Advertisement
ರಾಜ್ಯದಲ್ಲೇ ಚಿಕ್ಕದಾದ ತಾಲೂಕು ಶಹಾಬಾದ. ಹಲವು ದಶಕಗಳಿಂದ ಇಲ್ಲಿನ ಜನರು ನಿರಂತರ ಹೋರಾಟ ಮಾಡಿದ ಫಲವಾಗಿ ರಾಜ್ಯ ಸರ್ಕಾರ 50 ಹೊಸ ತಾಲೂಕುಗಳನ್ನು ರಚಿಸಿದ್ದು,ಈಗಾಗಲೇ ಅನೇಕ ಹೊಸ ತಾಲೂಕುಗಳಲ್ಲಿ ವಿವಿಧ ಇಲಾಖೆಗಳ ಕಾರ್ಯ ಚಟುವಟಿಕೆಗಳು ಆರಂಭವಾಗಿವೆ. ಆದರೆ ಶಹಾಬಾದ ತಾಲೂಕು ಆಟಕ್ಕುಂಟು ಲೆಕ್ಕಕ್ಕಿಲ್ಲ ಎನ್ನುವಂತಾಗಿದೆ. ತಾಲೂಕಾಡಳಿತದ ಕಟ್ಟಡ ಆರಂಭಿಸಿ ತಹಶೀಲ್ದಾರ್ಮತ್ತು ಸಿಬ್ಬಂದಿನಿ ಯೋಜಿಸಿದ್ದನ್ನು ಹೊರತುಪಡಿಸಿದರೆ ಇನ್ನುಳಿದ ಇಲಾಖೆಗಳ ಕಚೇರಿಗಳು ಆರಂಭವಾಗಿಯೇ ಇಲ್ಲ.
Related Articles
ತಾಲೂಕು ಎಂದು ಘೋಷಿಸಲಾಯಿತು.
Advertisement
2018ರ ಜನವರಿಯಿಂದಲೇ ನೂತನ ತಾಲೂಕು ಕೇಂದ್ರಗಳಲ್ಲಿ ತಾಲೂಕು ಕಚೇರಿಗಳನ್ನು ತೆರೆದು ಕಾರ್ಯಾರಂಭ ಮಾಡಲು ಸರ್ಕಾರ ಆದೇಶಹೊರಡಿಸಿದೆ. ಆದರೆ ಎಲ್ಲ ಹೊಸ ತಾಲೂಕುಗಳಲ್ಲಿ ವಿವಿಧ ಇಲಾಖೆಗಳ ಕಚೇರಿಗಳು ಅಧಿಕೃತವಾಗಿ ಆರಂಭವಾಗಿಲ್ಲ. ಹೀಗಾಗಿ ಕಂದಾಯ ಇಲಾಖೆ ವ್ಯವಹಾರಗಳು ಮಾತ್ರ ಹೊಸ ತಾಲೂಕುಗಳಲ್ಲಿ ನಡೆಯುತ್ತಿದ್ದು, ಸಿಬ್ಬಂದಿ ಕೊರತೆಯಿಂದ ಕಾರ್ಯ ನಿರ್ವಹಿಸುತ್ತಿವೆ. ಉಳಿದ ಇಲಾಖೆಗಳ ಕಚೇರಿಗಳು ಇನ್ನೂ ಕಾರ್ಯಾರಂಭ ಮಾಡಿಲ್ಲ. ಶಹಾಬಾದ ತಾಲೂಕು ಏಳು ಗ್ರಾಪಂ ಸ್ಥಾನಹಾಗೂ 20 ಗ್ರಾಮಗಳನ್ನು ಒಳಗೊಂಡಿದೆ. ಇಲ್ಲಿ ಮಿನಿ ವಿಧಾನಸೌಧ ನಿರ್ಮಿಸಬೇಕಿದ್ದು, ಮಿನಿ
ವಿಧಾನಸೌಧ ನಿರ್ಮಾಣಕ್ಕೆ ಸುಮಾರು 10 ಕೋಟಿ ರೂ. ಅನುದಾನವನ್ನು ಸರ್ಕಾರ ಒದಗಿಸಿದೆ. ಮಿನಿ ವಿಧಾನಸೌಧ ನಿರ್ಮಾಣಕ್ಕೆ ನಗರದ ಸಮೀಪ ಜಾಗವಿಲ್ಲ. ಕಾರಣ, ಹಳೆ ಶಹಾಬಾದನ ಹೊರ ವಲಯದಲ್ಲಿರುವ ತರನಳ್ಳಿ ಗ್ರಾಮಕ್ಕೆ ಹೋಗುವ ರಸ್ತೆಯಲ್ಲಿ ಸುಮಾರು 24 ಎಕರೆ ಸರ್ಕಾರಿ ಜಾಗವಿದ್ದು, ಇಲ್ಲಿಯೇ ಮಿನಿ ವಿಧಾನಸೌಧ ನಿರ್ಮಿಸಲು ತಹಶೀಲ್ದಾರ್ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ. ತಹಶೀಲ್ದಾರ್ ಕಾರ್ಯಾಲಯ, ಡಿವೈಎಸ್‌ಪಿ ಕಚೇರಿ, ವೃತ್ತ ನಿರೀಕ್ಷಕರ ಕಚೇರಿ, ಅಂಚೆ ಕಚೇರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ,ತಾಪಂ ಕಚೇರಿ, ಉಪಖಜಾನೆ ಕಚೇರಿ, ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿ ಕಾರ್ಯ ನಿರ್ವಹಿಸುತ್ತಿವೆ. ಇವುಗಳಲ್ಲಿ ಕೆಲವು ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿವೆ. ಇತರೆ ಇಲಾಖೆಗಳಾದ ಭೂದಾಖಲೆಗಳ ಇಲಾಖೆ, ಉಪ ಉಪ ನೋಂದಣಾಧಿಕಾರಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆ, ಅಬಕಾರಿ ಇಲಾಖೆ, ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ, ರೇಷ್ಮೆ ಇಲಾಖೆ, ಪಶು ಸಂಗೋಪನಾ ಇಲಾಖೆ, ತಾಲೂಕು ಆರೋಗ್ಯ ಇಲಾಖೆ, ವಿಭಾಗೀಯ ನಿಯಂತ್ರಣ ಇಲಾಖೆ, ಜೆಸ್ಕಾಂ ಇಲಾಖೆ, ಲೋಕೋಪಯೋಗಿ ಇಲಾಖೆ, ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಸಣ್ಣ ನೀರಾವರಿ ಇಲಾಖೆ, ಜಲಾಯನ ಇಲಾಖೆ, ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆ, ಕೈಗಾರಿಕಾ ವಿಸ್ತೀರ್ಣಾಧಿಕಾರಿ ಇಲಾಖೆ, ಗ್ರಂಥಾಲಯ ಇಲಾಖೆ, ಮೀನುಗಾರಿಕೆ ಇಲಾಖೆ ಸೇರಿದಂತೆ ಇತರೆ ಇಲಾಖೆಗಳು ಕಾರ್ಯ ನಿರ್ವಹಿಸಬೇಕಿದೆ. ಇಷ್ಟೆಲ್ಲ ಕಚೇರಿಗಳು ಆರಂಭವಾಗದೇ ಹೆಸರಿಗೆ ಮಾತ್ರ ತಾಲೂಕು ಘೋಷಣೆಯಾಗಿದೆ. ತಾಲೂಕು ರಚನೆಯಾದಾಗ ಈ ಭಾಗದ ಜನರಲ್ಲಿ ಎಷ್ಟು ಖುಷಿಯಿತ್ತೋ ಈಗ ಅಷ್ಟೇ ಬೇಸರವೂ ಆವರಿಸಿದೆ. ನೂತನ ತಾಲೂಕಾದ್ರೂ ಈ ಹಿಂದೆ ಹೇಗೆ ಜನ ದೂರದ ತಾಲೂಕಿಗೆ ಹೋಗ ಬೇಕಿತ್ತೋ ಅದೇ ಸನ್ನಿವೇಶ ಈಗಲೂ ಇದೆ. ಮಿನಿ ವಿಧಾನಸೌಧ ನಿರ್ಮಾಣವಾದರೆ ಒಂದೇ ಸೂರಿನಡಿ ಎಲ್ಲ ಇಲಾಖೆಗಳು ಆರಂಭವಾಗಿ
ಸಾರ್ವಜನಿಕರಿಗೆ ಅಗತ್ಯ ಸೌಲಭ್ಯ ಒದಗಿಸಲು ಸಾಧ್ಯವಾಗುತ್ತದೆ. ಸಾರ್ವಜನಿಕರು ಹಳೆ ತಾಲೂಕಿಗೆ ಅಲೆದಾಡುವುದು ತಪ್ಪುತ್ತದೆ. ಆದ್ದರಿಂದ ಇಲ್ಲಿನ ಜನರಿಗೆ ಅಗತ್ಯ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ದೃಢ ನಿರ್ಧಾರ ಕೈಗೊಳ್ಳಬೇಕಿದೆ. ಕಾರ್ಯ ನಿರ್ವಹಿಸುತ್ತಿರುವ
ಇಲಾಖೆಗಳು
ತಹಶೀಲ್ದಾರ್‌ಕಾರ್ಯಾಲಯ, ಡಿವೈಎಸ್‌ಪಿ ಕಚೇರಿ, ವೃತ್ತ ನಿರೀಕ್ಷತರ ಕಚೇರಿ, ಅಂಚೆಕಚೇರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ,
