Advertisement
ವಿಧಾನಸೌಧದ ಬ್ಯಾಕ್ವೆಂಟ್ ಹಾಲ್‌ನಲ್ಲಿ ಮಂಗಳವಾರ ಆಯೋಜಿಸಿದ್ದ ಸಮಾರಂಭದಲ್ಲಿ ಕಾರ್ಮಿಕ ಇಲಾಖೆಯ ನೂತನ ಮೊಬೈಲ್ ತಂತ್ರಾಂಶ, ಕಟ್ಟಡ ಕಾರ್ಮಿಕರಿಗೆ ರಿಯಾಯಿತಿ ದರದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಪಾಸ್ ವಿತರಿಸುವ ಯೋಜನೆಗೆ ಚಾಲನೆ ನೀಡಿ ಮಾತನಾಡಿ, ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರವು ಆದ್ಯತೆ ನೀಡಿದೆ. ಕನಿಷ್ಠ ವೇತನ, ದಿನಭತ್ಯೆ, ಸಾರಿಗೆ ಭತ್ಯೆ ಮತ್ತು ನಿವೃತ್ತಿ ವೇತನವನ್ನು ನಿಗದಿತ ಸಮಯಕ್ಕೆ ನೀಡಲಾಗುತ್ತಿದೆ. ಇದೀಗ ಹೊಸ ಯೋಜನೆಯಾಗಿ ಕಟ್ಟಡ ಕಾರ್ಮಿಕರಿಗೆ ಬಸ್ ಪಾಸ್ ವಿತರಿಸಲಾಗುತ್ತಿದೆ ಎಂದು ತಿಳಿಸಿದರು.
Related Articles
Advertisement
ಕಾರ್ಯಕ್ರಮದಲ್ಲಿ ಕೈಗಾರಿಕಾ ಸಚಿವ ಮುರುಗೇಶ್ ಆರ್. ನಿರಾಣಿ, ಕೆಎಸ್‌ಆರ್‌ಟಿಸಿ ನಿಗಮ ಅಧ್ಯಕ್ಷ ಚಂದ್ರಪ್ಪ, ಕಾರ್ಮಿಕ ಇಲಾಖೆ ಆಯುಕ್ತ ಅಕ್ರಂ ಪಾಷ ಉಪಸ್ಥಿತರಿದ್ದರು.
ಬಸ್ ಪಾಸ್ ಪಡೆಯುವುದು ಹೇಗೆ? :
ಕಟ್ಟಡ ಕಾರ್ಮಿಕರಿಗೆ ರಿಯಾಯಿತಿ ದರದಲ್ಲಿ ವಿತರಿಸುತ್ತಿರುವ ಕೆಎಸ್‌ಆರ್‌ಟಿಸಿ ಬಸ್ ಪಾಸ್‌ಗಳನ್ನು ರಾಜ್ಯದಲ್ಲಿರುವ ಎಲ್ಲ ಕಟ್ಟಡ ಕಾರ್ಮಿಕರು ತಮಗೆ ಸಮೀಪವಿರುವ ಬೆಂಗಳೂರು-ಒನ್, ಕರ್ನಾಟಕ-ಒನ್ ಮತ್ತು ಗ್ರಾಮ ಒನ್ ಕಂದ್ರಗಳಲ್ಲಿ ಸೇವಾಸಿಂಧು ತಂತ್ರಾಂಶದ ಮೂಲಕ ಅರ್ಜಿ ಸಲ್ಲಿಸಿ ಪಾಸ್ ಪಡೆಯಬಹುದು. ಪಾಸ್‌ಗಳ ಅವಧಿಯು ಮೂರು ತಿಂಗಳುಗಳಾಗಿರುತ್ತದೆ. ಅವಧಿ ಮುಗಿದ ನಂತರ ಮತ್ತೆ ನವೀಕರಣ ಮಾಡಿಕೊಳ್ಳಬಹುದು. ಕಟ್ಟಡ ಕಾರ್ಮಿಕರು ತಾವು ವಾಸಿಸುತ್ತಿರುವ ಸ್ಥಳದಿಂದ 45 ಕಿಮೀ ವ್ಯಾಪ್ತಿಯಲ್ಲಿ ಉಚಿತವಾಗಿ ಪ್ರಯಾಣ ಮಾಡಲು ಅವಕಾಶ ಕಲ್ಪಿಸಿದೆ.
ಮೊಬೈಲ್ ಆ್ಯಪ್‌ನಲ್ಲಿ ನೋಂದಣಿ ಹೇಗೆ? :
ಕಾರ್ಮಿಕರ ಇಲಾಖೆ ಮತ್ತು ಅದರ ಅಧೀನದಲ್ಲಿರುವ ಇತರೆ ಮಂಡಳಿಗಳ ನೋಂದಣಿ, ನವೀಕರಣ ಹಾಗೂ ವಿವಿಧ ಸೌಲಭ್ಯಗಳನ್ನು ಪಡೆಯುವುದಕ್ಕಾಗಿ ನೂತನವಾಗಿ ಆ್ಯಪ್ ಸಿದ್ಧಪಡಿಸಲಾಗಿದೆ ಮತ್ತು ಪ್ರತ್ಯೇಕ ವೆಬ್‌ಸೈಟ್ ಲೋಕಾರ್ಪಣೆ ಮಾಡಲಾಗಿದೆ.
ಗೂಗಲ್ ಪ್ಲೇ ಸ್ಟೋರ್‌ನಲ್ಲಿ kbocwwb labour (ಕೆಬಿಒಸಿಡಬ್ಲ್ಯುಡಬ್ಲ್ಯುಬಿ ಲೇಬರ್) ಡೌನ್‌ಲೋಡ್ ಮಾಡಿಕೊಂಡು ನಂತರ ಕಟ್ಟಡ ಕಾರ್ಮಿಕರು ಮತ್ತು ಇತರೆ ಕಾರ್ಮಿಕರು ನೋಂದಣಿ ಮಾಡಿಕೊಳ್ಳಬಹುದು. ಇಲ್ಲಿಯವರೆಗೂ ಕಾರ್ಮಿಕ ಇಲಾಖೆಯಲ್ಲಿ 37 ಲಕ್ಷ ಕಾರ್ಮಿಕರು ನೋಂದಣಿ ಮಾಡಿಕೊಂಡಿದ್ದು, ಶೈಕ್ಷಣಿಕ ಸಹಾಯಧನ, ಮದುವೆ ಸಹಾಯಧನ, ವೈದ್ಯಕೀಯ ಸಹಾಯಧನ, ಪಿಂಚಣಿ ಸೌಲಭ್ಯ ಹಾಗೂ ಮಹಿಳಾ ಕಟ್ಟಡ ಕಾರ್ಮಿಕರಿಗೆ ಹೆರಿಗೆ ಸಹಾಯಧನ, ತಾಯಿ ಮಗು ಸಹಾಯಹಸ್ತ ಯೋಜನೆ ಅಡಿ ಸೌಲಭ್ಯಗಳನ್ನು ಪಡೆಯುತ್ತಿದ್ದಾರೆ.