Advertisement
ರವಿವಾರ ಬಜೆಗುಂಡಿ ಗ್ರಾಮಕ್ಕೆ ಭೇಟಿ, ಅಲ್ಲಿನ ಸಮುದಾಯ ಭವನದಲ್ಲಿ ನಡೆದ ಕಾರ್ಯ ಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಯಾರದೋ ಒತ್ತಡಕ್ಕೆ ಮಣಿದು ಹಕ್ಕುಪತ್ರ ವಿತರಿಸಲು ಕಂದಾಯ ಇಲಾಖೆ ವಿಳಂಬ ಮಾಡುತ್ತಿದೆ ಎಂದು ತಾಕೇರಿ ಸತೀಶ್, ಮಿಥುನ್, ನಂದಕುಮಾರ್ ಹೇಳಿದರು. ಇದರಿಂದ ಅಸಮಾ ಧಾನಗೊಂಡ ಸಚಿವರು, ಉಪವಿಭಾಗಾ ಧಿಕಾರಿ ಹಾಗು ತಹಸಿಲ್ದಾರ್‌ರನ್ನು ತರಾಟೆಗೆ ತೆಗೆದು ಕೊಂಡು, ವಿಳಂಬಕ್ಕೆ ಸೂಕ್ತ ಕಾರಣ ಕೊಡದಿದ್ದಾಗ, ನಾಳೆಯಿಂದಲೇ ಹಕ್ಕುಪತ್ರ ವಿತರಣೆ ಮಾಡಬೇಕು ಎಂದು ಸೂಚಿಸಿದರು.
Related Articles
Advertisement
ಈ ಮಣ್ಣಿನಲ್ಲಿ ಹುಟ್ಟಿದವನಿಗೆ ಭೂಮಿಯ ಹಕ್ಕು ಇದೆ. ಅಂತಹ ಹಕ್ಕು ಎಲ್ಲಾ ಜಾತಿ ಜನಾಂಗದವರಿಗೂ ಸಿಗಬೇಕು ಎಂಬ ಉದ್ದೇಶದಿಂದ ಸರಕಾರ ಭೂಮಿ ಹಕ್ಕು ಕಾಯ್ದೆಯನ್ನು ಜಾರಿಗೊಳಿಸಿದ್ದರೂ, ಅಧಿಕಾರಿಗಳ ಅಸಡ್ಡೆಯಿಂದ ಸಮಸ್ಯೆಯಾಗಿದೆ ಎಂದು ಸಚಿವರು ಹೇಳಿದರು.
ಕರ್ನಾಟಕ ಹಸಿವು ಮುಕ್ತ ಹಾಗು ಅಭಿವೃದ್ಧಿ ಶೀಲ ರಾಜ್ಯವನ್ನಾಗಿ ನಿರ್ಮಾಣ ಮಾಡುವ ಗುರಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರಕ್ಕಿದ್ದು, ಸರಕಾರದ ಜನಪ್ರಿಯ ಯೋಜನೆ ಗಳನ್ನು ಜನರಿಗೆ ತಲುಪಿಸುವ ಕೆಲಸವನ್ನು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮಾಡಬೇಕು ಎಂದು ಹೇಳಿದರು. ಇದೇ ಸಂದರ್ಭ ಐಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಡವಾರೆ ಹಾಗೂ ಯಡವನಾಡು ಗ್ರಾಮವನ್ನು ಕಂದಾಯ ಗ್ರಾಮವನ್ನಾಗಿ ಘೋಷಣೆ ಮಾಡಲು ಸಚಿವರು ಸರಕಾರದ ಮಟ್ಟದಲ್ಲಿ ಪರಿಹರಿಸಿ ಯಶಸ್ವಿಯಾದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಸನ್ಮಾನಿಸಿದರು.
ವೇದಿಕೆಯಲ್ಲಿ ವಿಧಾನಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ರೇಷ್ಮೆ ಮತ್ತು ತಂಬಾಕು ಮಾರಾಟ ಮಂಡಳಿ ಅಧ್ಯಕ್ಷ ಟಿ.ಪಿರಮೇಶ್, ಬೇಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭಾಗ್ಯ, ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಜೆ.ಆರ್. ಪುಷ್ಪಲತಾ ಮೊದಲಾದವರಿದ್ದರು.