Advertisement

ಪರಿಹಾರ ವಿತರಣೆಯಲ್ಲಿ ಕಡೆಗಣನೆ: ಸಿದ್ದರಾಮಯ್ಯ

11:03 PM Sep 16, 2019 | Team Udayavani |

ಮೈಸೂರು: ನೆರೆ ಬಂದು ಜನರು ಸಂಕಷ್ಟಕ್ಕೀಡಾಗಿ 45 ದಿನ ಕಳೆದರೂ ಪರಿಹಾರಕ್ಕೆ ಐದು ಪೈಸೆಯನ್ನೂ ಬಿಡುಗಡೆ ಮಾಡದ ಕೇಂದ್ರ ಸರ್ಕಾರ ಕರ್ನಾಟಕವನ್ನು ಕಡೆಗಣಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೆರೆ ಪರಿಹಾರದ ಹಣವನ್ನು ಕೇಂದ್ರ ಸರ್ಕಾರದವರು ಧರ್ಮಕ್ಕೇನೂ ಕೊಡುವುದಿಲ್ಲ. ಎನ್‌ಡಿಆರ್‌ಎಫ್ ಮಾರ್ಗಸೂಚಿ ಪ್ರಕಾರ ಕೊಡಲೇ ಬೇಕಾಗುತ್ತದೆ.

Advertisement

ಆದರೆ, ನೆರೆ ಬಂದು 45 ದಿನ ಕಳೆದರೂ ಈವರೆಗೆ ಐದು ಪೈಸೆ ಕೊಡದವರಿಂದ ಇನ್ನೇನನ್ನು ನಿರೀಕ್ಷಿಸಲು ಸಾಧ್ಯ ಎಂದರು. ಹಿಂದಿ ರಾಷ್ಟ್ರ ಭಾಷೆಯಲ್ಲ. ಕನ್ನಡದಂತೆ ಅದೂ ಒಂದು ಭಾಷೆಯಷ್ಟೇ. ಹೀಗಾಗಿ ಹಿಂದಿ ಭಾಷೆಯನ್ನು ಬಲವಂತವಾಗಿ ಹೇರಲು ಹೊರಟಿರುವುದಕ್ಕೆ ನಮ್ಮ ವಿರೋಧವಿದೆ. ಸ್ವಯಂ ಪ್ರೇರಣೆಯಿಂದ ಹಿಂದಿ ಕಲಿಯಲು ನಮ್ಮ ವಿರೋಧವಿಲ್ಲ. ಆದರೆ, ಅನ್ಯಭಾಷಿಕರ ಮೇಲೆ ಹಿಂದಿಯನ್ನು ಹೇರುವುದು ಸರಿಯಲ್ಲ ಎಂದು ಹೇಳಿದರು.

ಜಿಟಿಡಿ ಸತ್ಯ ಹೇಳಿದ್ದಾರೆ: ಹುಣಸೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲ್ಲುತ್ತದೆ ಎನ್ನುವ ಮೂಲಕ ಮಾಜಿ ಸಚಿವ ಜಿ.ಟಿ.ದೇವೇಗೌಡ ಸತ್ಯವನ್ನೇ ಹೇಳಿದ್ದಾರೆ. ಅವರು ಹೇಳಿರುವಂತೆ ಹುಣಸೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಸಿದ್ದರಾಮಯ್ಯ ಗೋಸುಂಬೆ ರಾಜಕಾರಣಿ ಎಂಬ ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ಅವರು ನಿರಾಕರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next