Advertisement
ಬಿಜೆಪಿ-ಜೆಡಿಎಸ್ ಪಾದಯಾತ್ರೆ 4ನೇ ದಿನ ಮಂಗಳವಾರ ಮದ್ದೂರು ಪಟ್ಟಣ ತಲುಪಿದಾಗ ಶ್ರೀರಾಮ ಮಂದಿರ ಪಾರ್ಕ್ ಬಳಿ ಹಮ್ಮಿಕೊಂಡಿದ್ದ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಿ, ದಿನಬಳಕೆ ವಸ್ತುಗಳ ದರ ಏರಿಕೆಯಾಗಿದ್ದು ರೈತರಿಗೆ ಹಾಲಿನ ಪ್ರೋತ್ಸಾಹಧನ ನೀಡದೆ ಸಿದ್ದರಾಮಯ್ಯ ರೈತರ ಬಗ್ಗೆ ಮೊಸಳೆ ಕಣ್ಣೀರು ಹಾಕುತ್ತ ಜನರನ್ನು ವಂಚಿಸುತ್ತಿದ್ದಾರೆ ಎಂದರು.
ಮಂಡ್ಯ: ಮೈತ್ರಿ ಪಾದಯಾತ್ರೆಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸೇರಿ ಬಿಜೆಪಿ ಹಿರಿಯ ನಾಯಕರು ಗೈರು ಹಾಜರಾಗಿದ್ದರು. ಮಂಡ್ಯ ಜಿಲ್ಲೆಯ ಸಂಸದರಾಗಿ ಕೇಂದ್ರ ಸಚಿವರಾಗಿರುವ ಕುಮಾರಸ್ವಾಮಿ ಜಿಲ್ಲೆಯಲ್ಲಿ ನಡೆಯುವ ಪಾದಯಾತ್ರೆಗೆ ಆಗಮಿಸಲಿದ್ದಾರೆ ಎಂದು ನಿರೀಕ್ಷಿಸ ಲಾಗಿತ್ತು. ವಿಪಕ್ಷದ ನಾಯಕ ಆರ್.ಅಶೋಕ್, ಮಾಜಿ ಸಚಿವ ಹಾಗೂ ಶಾಸಕ ಡಾ| ಅಶ್ವತ್ಥನಾರಾಯಣ, ಬಿ. ಶ್ರೀರಾಮುಲು, ಕೆ.ಸಿ. ನಾರಾಯಣ ಗೌಡ ಹೊರತುಪಡಿಸಿದರೆ ಹಿರಿಯ ಬಿಜೆಪಿ ನಾಯಕರು ಭಾಗವಹಿಸಲಿಲ್ಲ.
Related Articles
ಮದ್ದೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಭ್ರಷ್ಟಾಚಾರ, ಹಗರಣ, ಅಕ್ರಮಗಳಲ್ಲಿ ಮುಳುಗಿದೆ. ಸಿದ್ದರಾಮಯ್ಯ ಅವರಿಗೆ ಕಿಂಚಿತ್ತಾದರೂ ಅಹಿಂದ ವರ್ಗದ ಮೇಲೆ ಕಾಳಜಿ ಇದ್ದರೆ ಹಾಗೂ ನೈತಿಕತೆ ಪದದ ಅರ್ಥ ಗೊತ್ತಿದ್ದರೆ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖೀಲ್ ಕುಮಾರಸ್ವಾಮಿ ಹೇಳಿದರು.
Advertisement
ಪಟ್ಟಣದಲ್ಲಿ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಿ, ವಾಲೀ¾ಕಿ, ಮುಡಾ ಹಗರಣದಲ್ಲಿ ಹಣ ಲೂಟಿ ಮಾಡಲಾಗಿದೆ. ಕನ್ನಡಿಗರ ತೆರಿಗೆ ಹಣವನ್ನು ನುಂಗಿದ್ದಾರೆ. ಅದಕ್ಕಾಗಿ ಬಿಜೆಪಿ-ಜೆಡಿಎಸ್ ಪಕ್ಷಗಳು ಮೈಸೂರು ಚಲೋ ಪಾದಯಾತ್ರೆ ಮಾಡಲಾಗುತ್ತಿದೆ ಎಂದರು.
ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಪ್ರಚಂಡ ಬಹುಮತದಿಂದ ಎಚ್.ಡಿ.ಕುಮಾರಸ್ವಾಮಿ ಗೆದ್ದು ಪ್ರಧಾನಿ ಮೋದಿ ಸಂಪುಟದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದು ಇದಕ್ಕೆ ಮದ್ದೂರು ಜನರ ಆಶೀರ್ವಾದ ಇದೆ. ಕುಮಾರಸ್ವಾಮಿ ಅವರ ಅವ ಧಿ ಪೂರೈಸುವುದರೊಳಗೆ ಜಿಲ್ಲೆಯ ಯುವಕರಿಗೆ ಹಾಗೂ ಮಹಿಳೆಯರಿಗೆ ಉದ್ಯೋಗ ಸೃಷ್ಟಿ ಮಾಡಲು ಚಿಂತನೆ ನಡೆಸುವ ಜತೆಗೆ ಜಿಲ್ಲೆಯ ಸಮಗ್ರ ಅಭಿವೃದ್ಧಿಯ ಕನಸು ಕಂಡಿದ್ದಾರೆ ಎಂದರು.