಸಿ. ಪಾಟೀಲ ಅವರಿಗೆ ಹಿರೇಕೆರೂರು ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಲು ಅವಕಾಶ ನೀಡಬಹುದು. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿ.ಸಿ. ಪಾಟೀಲ ಕ್ಷೇತ್ರವನ್ನು ಯು.ಬಿ. ಬಣಕಾರ ಅವರಿಗೆ ಬಿಟ್ಟುಕೊಡಬೇಕು ಎಂಬ ಒಪ್ಪಂದ ಮಾಡಿಕೊಳ್ಳಬಹುದು. ಬಿ.ಸಿ. ಪಾಟೀಲರಿಗೆ ಮುಂದಿನ ಚುನಾವಣೆಯಲ್ಲಿ ಪಕ್ಕದ ರಾಣಿಬೆನ್ನೂರು ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ಕೊಡಬಹುದು. ಯು.ಬಿ. ಬಣಕಾರ ಅವರಿಗೆ ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಬಹುದು ಇಲ್ಲವೇ ಉಪಚುನಾವಣೆಯಲ್ಲಿ ಯು.ಬಿ.ಬಣಕಾರ ಅವರಿಗೇ ಟಿಕೆಟ್ ಕೊಟ್ಟು ಬಿ.ಸಿ. ಪಾಟೀಲರಿಗೆ ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಿ ಸಚಿವ ಸ್ಥಾನ ನೀಡಬಹುದು ಎಂಬ ಚರ್ಚೆಯೂ ಬಿಜೆಪಿಯಲ್ಲಿ ನಡೆದಿದೆ.
•ಎಚ್.ಕೆ. ನಟರಾಜ