Advertisement
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಈ ಕುರಿತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳೊಂದಿಗೆಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು, ಅತಿಸಾರ ಭೇದಿ ಹಾಗೂ ಒಆರ್ ಎಸ್ ದ್ರಾವಣ ತಯಾರಿಸುವ ವಿಧಾನ ಹಾಗೂ ಕುಡಿಸುವ ಪ್ರಮಾಣ, ಝಿಂಕ್ ಮಾತ್ರೆ ಪಡೆಯುವ ಬಗ್ಗೆ ಗ್ರಾಮೀಣ ಭಾಗದ ಜನರಲ್ಲಿ ಅರಿವಿನ ಕೊರತೆ ಇರುತ್ತದೆ. ಈ ಬಗ್ಗೆ ಸಂಬಂಧಿಸಿದ ಆರೋಗ್ಯ ಅಧಿಕಾರಿಗಳು ಅರಿವು ಮೂಡಿಸಬೇಕು ಎಂದು ನಿರ್ದೇಶನ ನೀಡಿದರು.
ಅಶುಚಿತ್ವದಿಂದಾಗಿ ಮಕ್ಕಳಲ್ಲಿ ಅತಿಸಾರ ಭೇದಿ ಉಂಟಾಗುತ್ತದೆ. ಆದ್ದರಿಂದ ಜಿಲ್ಲೆಯ ಪ್ರತಿ ಶಾಲೆಯಲ್ಲಿ ಕೈ ತೊಳೆದುಕೊಳ್ಳುವುದರ ಬಗ್ಗೆ ಕಾರ್ಯಕ್ರಮ ಹಾಕಿಕೊಳ್ಳಬೇಕು. ಈ ವೇಳೆ ಊಟ ತಯಾರಿಸುವುದು ಹಾಗೂ ಬಡಿಸುವ ಮುಂಚೆ ಮತ್ತು ಶೌಚದ ನಂತರ ಎರಡು ಕೈಗಳನ್ನು ಸ್ವತ್ಛವಾಗಿ ತೊಳೆದುಕೊಳ್ಳುವ ಆರು ವಿಧಾನಗಳ ಬಗ್ಗೆ ಎಲ್ಲ ಶಾಲಾ ಮಕ್ಕಳಿಗೆ ಮಾಹಿತಿ ನೀಡಬೇಕು ಎಂದು ಸೂಚಿಸಿದರು.
ನಗರಸಭೆ ಪೌರಾಯುಕ್ತ ಮನೋಹರ ಅವರಿಗೆ ಸೂಚಿಸಿದರು. ಕುಡಿಯುವ ನೀರಿನ ಟ್ಯಾಂಕ್ಗಳು ಶುಚಿತ್ವದಿಂದ ಇರುವುದು ಅತ್ಯಗತ್ಯವಾಗಿದೆ. ಆದ್ದರಿಂದ ತಾಪಂ ಕಾರ್ಯನಿರ್ವಾಹಣಾಧಿಕಾರಿಗಳು ಹಾಗೂ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳ ಸಹಾಯ ಪಡೆದು ಸ್ವತ್ಛಗೊಳಿಸಲು ಕ್ರಮ ತೆಗೆದುಕೊಳ್ಳಬೇಕು ಎಂದು ಸೂಚಿಸಿದರು.
Related Articles
ಸರಿಯಾದ ಚಿಕಿತ್ಸೆಯಾಗಿದೆ. ಮಕ್ಕಳಲ್ಲಿ ಅತಿಸಾರ ಭೇದಿ ಆದಾಗ ಕೈಗೊಳ್ಳಬೇಕಾದ ಕ್ರಮಗಳು ಹಾಗೂ ನಿಯಂತ್ರಣಕ್ಕಾಗಿ ವಹಿಸಬೇಕಾದ ಮುಂಜಾಗೃತಾ ಕ್ರಮಗಳ ಬಗ್ಗೆ ವಿವರಣೆ ನೀಡಿದರು.
Advertisement
ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ| ಆರ್. ಸೆಲ್ವಮಣಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಎಂ.ಎ. ಜಬ್ಟಾರ್ ಇದ್ದರು.