ನಿವಾಸಿಗಳ ಮೇಲೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದರಿಂದ ಇಬ್ಬರು ಗಾಯಗೊಂಡ ಘಟನೆ ತಾಲೂಕಿನ ಬುಳ್ಳಾಪುರ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
Advertisement
ತಹಶೀಲ್ದಾರ್ ರೆಹನ್ ಪಾಷಾ, ಸಿಪಿಐ ಲಕ್ಷ್ಮಣ ನಾಯ್ಕ, ಪಿಎಸ್‌ಐ ಸಿದ್ದೇಗೌಡ ನೇತೃತ್ವದಲ್ಲಿ ಬೆಳಗ್ಗೆ 10:30ಕ್ಕೆ ಗ್ರಾಮದ ಗೋಮಾಳ ಜಮೀನಿನಲ್ಲಿಕಟ್ಟಿಕೊಂಡಿರುವ ಮನೆಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ಆರಂಭಿಸಲಾಗಿದೆ. ಆದರೆ, ನಿವಾಸಿಗಳು ಈ ವೇಳೆ ಜೆಸಿಬಿಗೆ ಅಡ್ಡ ಮಲಗಿ
ಪ್ರತಿಭಟನೆ ನಡೆಸಿದ್ದರಿಂದ ಪೊಲೀಸರು ಲಾಠಿ ಪ್ರಹಾರ ನಡೆಸಿದರು. ಮಕ್ಕಳು, ಮಹಿಳೆಯರು, ವಯೋವೃದ್ಧರ ಮೇಲೂ ಪೊಲೀಸರು ಲಾಠಿ ಬೀಸಿದ್ದು, ಈ ವೇಳೆ ಇಬ್ಬರಿಗೆ ಗಾಯಗಳಾಗಿದ್ದು, ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ತೆರಳಿದ್ದಾರೆ. ಕರ್ತವ್ಯಕ್ಕೆ ಅಡ್ಡಿಪಡಿಸಿದರೆಂಬ ಆರೋಪದ ಮೇಲೆ 10 ಜನರನ್ನು ವಶಕ್ಕೆ ಪಡೆಯಲಾಗಿದೆ. ಜಿಲ್ಲಾ ಸಶಸ್ತ್ರ ಪೊಲೀಸ್ ಪಡೆ ಸ್ಥಳಕ್ಕೆ ಕರೆಸಲಾಗಿತ್ತು. ಡಿವೈಎಸ್ಪಿ ಎಂ.ಕೆ. ಗಂಗಲ್ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ನಡೆಸಿದ್ದಾರೆ ಎಂದು ತಾಲೂಕು ಆಡಳಿತ ಆರೋಪಿಸಿದೆ. ಮಳೆಗಾಲದಲ್ಲಿ ಹಳೆ ಗ್ರಾಮದ ಬಹುತೇಕ ಮನೆಗಳಿಗೆ ಪ್ರವಾಹಕ್ಕೀಡಾಗುತ್ತವೆ ಎಂದು
1992ರಲ್ಲೇ ನಿವಾಸಿಗಳಿಗೆ ಗೋಮಾಳ ಜಾಗ ನೀಡಲಾಗಿತ್ತು. ಆಗಲೇ ಅಲ್ಲಿಗೆ ಸ್ಥಳಾಂತರಗೊಂಡ 19 ನಿವಾಸಿಗಳಿಗೆ ಹಕ್ಕುಪತ್ರ ಸಹ ವಿತರಿಸಲಾಗಿತ್ತು. ಹಳೆ ಮನೆಗಳಲ್ಲೇ ವಾಸವಾಗಿದ್ದ ಕೆಲವರು ನಂತರದ ವರ್ಷಗಳಲ್ಲಿ ಹಂತಹಂತವಾಗಿ ಗೋಮಾಳ ಜಾಗದಲ್ಲಿ ಗುಡಿಸಲು, ಶೆಡ್ ಹಾಕಿಕೊಂಡು