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ತಾಪಂಕಚೇರಿ, ಉಪಖಜಾನೆಕಚೇರಿ, ನಗರಾಭಿವೃದ್ಧಿ ಪ್ರಾಧಿಕಾರಕಚೇರಿಗಳುಕಾರ್ಯ
ನಿರ್ವಹಿಸುತ್ತಿವೆ ಕಾರ್ಯ ನಿರ್ವಹಿಸಬೇಕಾದ
ಇಲಾಖೆಗಳು
ಭೂದಾಖಲೆಗಳ ಇಲಾಖೆ, ಉಪ ನೋಂದಣಾಧಿಕಾರಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ,ಹಿಂದುಳಿದ ವರ್ಗಗಳ ಇಲಾಖೆ, ಅಬಕಾರಿ ಇಲಾಖೆ, ತೋಟಗಾರಿಕೆ ಇಲಾಖೆ,ಕೃಷಿ ಇಲಾಖೆ, ರೇಷ್ಮೆ ಇಲಾಖೆ, ಪಶು ಸಂಗೋಪನಾ ಇಲಾಖೆ, ತಾಲೂಕು ಆರೋಗ್ಯ ಇಲಾಖೆ, ವಿಭಾಗೀಯ ನಿಯಂತ್ರಣ ಇಲಾಖೆ, ಜೆಸ್ಕಾಂ ಇಲಾಖೆ, ಲೋಕೋಪಯೋಗಿ ಇಲಾಖೆ, ಗ್ರಾಮೀಣಕುಡಿಯುವ ನೀರು ಸರಬರಾಜು ಇಲಾಖೆ,ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ,ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಸಣ್ಣ ನೀರಾವರಿ ಇಲಾಖೆ, ಜಲಾಯನ ಇಲಾಖೆ, ಪಂಚಾಯತ್‌ರಾಜ್ ಇಂಜಿನಿಯರಿಂಗ್ ಇಲಾಖೆ,ಕೈಗಾರಿಕಾ ವಿಸ್ತೀರ್ಣಾಧಿಕಾರಿ ಇಲಾಖೆ, ಗ್ರಂಥಾಲಯ ಇಲಾಖೆ, ಮೀನುಗಾರಿಕೆ ಇಲಾಖೆಹಾಗೂ ಇನ್ನಿತರೆ ಇಲಾಖೆಗಳುಕಾರ್ಯ ನಿರ್ವಹಿಸಬೇಕಿದೆ. ತಾಲೂಕು ಅಭಿವೃದ್ಧಿ ದೃಷ್ಟಿಯಿಂದ ಎಲ್ಲ ಇಲಾಖೆಗಳು ಇಲ್ಲಿಯೇ ಕಾರ್ಯ ನಿರ್ವಹಿಸಿದರೆ, ಸಾರ್ವಜನಿಕರು ಬೇರೆ ತಾಲೂಕಿಗೆ ಅಲೆಯುವುದು
ತಪ್ಪುತ್ತದೆ. ಈಗಾಗಲೇ ಮಿನಿ ವಿಧಾನಸೌಧ ನಿರ್ಮಾಣಕ್ಕೆ ಜಾಗ ಗುರುತಿಸಲಾಗಿದೆ. ಅಲ್ಲದೇ ರಂಗಮಂದಿರ ನಿರ್ಮಾಣಕ್ಕೆ 3 ಕೋಟಿ ರೂ.
ಅನುದಾನಹಾಗೂ ಗ್ರಂಥಾಲಯ ನಿರ್ಮಾಣಕ್ಕೆ 50 ಲಕ್ಷ ರೂ. ಅನುದಾನ ಬಂದಿದ್ದು ಸ್ಥಳ ಗುರುತಿಸುವ ಕಾರ್ಯ ನಡೆದಿದೆ.
-ಬಸವರಾಜ ಮತ್ತಿಮಡು,
ಶಾಸಕ, ಕಲಬುರಗಿ ಗ್ರಾಮೀಣ ಮತಕ್ಷೇತ್ರ ಶಹಾಬಾದ ತಾಲೂಕಿನಲ್ಲಿ ಮಿನಿ ವಿಧಾನಸೌಧ ನಿಮಾಣಕ್ಕೆ ಸರ್ಕಾರದಿಂದ 10 ಕೋಟಿ ರೂ. ಅನುದಾನ ಒದಗಿಸಲಾಗಿದೆ. ಈಗಾಗಲೇ ಜಾಗ ಗುರುತಿಸಿ, ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಸರ್ಕಾರದಿಂದ ಆದೇಶ ಬಂದ ತಕ್ಷಣವೇ ನಿರ್ಮಾಣಕಾಮಗಾರಿ ಕೈಗೊಳ್ಳಲಾಗುವುದು.
ಇದರಿಂದ ಒಂದೇ ಸೂರಿನಡಿ ಸಾರ್ವಜನಿಕರಿಗೆ ಅಗತ್ಯ ಸೇವೆ ನೀಡಲು ಸಾಧ್ಯವಾಗುತ್ತದೆ.
-ಸುರೇಶವರ್ಮಾ,
ತಹಶೀಲ್ದಾರ್, ಶಹಾಬಾದ