Advertisement

Disqualification; ಪ್ರಜ್ವಲ್‌, ರೇವಣ್ಣ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ

11:29 PM Sep 14, 2023 | Team Udayavani |

ಹಾಸನ: ಸಂಸದ ಸ್ಥಾನದಿಂದ ಅನರ್ಹಗೊಳಿಸಿದ ರಾಜ್ಯ ಹೈಕೋರ್ಟ್‌ ತೀರ್ಪು ವಿರುದ್ಧ ಪ್ರಜ್ವಲ್‌ ರೇವಣ್ಣ ಅವರು ಸುಪ್ರೀಂಕೋರ್ಟ್‌ ಮೊರೆ ಹೋಗಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿ ಪ್ರಜ್ವಲ್‌ ತಂದೆ ರೇವಣ್ಣ ಕೂಡ ಸುಪ್ರೀಂಕೋರ್ಟ್‌ ಮೊರೆ ಹೋಗಿದ್ದಾರೆ.

Advertisement

ಹೈಕೋರ್ಟ್‌ ಸೆ.1ರಂದು ನೀಡಿದ್ದ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಸಲ್ಲಿಸುವವರೆಗೆ ತೀರ್ಪಿಗೆ ತಡೆ ನೀಡಬೇಕೆಂಬ ಮನವಿಯನ್ನು ಹೈಕೋರ್ಟ್‌ ತಿರಸ್ಕರಿಸಿತ್ತು. ಹಾಗಾಗಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ.

ಪ್ರಜ್ವಲ್‌ ಪ್ರಕರಣದಲ್ಲಿ ಸತ್ಯ ಮರೆ ಮಾಚಲು ಹಾಗೂ ಚುನಾವಣೆಯಲ್ಲಿ ಅಕ್ರಮ ಎಸಗಿದ್ದಾರೆ ಎಂಬ ಆರೋಪ ಸಂಬಂಧ ಶಾಸಕ ಎಚ್‌.ಡಿ.ರೇವಣ್ಣ ಅವರಿಗೂ ನಿಮ್ಮ ಶಾಸಕ ಸ್ಥಾನವನ್ನೂ ಯಾಕೆ ಅಸಿಂಧುಗೊಳಿಸಬಾರದು ಎಂದು ಹೈಕೋರ್ಟ್‌ ಏಕಸದಸ್ಯ ಪೀಠ ನೋಟೀಸ್‌ ಜಾರಿ ಮಾಡಿತ್ತು. ಇದನ್ನೂ ಪ್ರಶ್ನಿಸಿ ಎಚ್‌.ಡಿ.ರೇವಣ್ಣ ಕೂಡ ಸುಪ್ರೀಂಗೆ ಮೇಲ್ಮನವಿ ಸಲ್ಲಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next