Advertisement
ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ವಾಮಮಾರ್ಗದಲ್ಲಿ ಸರ್ಕಾರ ರಚನೆ ಮಾಡಲಾಗಿದೆ. ಸರ್ಕಾರ ರಚನೆಯಾಗಿ 17 ದಿನಗಳೂ ಕಳೆದರೂ ಇನ್ನೂ ಮಂತ್ರಿಮಂಡಲ ರಚನೆ ಆಗಿಲ್ಲದೇ ಇರುವುದು ರಾಜ್ಯದ ಇತಿಹಾಸದಲ್ಲಿಯೇ ಮೊದಲು. ರಾಜ್ಯಪಾಲರು ಈ ಸಂದರ್ಭದಲ್ಲಿ ಮಧ್ಯ ಪ್ರವೇಶಿಸಿ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿದರು.
Related Articles
Advertisement
ವಿಶೇಷ ಘೋಷಣೆಗೆ ಒತ್ತಾಯ: ಮುಖ್ಯಮಂತ್ರಿ ಯಡಿಯೂರಪ್ಪಅವರಿಗೆ ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಕಂಡರೆ ಭಯ. ಹೀಗಾಗಿ ಅವರು ನೆರೆ ಸಂತ್ರಸ್ತರಿಗೆ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಕೇಂದ್ರದ ಮೇಲೆ ಒತ್ತಡ ಹೇರುತ್ತಿಲ್ಲ. ಕೇಂದ್ರ ನಾಯಕರ ಬಗ್ಗೆ ಭಯವಿದೆ ಎನ್ನುವುದನ್ನು ಯಡಿಯೂರಪ್ಪಸಾರ್ವಜನಿಕರ ಮುಂದೆ ಬಹಿರಂಗಪಡಿಸಬೇಕು. ನೆರೆ ಸಂತ್ರಸ್ಥರ ಸಹಾಯಕ್ಕೆ ಸರ್ಕಾರದ ಜೊತೆ ನಾವು ಇದ್ದೇವೆ. ಮುಖ್ಯಮಂತ್ರಿ ಶೀಘ್ರವೇ ಸರ್ವಪಕ್ಷ ನಿಯೋಗ ಕರೆದುಕೊಂಡು ಹೋಗಿ ಕೇಂದ್ರದ ಮೇಲೆ ಒತ್ತಡ ಹೇರಬೇಕು ಎಂದು ಉಗ್ರಪ್ಪ ಆಗ್ರಹಿಸಿದರು.
ರಾಷ್ಟ್ರೀಯ ವಿಪತ್ತು ಎಂದು ಘೋಷಣೆ ಮಾಡಲಿ: ಪ್ರವಾಹದಿಂದಾಗಿರುವ ನಷ್ಟದ ಬಗ್ಗೆ ಸರ್ಕಾರಕ್ಕೆ ಸರಿಯಾದ ಮಾಹಿತಿಯಿಲ್ಲ. ಕೇಂದ್ರ ಸರ್ಕಾರಕ್ಕೆ ಸಮಗ್ರ ಮಾಹಿತಿಯನ್ನೂ ನೀಡಿಲ್ಲ. ಪ್ರಧಾನಿ ಮೋದಿ ಕಾಡಿಗೆ ಯಾರಾದರೂ ಕರೆದರೆ ಹೋಗುತ್ತಾರೆ. ಆದರೆ, ರಾಜ್ಯಕ್ಕೆ ಭೇಟಿ ನೀಡುತ್ತಿಲ್ಲ. ಕರ್ನಾಟಕದ ಬಗ್ಗೆ ಪ್ರಧಾನಿ ಮೋದಿ ಅವರಿಗೆ ನಿಜವಾಗಿಯೂ ಕಳಕಳಿ ಇದ್ದರೆ ಅವರು ಕೂಡಲೇ ರಾಜ್ಯಕ್ಕೆ ಭೇಟಿ ಕೊಡಬೇಕು. ರಾಜ್ಯದಲ್ಲಿ ಒಂದು ಕಡೆ ಅತೀವೃಷ್ಟಿ ಕೆಲವು ಜಿಲ್ಲೆಗಳಲ್ಲಿ ಬರ ಪರಿಸ್ಥಿತಿ ಇರುವುದರಿಂದ ಕೂಡಲೇ ರಾಷ್ಟ್ರೀಯ ವಿಪತ್ತು ಎಂದು ಘೋಷಣೆ ಮಾಡಿ ತಕ್ಷಣವೇ ಕನಿಷ್ಠ 5 ಸಾವಿರ ಕೋಟಿ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.