ಕೆಂಗೇರಿ: ದೇಶದ ಪ್ರಗತಿಯಲ್ಲಿ ಶಿಕ್ಷಣ ಮಹತ್ವದ ಪಾತ್ರವಹಿಸುವುದರಿಂದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರಕುವಂತಹ ಪರಿಸರವನ್ನು ನಿರ್ಮಾಣ ಮಾಡುವತ್ತ ಪ್ರತಿಯೊಬ್ಬರೂ ದೃಢ ಹೆಜ್ಜೆ ಇಡಬೇಕೆಂದು ಶಾಸಕ ಮುನಿರತ್ನ ತಿಳಿಸಿದರು.
ರಾಜರಾಜೇಶ್ವರಿ ನಗರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಪೀಣ್ಯದ ಆಶ್ರಯನಗರದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಶನಿವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ದಿನಚರಿ ಪುಸ್ತಕ, 60 ಮಕ್ಕಳಿಗೆ ಉಚಿತ ಕನ್ನಡಕ ವಿತರಿಸಿ ನಂತರ 3 ನೂತನ ಶಾಲಾ ಕೊಠಡಿಗಳ ಉದ್ಘಾಟಿಸಿ ಮಾತನಾಡಿದರು.
“ಪ್ರೌಢಶಾಲೆಯಲ್ಲಿ 865 ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದು, ಮೂರು ತಿಂಗಳಿಗೊಮ್ಮೆ ಉಚಿತ ಆರೋಗ್ಯ ತಪಾಸಣೆ, ಶಿಬಿರ ಆಯೋಜಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಡವ ವರ್ಗದ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವ ಉದ್ದೇಶದಿಂದ ಕ್ಷೇತ್ರ ವ್ಯಾಪ್ತಿಯ ಎಲ್ಲಾ ಸರ್ಕಾರಿ ಶಾಲಾ ಕಾಲೇಜುಗಳನ್ನು ಉನ್ನತೀಕರಿಸಲಾಗುತ್ತಿದೆ,’ ಎಂದರು.
“ಪ್ರಥಮ ದರ್ಜೆ ಕಾಲೇಜು, ಪ್ರೌಢಶಾಲಾ ಕಟ್ಟಡದ ಕಾಮಗಾರಿ ಪ್ರಗತಿಯಲ್ಲಿದ್ದು ಡಿಸೆಂಬರ್‌ನಲ್ಲಿ ಉದ್ಘಾಟನೆಗೊಳ್ಳಲಿದೆ. ಖಾಸಗಿ ಶಾಲೆಗಳಿಗೆ ಕಡಿಮೆಯಿಲ್ಲದಂತೆ ಎಲ್ಲಾ ಸರ್ಕಾರಿ ಶಾಲೆಗಳನ್ನು ಆಧುನಿಕ ರೀತಿಯಲ್ಲಿ ಅಭಿವೃಧಿªಪಡಿಸಲಾಗುವುದು,’ ಎಂದು ತಿಳಿಸಿದರು.
ಸಮಾರಂಭದಲ್ಲಿ ಶಾಲಾಭಿವೃಧಿªಯ ಸಮಿತಿಯ ಸದಸ್ಯ, ಸಮಾಜ ಸೇವಕ ಮಂಜುನಾಥ್, ಉಪ ಪ್ರಾಂಶುಪಾಲ ಚಂದ್ರಯ್ಯ, ಶಾಲಾಭಿವೃಧಿª ಸಮಿತಿಯ ದೊಡ್ಡ ಅರಸಪ್ಪ, ಬಿಬಿಎಂಪಿ ಸದಸ್ಯ ಜಿ. ಮೋಹನ್‌ಕುಮಾರ್, ಶಂಕರ ಆಸ್ಪತ್ರೆಯ ಡಾ. ಶಶಿಧರ್ ಮತ್ತಿತರರು ಉಪಸ್ಥಿತರಿದ್ದರು.