ವಾಸವಾಗಿದ್ದರು. ಇತ್ತೀಚೆಗೆ ಗುಡಿಸಲುಗಳನ್ನು ತೆರವುಗೊಳಿಸಿ ಮನೆ ನಿರ್ಮಿಸಿಕೊಳ್ಳಲಾರಂಭಿಸಿದ್ದು, ಇದಕ್ಕೆ ತಾಲೂಕು ಆಡಳಿತ ಆಕ್ಷೇಪ ವ್ಯಕ್ತಪಡಿತ್ತು. ಸರ್ಕಾರಿ ಜಾಗದಲ್ಲಿ ಮನೆ ನಿರ್ಮಾಣ ಮಾಡದಂತೆ ಆದೇಶವನ್ನೂ ಸಹ ನೀಡಿತ್ತು. ಜ. 17ರಂದು ಸಹ ತಾಲೂಕು
ಆಡಳಿತ ಜೆಸಿಬಿಯಿಂದ ಅಕ್ರಮ ಮನೆ ತೆರವುಗೊಳಿಸಲು ಯತ್ನಿಸಿ ವಿಫಲವಾಗಿತ್ತು. ಈ ವೇಳೆ 16 ನಿವಾಸಿಗಳ ವಿರುದ್ಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಶಾಂತಿಭಂಗದ ಕೇಸ್ ಸಹ ದಾಖಲಾಗಿತ್ತು. ಗುಂಪುಗಾರಿಕೆ: ವಿವಾದಕ್ಕೆ ಸಂಬಂಧಿ ಸಿದಂತೆ ಗ್ರಾಮಸ್ಥರಲ್ಲೇ ಭಿನ್ನಾಭಿಪ್ರಾಯವಿದೆ. ಈಗಾಗಲೆ ಮನೆ ಕಟ್ಟಿಕೊಂಡಿರುವ ಅಸಹಾಯಕರು, ಬಡವರನ್ನು ಮನೆ ಖಾಲಿ ಮಾಡಿಸಿ ತಮಗೆ ತಮ್ಮ ಸಂಬಂ ಧಿಗಳು ಮತ್ತು ತಮಗೆ ಬೇಕಾದವರಿಗೆ ಹಂಚಿಕೆ ಮಾಡಲು ಕೆಲವರು ಹವಣಿಸುತ್ತಿದ್ದರೆಂದು
ಆರೋಪಿಸಲಾಗಿದೆ. ಅಲ್ಲಿ ಮನೆ ಕಟ್ಟಿಕೊಂಡು ಇರುವವರು ಹಾಗೂ ಮನೆ ಕಟ್ಟಿಕೊಳ್ಳಲು ಹವಣಿಸುತ್ತಿರುವ ಗುಂಪುಗಳ ನಡುವೆ ಘರ್ಷಣೆ ಸಂಭವಿಸಿ
ಶಾಂತಿ ಭಂಗ ಉಂಟಾಗಬಹುದೆಂದು ಮುನ್ನೆಚ್ಚರಿಕೆ ಕ್ರಮವಾಗಿ ಗ್ರಾಮಾಂತರ ಠಾಣೆ ಪಿಎಸ್‌ಐ ಸಿದ್ದೇಗೌಡ ದೂರು ದಾಖಲಿಸಿದ್ದರು.
Related Articles
Advertisement
ಕಳೆದ ಹಲವು ದಶಕಗಳಿಂದ ಗುಡಿಸಲು ಕಟ್ಟಿಕೊಂಡು ವಾಸಿಸುತ್ತಿದ್ದೇವೆ. ಇತ್ತೀಚೆಗೆ ಮನೆ ನಿರ್ಮಿಸಿಕೊಳ್ಳುತ್ತಿದ್ದು, ಅ ಧಿಕಾರಿಗಳು, ಪೊಲೀಸರುಯಾವುದೇ ನೋಟಿಸ್, ಮಾಹಿತಿ ನೀಡದೆ ಏಕಾಏಕಿ ಜೆಸಿಬಿ ವಾಹನದಿಂದ ನಮ್ಮ ಮನೆಗಳನ್ನು ಕೆಡವಿ ಹಾಕಿದ್ದಾರೆ. ನಿವಾಸಿಗಳ ಮೇಲೆ ಗಾಯಗಳಾಗುವಂತೆ ಹಲ್ಲೆ ಮಾಡಿದ್ದಾರೆ. ಮಹಿಳೆಯರ ಮೇಲೂ ದೌರ್ಜನ್ಯ ಎಸಗಿದ್ದಾರೆ.
ಬಸಪ್ಪ, ಗ್ರಾಮಸ್ಥ. ಬುಳ್ಳಾಪುರ